ಹಲವು ಸರ್ಕಾರಿ ಅಧಿಕಾರಿಗಳ ಮೇಲೆ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ

Date:

ರಾಜ್ಯದ ನಾನಾ ಭಾಗಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಹಲವಾರು ಸರ್ಕಾರಿ ಅಧಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸುತ್ತಿದ್ದಾರೆ.

ಹಲವಾರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ.

ಹಾಸನ ಜಿಲ್ಲೆಯ ಆಹಾರ ನೀರಿಕ್ಷಕರ ಜಗನ್ನಾಥ್ ಅವರ ನಿವಾಸ ಮತ್ತು ಅವರ ಸಹೋದರ, ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಎಸ್‌ಐ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಹಲವಾರು ಕಡತಗಳನ್ನು ಪರಿಶೀಲನೆ ನಡೆಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೈಸೂರಿನ ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಮೈಸೂರಿನ ವಿಜಯನಗರ, ಜೆ.ಪಿ ನಗರದಲ್ಲಿರುವ ಅವರ ಅಪಾರ್ಟ್‌ಮೆಂಟ್‌ಗಳಲ್ಲಿ ಪರಿಶೀಲನೆ ನಡೆಸಿದೆ. ಅಲ್ಲದೆ, ಕೆ.ಆರ್‌ ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ಞೇಂದ್ರ ಅವರ ಸಹೋದರನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ನಿವಾಸ, ಕಚೇರಿ ಹಾಗೂ ಅವರ ಸಂಬಂಧಿಗಳ ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಅವರ ಮನೆ ಮೇಲೂ ದಾಳಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ‌ ನಡೆದಿದೆ. ಇನ್ನು, ತುಮಕೂರಿನ ಶಿರಾ ಗೇಟ್ ಬಳಿಯಿರುವ ಕೆಆರ್‌ಡಿಎಲ್‌ ಇಂಜಿನಿಯರ್​ ಹನುಮಂತರಾಯಪ್ಪ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶಕ್ಕೆ ಮಣಿದು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...