ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ, ರಾಜ್ಯದಲ್ಲಿ ಎಷ್ಟು?

Date:

Advertisements

ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 1, 2025ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಇಳಿಕೆ ಮಾಡಿವೆ. 19 ಕೆಜಿ ವಾಣಿಜ್ಯ ಸಿಲಿಂಡರ್ ದರದಲ್ಲಿ 51.50 ರೂ. ಕಡಿತಗೊಳಿಸಲಾಗಿದೆ.

ಈ ಪರಿಷ್ಕೃತ ದರವು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಹಾಗೂ ಇತರ ವಾಣಿಜ್ಯ ಸಂಸ್ಥೆಗಳಿಗೆ ಅನುಕೂಲವಾಗಲಿದೆ. ಬೆಲೆ ಇಳಿಕೆಯ ನಂತರ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ನ ದರವು 1,653 ರೂ. ಆಗಿದ್ದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1,580 ರೂ. ಆಗಿದೆ.

ಬಹುತೇಕ ಜನರು ನಿರೀಕ್ಷಿಸಿದ್ದಂತೆ ಗೃಹಬಳಕೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ನಿರ್ಧಾರವು ಗೃಹಬಳಕೆದಾರರಿಗೆ ನಿರಾಸೆ ಮೂಡಿಸಿದೆ.

ಗಣೇಶ ಚತುರ್ಥಿಗೂ ಮೊದಲೇ ಅಂದರೆ ಆಗಸ್ಟ್‌ 1ರಂದು ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿತ್ತು. ಹಾಗೆಯೇ ಇದೀಗ ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ದರ ಇಳಿಕೆಯಾಗಿದೆ. ಕರ್ನಾಟಕದ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್​ಪಿಜಿ ಗ್ಯಾಸ್‌ ಸಿಲಿಂಡರ್ ದರ 51.50 ರೂಪಾಯಿ ಇಳಿಕೆಯೊಂದಿಗೆ 1,653 ರೂಪಾಯಿ ಆಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

Download Eedina App Android / iOS

X