LPG ಕೊರತೆ : ರಾಜಧಾನಿಯಲ್ಲಿ ಹೋಟೆಲ್ ಮಾರಾಟಕ್ಕೆ ಮುಂದಾದ ಮಾಲೀಕರು!  

Date:

ಅಮೇರಿಕ ಇಸ್ರೇಲ್‌ ಹಾಗೂ ಇರಾನ್‌ ಯುದ್ದದ ಕಾರಣದಿಂದಾಗಿ ಜಾಗತಿಕ ಮಟ್ಟದಲ್ಲಿ ದೊಡ್ಡ ಪರಿಣಾಮ ಬೀರುತ್ತಿದೆ. ಇದು ಈಗ ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮದ ಮೇಲೂ ಗಂಭೀರವಾಗಿ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕಮರ್ಷಿಯಲ್ LPG ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು ಬೆಲೆ ಏರಿಕೆಯಿಂದ ಸಣ್ಣ ಹಾಗೂ ಮಧ್ಯಮ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

- Advertisement -

ನಗರದಲ್ಲಿ ಸುಮಾರು 20 ರಿಂದ 25 ಹೋಟೆಲ್‌ಗಳು ಈಗಾಗಲೇ ಮಾರಾಟಕ್ಕೆ ಬಂದಿದ್ದು, ಇನ್ನೂ ಅನೇಕ ಹೋಟೆಲ್‌ಗಳು ಮಾರಾಟದ ಆಲೋಚನೆಯಲ್ಲಿ ಇರುವುದಾಗಿ ತಿಳಿದು ಬಂದಿದೆ. ಕಮರ್ಷಿಯಲ್ ಸಿಲಿಂಡರ್ ಸಿಗದ ಹಿನ್ನೆಲೆ ಹೋಟೆಲ್ ನಡೆಸುವುದು ಕಷ್ಟಕರವಾಗಿದ್ದು, ಇದರಿಂದ ಆರ್ಥಿಕ ನಷ್ಟ ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹೋಟೆಲ್ ಮಾಲೀಕರು ಹೇಳುವಂತೆ, ಬಾಡಿಗೆ ದುಬಾರಿ ಆಗಿದ್ದು, ಆದಾಯ ಕಡಿಮೆಯಾಗಿರುವುದರಿಂದ ಬಾಡಿಗೆ ಕಟ್ಟುವುದೇ ಸವಾಲಾಗಿದೆ. ಇನ್ನೊಂದೆಡೆ, ಗ್ಯಾಸ್ ಕೊರತೆಯಿಂದ ಸಂಪೂರ್ಣ ಮೆನು ನೀಡಲು ಸಾಧ್ಯವಾಗದೆ, ಹಲವೆಡೆ ದೋಸೆ ಕೌಂಟರ್‌ಗಳನ್ನೇ ಬಂದ್ ಮಾಡಲಾಗಿದೆ. ಇದರ ಪರಿಣಾಮವಾಗಿ ಗ್ರಾಹಕರ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿದ್ದು, ವ್ಯಾಪಾರವೂ ಕೂಡ  ಕಡಿಮೆ ಆಗಿದೆ.

ವ್ಯಾಪಾರ ಕುಸಿತದಿಂದ ಹಲವಾರು ಹೋಟೆಲ್‌ಗಳಲ್ಲಿ ಕೆಲಸದ ಕೊರತೆ ಉಂಟಾಗಿ, ಸಿಬ್ಬಂದಿಗಳು ತಮ್ಮ ಊರುಗಳಿಗೆ ತೆರಳುತ್ತಿರುವ ದೃಶ್ಯವೂ ಕಾಣಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಹಲವಾರು ಹೋಟೆಲ್‌ಗಳು ಮುಚ್ಚುವ ಹಂತಕ್ಕೇ ಬಂದಿವೆ.

ಈ ಕುರಿತು ಬೆಂಗಳೂರು ನಗರ ಹೋಟೆಲ್ ಮಾಲೀಕರ ಸಂಘದ ಗೌರವ ಅಧ್ಯಕ್ಷ ಪಿಸಿ ರಾವ್ ಪ್ರತಿಕ್ರಿಯಿಸಿ, “ಕಮರ್ಷಿಯಲ್ ಸಿಲಿಂಡರ್‌ಗಳ ಕೊರತೆ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಇನ್ನಷ್ಟು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ಇದೆ” ಎಂದು ತಿಳಿಸಿದ್ದಾರೆ.

ಒಟ್ಟಾರೆ, ರಾಜಧಾನಿಯಲ್ಲಿ ಹೋಟೆಲ್ ಉದ್ಯಮ ಗಂಭೀರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸುವ ಅಗತ್ಯವಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...