ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

Date:

ರಾಜ್ಯ ಲೋಕಾಯುಕ್ತ ಪೊಲೀಸರು ಇಂದು ಮುಂಜಾನೆ ರಾಜ್ಯದಾದ್ಯಂತ ವ್ಯಾಪಕ ದಾಳಿ ನಡೆಸಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ 12 ಸರ್ಕಾರಿ ಅಧಿಕಾರಿಗಳ ಮನೆಗಳು, ಕಚೇರಿಗಳು ಮತ್ತು ಸಂಬಂಧಿತ ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

ಬೆಂಗಳೂರು ಸೇರಿದಂತೆ ಹಾವೇರಿ, ದಾವಣಗೆರೆ, ಹಾಸನ, ಚಿತ್ರದುರ್ಗ, ಬಾಗಲಕೋಟೆ, ಕಲಬುರಗಿ, ಬೀದರ್ ಮತ್ತು ಇತರ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಈ ಅಧಿಕಾರಿಗಳು ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರ ವಿರುದ್ಧ ಸಲ್ಲಿಕೆಯಾಗಿರುವ ದೂರುಗಳ ಆಧಾರದ ಮೇಲೆ ಈ ಕಾರ್ಯಾಚರಣೆ ಆರಂಭಿಸಲಾಗಿದೆ. ದಾಳಿಯ ಸಂದರ್ಭದಲ್ಲಿ ಹಲವು ಸ್ಥಳಗಳಲ್ಲಿ ನಗದು, ಚಿನ್ನಾಭರಣಗಳು, ದಾಖಲೆಗಳು ಮತ್ತು ಆಸ್ತಿ ಸಂಬಂಧಿತ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಮಾತ್ರ ಇಬ್ಬರು ಹಿರಿಯ ಅಧಿಕಾರಿಗಳ ಮನೆಯಿಂದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ.

ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೀದರ್‌ನಲ್ಲಿ‌ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಲಾಗಿದೆ.

ಬೀದರ್ ನಗರದ ಗುರುನಾನಕ್ ಕಾಲೋನಿಯ ನಿವಾಸ, ಭಾಲ್ಕಿಯ ಕಡ್ಯಾಳ ಗ್ರಾಮದ ನಿವಾಸ, ಔರಾದ್‌ನ ಎಡಿ ಆಫೀಸ್ ಮತ್ತು ಔರಾದ್‌ನ ಮುದೋಳ ಕಚೇರಿ ಮೇಲೆ ದಾಳಿ‌‌ ಮಾಡಲಾಗಿದೆ‌.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಎರಡು ಸಂವೇದನಾಶೀಲ ನಿರ್ಧಾರಕ್ಕೆ ಅಭಿನಂದನೆಗಳು

ದಾಳಿಗೊಳಗಾದ ಅಧಿಕಾರಿಗಳಲ್ಲಿ ಪ್ರಮುಖರಾಗಿ ಉಲ್ಲೇಖಿಸಲಾಗಿರುವವರು: ಬೆಂಗಳೂರು ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಎನ್. ರಾಮಚಂದ್ರ, ಹಾಸನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಪ್ರಕಾಶ್, ದಾವಣಗೆರೆಯ ಕಂದಾಯ ಇಲಾಖೆಯ ತಹಶೀಲ್ದಾರ್ ವೈ. ಲಕ್ಷ್ಮೀದೇವಿ ಸೇರಿದಂತೆ ಇತರರು.

ಲೋಕಾಯುಕ್ತ ಮುಖ್ಯಸ್ಥರಾದ ಡಿವೈಎಸ್‌ಪಿ ರವೀಂದ್ರನಾಥ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, “ಈ ದಾಳಿಗಳು ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಮಟ್ಟಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ. ನಾವು ಸಂಗ್ರಹಿಸಿರುವ ದಾಖಲೆಗಳನ್ನು ವಿಶ್ಲೇಷಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಈ ವರ್ಷದಲ್ಲಿ ಇದುವರೆಗೆ ಲೋಕಾಯುಕ್ತ ನಡೆಸಿರುವ ದಾಳಿಗಳ ಸಂಖ್ಯೆ 50ಕ್ಕೂ ಅಧಿಕವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....