ಮದ್ದೂರು ಗಲಭೆ | ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿದ್ದರಾಮಯ್ಯ ಕಿಡಿ

Date:

ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್ ಎಸ್ ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡಲಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದರು. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತುವುದಿಲ್ಲ

ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ” ಎಂದು ಕುಟುಕಿದರು.

ಎಂಎಲ್‌ಸಿಗಳಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ

“ಇಂದು ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. .ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ ಸಿ ಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್‌ಸಿ ಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...