ಮೂರು ದಿನದಿಂದ ನಡೆಯುತ್ತಿದ್ದ ಲಾರಿ ಮುಷ್ಕರ ವಾಪಸ್

Date:

ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡುವಂತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮೂರು ದಿನದಿಂದ ನಡೆಸುತ್ತಿದ್ದ ಲಾರಿ ಮಾಲೀಕರ ಸಂಘ ತನ್ನ ಮುಷ್ಕರವನ್ನು ವಾಪಸ್ ಪಡೆದಿದೆ.

- Advertisement -

ಏಪ್ರಿಲ್ 14ರ ರಾತ್ರಿಯಿಂದ ಲಾರಿ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ಸಂಘ ಕರೆ ನೀಡಿತ್ತು. “ಸಾರಿಗೆ ಸಚಿವರು, ಮುಖ್ಯಮಂತ್ರಿಯವರು ಎರಡು ಬಾರಿ ಮಾತುಕತೆ ನಡೆಸಿದ್ದರೂ ನಮ್ಮ ಬೇಡಿಕೆ ಈಡೇರಿಲ್ಲ. ಡೀಸೆಲ್ ದರ ಇಳಿಸುವವರೆಗೆ ಮುಷ್ಕರ ಕೈಬಿಡುವುದಿಲ್ಲ” ಎಂದು ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘದ ಅಧ್ಯಕ್ಷ ಜಿ.ಆ‌ರ್. ಷಣ್ಮುಖಪ್ಪ ಸ್ಪಷ್ಟಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಆರಂಭಿಸಿದ್ದ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘದ ಪದಾಧಿಕಾರಿಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಏ.15ರಂದುಎರಡು ಸುತ್ತಿನ ಸಂಧಾನ ಸಭೆ ನಡೆಸಿದ್ದರು. ಆಗಲೂ ಸಭೆ ಸಫಲವಾಗಿರಲಿಲ್ಲ.

ಗುರುವಾರ ಸಚಿವ ರಾಮಲಿಂಗಾರೆಡ್ಡಿ ನಡೆಸಿದ ಮೂರನೇ ಸಂಧಾನ ಸಭೆ ಯಶಸ್ವಿಯಾಗಿದೆ. ಹೀಗಾಗಿ ಲಾರಿ ಮುಷ್ಕರ ವಾಪಾಸ್ಸು ಪಡೆಯುವಂತಹ ನಿರ್ಧಾರವನ್ನು ಲಾರಿ ಮಾಲೀಕರ ಸಂಘ ತೆಗೆದುಕೊಂಡಿದೆ. “ನಮ್ಮ ಎಲ್ಲ ಬೇಡಿಕೆ ಈಡೇರಿಸುವ ಭರವಸೆಯನ್ನು ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಈ ಕ್ಷಣದಿಂದಲೇ ಲಾರಿ ಮುಷ್ಕರ ವಾಪಸ್ ಪಡೆಯುತ್ತೇವೆ” ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...