ಆದಾಯಕ್ಕಿಂತ ಅಧಿಕ ಆಸ್ತಿ; ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Date:

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ.

- Advertisement -

ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ, ಹಾಸನ, ಚಿತ್ರದುರ್ಗ ಸೇರಿದಂತೆ ಒಟ್ಟಾಗಿ 56 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯಕ್ತ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಒಟ್ಟಾಗಿ ಒಂಬತ್ತು ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು ಈ ಕಾರ್ಯಾಚರಣೆಯಲ್ಲಿ ಸುಮಾರು 100ರಷ್ಟು ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಲೋಕಾಯುಕ್ತ ದಾಳಿ ನಡೆಸಿದ ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್‌ ಎಫ್‌ಐಆರ್‌ ದಾಖಲಿಸಿದ್ದಾರೆ. ಬಳಿಕ ಶೋಧ ಕಾರ್ಯಾಚರಣೆ ವಾರೆಂಟ್ ಪಡೆದು ಸದ್ಯ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ?  ವಾಲ್ಮೀಕಿ ನಿಗಮ ಅಕ್ರಮ | ಇಡಿ ದಾಳಿ, ಬಿ.ನಾಗೇಂದ್ರ ಮತ್ತು ಆಪ್ತರನ್ನು ವಶಕ್ಕೆ ಪಡೆದ ಅಧಿಕಾರಿಗಳು

ಬಿಬಿಎಂಪಿ ಕೆಂಗೇರಿ ವಲಯದ ಕಂದಾಯ ಅಧಿಕಾರಿ ಬಸವರಾಜ ಮಾಗಿ, ಹಾಸನದ ಗ್ರಾಮ ಪಂಚಾಯಿತಿಯೊಂದರ ಗ್ರೇಡ್‌-1 ಕಾರ್ಯದರ್ಶಿ ಎನ್‌.ಎಂ. ಜಗದೀಶ್‌, ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮಹದೇವ್‌ ಬೆನ್ನೂರು, ದಾವಣಗೆರೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಡಿ.ಎಚ್‌. ಉಮೇಶ್‌, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಎಂ.ಎಸ್‌. ಪ್ರಭಾಕರ ಮನೆ, ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಲಾಗಿದೆ.

ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ್‌ ಗೌಡ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್‌ ಶಿವರಾಜು ಎಸ್‌., ಜಲ ಸಂಪನ್ಮೂಲ ಇಲಾಖೆಯ ಮೈಸೂರು ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಮಹೇಶ್‌ ಕೆ., ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಕೆ.ಜಿ. ಜಗದೀಶ್‌, ಕೋಲಾರದ ತಹಶೀಲ್ದಾರ್‌ ವಿಜಯಣ್ಣ, ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್‌ ಎಂ.ರವೀಂದ್ರ ಅವರ ಮನೆ, ಇತರೆ ಆಸ್ತಿಗಳ ಮೇಲೆ ದಾಳಿಯಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...