ಉಪಲೋಕಾಯುಕ್ತ ನ್ಯಾಯಮೂರ್ತಿ ಬೇಲೂರು ಗ್ರಾಮ ಪಂಚಾಯಿತಿಗೆ ದಿಢೀರ್‌ ಭೇಟಿ, ಕಡತ ಪರಿಶೀಲನೆ

Date:

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮ ಪಂಚಾಯಿತಿಗೆ ದಿಢೀರ್‌ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿ ಕರ್ತವ್ಯ ಲೋಪ ಕಂಡುಬಂದಾಗ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಈ ಸಂದರ್ಭದಲ್ಲಿ ಇ ಖಾತಾ ವಿತರಣೆ, ಅನುದಾನ ಬಳಕೆ, ಇ ಸ್ವತ್ತು ಹಾಗೂ ಇತರೆ ದಾಖಲಾತಿಗಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ. ಜೆ. ಶೋಭಾರಾಣಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಜನರು ಸಂಕಷ್ಟದಲ್ಲಿರುವಾಗ ರೋಮ್‌ನಲ್ಲಿ ಮಿಠಾಯಿ ಹಂಚಿ ರೀಲ್ಸ್‌ ಮಾಡುತ್ತಿರುವ ಪಿಎಂ ಮೋದಿ: ರಾಹುಲ್ ಗಾಂಧಿ

ಮತ್ತೊಂದೆಡೆ, ರಾಜ್ಯದ ಇತರೆಡೆಗಳಲ್ಲೂ ಲೋಕಾಯುಕ್ತರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೆಳಗಾವಿಯಲ್ಲಿ ಬರೋಬ್ಬರಿ 23.35 ಕೋಟಿ ರೂ. ಮೊತ್ತದ ಬೃಹತ್ ವಸತಿ ಹಗರಣವೊಂದನ್ನು ಬಯಲಿಗೆಳೆದಿದ್ದಾರೆ. ‘ಪ್ರಧಾನಮಂತ್ರಿ ಆವಾಸ್‌ ಯೋಜನೆ’ಯಡಿ ರಾಮದುರ್ಗ ಪಟ್ಟಣದ ಕೊಳೆಗೇರಿಯಲ್ಲಿ 600 ಮನೆಗಳನ್ನು ನಿರ್ಮಿಸಲಾಗಿದೆ ಎಂದು ಖೊಟ್ಟಿ ದಾಖಲೆ ಸೃಷ್ಟಿಸಿ ಹಣ ಲಪಟಾಯಿಸಿದ ಆರೋಪದ ಮೇಲೆ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಚೇರಿ, ನಿವೃತ್ತ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹಾಗೂ ಗುತ್ತಿಗೆದಾರರ ಮನೆಗಳ ಮೇಲೆ ಲೋಕಾಯುಕ್ತರು ಭರ್ಜರಿ ದಾಳಿ ನಡೆಸಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರು, ವಿಜಯಪುರ ಹಾಗೂ ಬಾಗಲಕೋಟೆಯಲ್ಲಿರುವ ಅಧಿಕಾರಿಗಳ ಮತ್ತು ಗುತ್ತಿಗೆದಾರರ ನಿವಾಸಗಳ ಮೇಲೆ ಏಕಕಾಲಕ್ಕೆ ನಡೆದ ಈ ತಪಾಸಣೆ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. 2019ರಿಂದ 2024ರವರೆಗೆ ಯಾವುದೇ ನೈಜ ಕಾಮಗಾರಿ ಮಾಡದೇ, ಜಿಪಿಎಸ್‌ ಕೂಡ ಇಲ್ಲದೆ ಕೇವಲ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮಂಜೂರು ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...