ಸಾರ್ವತ್ರಿಕ ಲೋಕಸಭಾ ಚುನಾವಣೆ – 2024ರ ಮತದಾನ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ನಡೆಯಲಿದ್ದು, ಜಗತ್ತಿನ ಅತಿದೊಡ್ಡ ಪ್ರಜಾಪಭುತ್ವ ದೇಶವಾಗಿರುವ ಭಾರತದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬ’ದಂತೆ ಆಚರಿಸಲಾಗುತ್ತಿದೆ.
ಕಳೆದ ಲೋಕಸಭಾ ಚುನಾವಣೆ – 2019 ಹಾಗೂ ಸಾರ್ವತ್ರಿಕ ಕರ್ನಾಟಕ ವಿಧಾನಸಭೆ ಚುನಾವಣೆ-2023 ರ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿರ್ವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯಮಟ್ಟದ ಛಾಯಾ ಚಿತ್ರಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಕಳೆದ ಎರಡು ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಭಾರತ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.
This video cannot be played in your browser. Open the video directly
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು, ಹವ್ಯಾಸಿ ಛಾಯಾಗ್ರಾಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್, ಮನೆವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : [email protected] ಸಲ್ಲಿಸುವಂತೆ ಚುನಾವಣಾ ಆಯೋಗ ತಿಳಿಸಿದೆ.
ಫೋಟೋಗಳನ್ನು ಮೇ 15, 2024ರ ಬುಧವಾರ ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಲು ಆಯೋಗ ತಿಳಿಸಿದೆ.
ಬಹುಮಾನಗಳ ವಿವರ ಹೀಗಿದೆ:
- ಪ್ರಥಮ ಬಹುಮಾನ: ₹25,000
- ದ್ವಿತೀಯ ಬಹುಮಾನ: ₹15,000
- ತೃತೀಯ ಬಹುಮಾನ: ₹10,000
- ಸಮಾಧಾನಕರ ಬಹುಮಾನ: ₹6,000
- ವಿಶೇಷ ಬಹುಮಾನ : ₹5,000/-





