ಕಾರಜೋಳ ಮೇಲೆ ಹಲ್ಲೆ ಯತ್ನದ ಹಿಂದೆ ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಕೈವಾಡ: ಪಿ ರಾಜೀವ್ ಆರೋಪ

Date:

ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಚಿತ್ರದುರ್ಗದಲ್ಲಿ ಹಲ್ಲೆಗೆ ಪ್ರಯತ್ನ ಮಾಡಿದ್ದನ್ನು ತೀವ್ರವಾಗಿ ಖಂಡಿಸುವೆ. ಕಾರಜೋಳರವರ ಮೇಲೆ ಹಲ್ಲೆ ನಡೆಸಲು ದುಷ್ಪ್ರೇರಣೆ ಮಾಡಿ, ಒಳಸಂಚನ್ನು ಮಾಡಿರುವುದರಲ್ಲಿ ಡಾ.ಎಚ್.ಸಿ.ಮಹದೇವಪ್ಪ ಮತ್ತು ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ ಆರೋಪಿಸಿದರು.

- Advertisement -

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ದಲಿತರಿಗೆ ಮೀಸಲಿಟ್ಟ ಹಣವನ್ನು ಈ ಸರಕಾರ ದುರ್ಬಳಕೆ ಮಾಡಿದೆ. ಇದು ದಲಿತ ಸಮುದಾಯಗಳಿಗೆ ಅರ್ಥ ಆದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ಆಗುವ ಭಯ ಸರಕಾರ, ಕಾಂಗ್ರೆಸ್ಸನ್ನು ಕಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

“ದಲಿತರಿಗೆ ಈ ವಿಚಾರ ಗೊತ್ತಾಗಬಾರದು; ಯಾರೂ ಇದನ್ನು ತಿಳಿಸಬಾರದೆಂಬ ದುರುದ್ದೇಶದೊಂದಿಗೆ ಕಾಂಗ್ರೆಸ್ ಪಕ್ಷವು ಕಾರಜೋಳರ ಮೇಲೆ ಹಲ್ಲೆಗೆ ಪ್ರೇರಣೆ ಕೊಟ್ಟಿದೆ. ತೆರೆಮರೆಯ ಕೆಲಸ ಮಾಡಿದೆ. ಗೃಹಜ್ಯೋತಿ ಯೋಜನೆಯಡಿ ಎಸ್‍ಇಪಿಟಿಎಸ್‍ಪಿಯಡಿ 2,400 ಕೋಟಿ ಇಟ್ಟಿದ್ದಾರೆ. ಅದೇರೀತಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯಡಿ 2,800 ಕೋಟಿ ಇಟ್ಟಿದ್ದಾರೆ. ಈ 2,800 ಕೋಟಿ ಹಣದಲ್ಲಿ ಶೇ 90 ದಲಿತರಿಗೆ ಪ್ರಯೋಜನ ಸಿಗುತ್ತದೆ. ಹಾಗಿದ್ದರೆ 2400 ಕೋಟಿಯನ್ನು ಮತ್ತೆ ಇಟ್ಟಿದ್ಯಾಕೆ” ಎಂದು ಪ್ರಶ್ನಿಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಇದೆಲ್ಲವೂ ದಲಿತ ಸಮುದಾಯ, ದಲಿತ ಮುಖಂಡರಿಗೆ ತಿಳಿದರೆ ಈ ಸರಕಾರವು ಸುಮಾರು 10 ಸಾವಿರ ಕೋಟಿ ಹಣವನ್ನು ದಲಿತ ಸಮುದಾಯಕ್ಕಾಗಿ ಮತ್ತೆ ಕೊಡಬೇಕಾಗುತ್ತದೆ. ಅದೇ ಭಯ ಸಿದ್ದರಾಮಯ್ಯರನ್ನೂ ಕಾಡುತ್ತಿದೆ. ದಲಿತರು ಜಾಗೃತ ಆಗಬಾರದು. ಈ ಸಂಬಂಧ ತಿಳಿವಳಿಕೆ ಕೊಡುವ ಕೆಲಸವನ್ನು ಮಾಡಬಾರದೆಂಬ ಉದ್ದೇಶದಿಂದ ಭಯ ಹುಟ್ಟಿಸಲು ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ಸಮುದಾಯದ ದೊಡ್ಡ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಹಲ್ಲೆ ಮಾಡಿ, ಆ ಮೂಲಕ ದಲಿತ ಜಾಗೃತ ಮನಸ್ಸುಗಳಿಗೆ ಸಂದೇಶ ಕೊಡಲು ಹೊರಟಿದ್ದರು” ಎಂದು ವಿಶ್ಲೇಷಿಸಿದರು.

“ಸದನದಲ್ಲಿ ಮಹದೇವಪ್ಪ ಅವರು ದಲಿತರ ದಾರಿತಪ್ಪಿಸುವ ಉತ್ತರ ಕೊಟ್ಟಿದ್ದಾರೆ. 11 ಸಾವಿರ ಕೋಟಿ ಹಣವನ್ನು ದಲಿತರಿಗಾಗಿ ಬಳಸುವಂತಾಗಲು ತೀವ್ರತರದ ಹೋರಾಟ ಮಾಡುತ್ತೇವೆ. ದಲಿತ ಮುಖಂಡರು, ದಲಿತ ಸಂಘಟನೆಗಳು, ದಲಿತ ಶಾಸಕರಿಗೆ ಮಾಹಿತಿ, ಅಂಕಿ ಸಂಖ್ಯೆ ಕೊಟ್ಟು ಸರಕಾರ ಮಾಡಿದ ಅನ್ಯಾಯದ ವಿವರ ನೀಡಿ ಆಂದೋಲನ ರೂಪಿಸಲಿದ್ದೇವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...