ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ವಿಜಯೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ

Date:

ಬಸವಕಲ್ಯಾಣದಲ್ಲಿ ಶನಿವಾರ ನಡೆದ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಬೇಡಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರೋಧಿಸಿ ಮಾತನಾಡಿದ್ದಾರೆ. ಅವರ ನಿಲುವಿನ ವಿರುದ್ಧ ಬಸವ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕ್ರಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

- Advertisement -

ಎರಡು ದಿನಗಳ ಈ ಉತ್ಸವವನ್ನು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಆರಂಭದಲ್ಲಿ ಬಸವಣ್ಣನವರ ವಿರುದ್ಧ ರವಿ ಹಂಜ್ ಮಾಡಿದ್ದಾರೆನ್ನಲಾದ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿದರು. ಬಸವಣ್ಣನವರಿಗೆ ಅಥವಾ ಸಮಾಜಕ್ಕೆ ಯಾರೇ ಅವಮಾನ ಮಾಡಿದರೂ ತಾವು ಸುಮ್ಮನಿರುವುದಿಲ್ಲ ಎಂದು ಹೇಳಿದಾಗ ಸಭಿಕರು ಚಪ್ಪಾಳೆ ತಟ್ಟಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ಅಹಿಂದ, ದಲಿತ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

ಆದರೆ, ನಂತರದ ಮಾತುಗಳಲ್ಲಿ, “ಸರ್ಕಾರದ ಸವಲತ್ತುಗಳನ್ನು ಪಡೆಯುವ ಉದ್ದೇಶದಿಂದ ಪ್ರತ್ಯೇಕ ಧರ್ಮದ ಗುರುತನ್ನು ಕೇಳಬಾರದು. ಬದಲಾಗಿ ‘ನಾವೆಲ್ಲರೂ ಹಿಂದುಗಳು ಮತ್ತು ನಾವೆಲ್ಲರೂ ಒಂದೇ’ಎಂಬ ಭಾವನೆಯೊಂದಿಗೆ ಒಗ್ಗಟ್ಟಿನಿಂದಿರಬೇಕು” ಎಂದು ಪ್ರತಿಪಾದಿಸಿದರು.

ವಿಜಯೇಂದ್ರ ಅವರ ಈ ಹೇಳಿಕೆಗೆ ಸಭೆಯಲ್ಲಿದ್ದ ಬಸವ ಭಕ್ತರು ಎದ್ದುನಿಂತು ತೀವ್ರ ಪ್ರತಿಭಟನೆ ನಡೆಸಿದರು. ಲಿಂಗಾಯತ ಧರ್ಮವನ್ನು ವಿರೋಧಿಸುವುದು ಸರಿಯಲ್ಲ ಎಂದು ಘೋಷಣೆಗಳನ್ನು ಕೂಗಿದರು. ಸಭಿಕರ ಸಾಲಿನಲ್ಲಿ ಕುಳಿತಿದ್ದ ಕೆಲವು ಸ್ವಾಮೀಜಿಗಳು, ರಾಷ್ಟ್ರೀಯ ಬಸವ ದಳ, ಭಾರತೀಯ ಬಸವ ಬಳಗ ಹಾಗೂ ಇತರ ಬಸವಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ಕೂಡ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪ್ರತ್ಯೇಕ ಧರ್ಮದ ಸ್ಥಾನಮಾನವನ್ನು ನಿರಾಕರಿಸಿದರೆ ಬಡ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳು ಹೇಗೆ ಸಿಗುತ್ತವೆ ಎಂದು ಅವರು ಪ್ರಶ್ನಿಸಿದರು.

ಈ ವೇಳೆ ಕೆಲವು ಪ್ರತಿಭಟನಾಕಾರರು ವೇದಿಕೆಯೇರಲು ಪ್ರಯತ್ನಿಸಿದಾಗ ನೂಕುನುಗ್ಗಲು ಮತ್ತು ಗದ್ದಲ ಉಂಟಾಯಿತು. ತಕ್ಷಣವೇ ಮಧ್ಯಪ್ರವೇಶಿಸಿದ ಶಾಸಕ ಶರಣು ಸಲಗರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಇತರ ಮುಖಂಡರು ಹಾಗೂ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವೇದಿಕೆ ಹತ್ತದಂತೆ ನಿಯಂತ್ರಿಸಿದರು.

ಗದ್ದಲ ತೀವ್ರಗೊಂಡಾಗ ಮಧ್ಯಪ್ರವೇಶಿಸಿದ ಲಿಂಗಾಯತ ಮಠಾಧೀಶರ ಒಕ್ಕೂಟದ ರಾಜ್ಯಾಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಶಾಂತಿ ಕಾಪಾಡುವಂತೆ ಸಭಿಕರಲ್ಲಿ ಮನವಿ ಮಾಡಿದರು. ವಿಜಯೇಂದ್ರ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಯಾರ ವಿರುದ್ಧವೂ ಘೋಷಣೆ ಕೂಗುವುದು ಸರಿಯಲ್ಲ ಎಂದು ಹೇಳಿದರು. ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಒಕ್ಕೂಟದ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿರುವುದನ್ನು ಗಮನಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಮುಖಂಡರು ಸ್ಥಳದಿಂದ ತೆರಳುವಂತೆ ವಿಜಯೇಂದ್ರ ಅವರಿಗೆ ಸಲಹೆ ನೀಡಿದರು. ಅದರಂತೆ ವಿಜಯೇಂದ್ರ ಅವರು ವೇದಿಕೆಯಿಂದ ನಿರ್ಗಮಿಸಿದರು. ಈ ಸಂದರ್ಭದಲ್ಲಿ ಬಸವ ಭಕ್ತರು ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿ ಘೋಷಣೆಗಳನ್ನು ಕೂಗಿದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...

ಡಿಲಿಮಿಟೇಶನ್ | ‘ಸಹೋದರ’ ಸ್ಟಾಲಿನ್ ಮನವೊಲಿಕೆಗೆ ಮುಂದಾದ ರಾಹುಲ್ ಗಾಂಧಿ; ದೃಢ ನಿರ್ಧಾರ ಪ್ರಕಟಿಸಿದ ಡಿಎಂಕೆ ನಾಯಕ!

ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ ಡಿಎಂಕೆ...

BREAKING NEWS | ಗೌರವಧನ ಹೆಚ್ಚಳಕ್ಕೆ ಸರ್ಕಾರದ ಲಿಖಿತ ಆದೇಶ: 13 ದಿನಗಳ ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ...

ಬಾಗಲಕೋಟೆ | ಸರ್ವರ್‌ ಸಮಸ್ಯೆ : ಪಡಿತರಕ್ಕಾಗಿ ನಡುರಾತ್ರಿವರೆಗೂ ಕಾದ ಗ್ರಾಮಸ್ಥರು

ಬಡ ಕುಟುಂಬಗಳಿಗೆ ಸಿಗಬೇಕಾದ ಪಡಿತರ ಪಡೆಯುವುದೇ ಗ್ರಾಮಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ....