ಅಲೆಮಾರಿ ಸಮುದಾಯಗಳಿಗೆ ಮೀಸಲಾತಿ ಭರವಸೆ, ಧರಣಿ ಸತ್ಯಾಗ್ರಹ ಕೈಬಿಟ್ಟ ಮಹಾಒಕ್ಕೂಟ

Date:

ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಶೇ.1ರಷ್ಟು ಮೀಸಲಾತಿ ಕಲ್ಪಿಸಲು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ ಧರಣಿ ಸತ್ಯಾಗ್ರಹವನ್ನು ಇಂದಿಗೆ ಹಿಂಪಡೆದಿದೆ.

- Advertisement -

ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿತು. ಸಮುದಾಯದ ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ಶಿಫಾರಸಿನಂತೆ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇ.1ರಷ್ಟು ಮೀಸಲಾತಿ ಕಲ್ಪಿಸಲು ಆದ್ಯತೆ ನೀಡುವಂತೆ , ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ರಚನೆ  ಹಾಗೂ ಅಲೆಮಾರಿ ಸಮುದಾಯಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವ ಕುರಿತಂತೆ ಮುಖ್ಯಮಂತ್ರಿ ಅವರಲ್ಲಿ ನಿಯೋಗ ಮನವಿ ಮಾಡಿತು.

ಸಭೆಯಲ್ಲಿ ಹಾಜರಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, “ಖಂಡಿತವಾಗಿಯೂ ನಿಮ್ಮ ಆತಂಕವನ್ನು ಗಮನದಲ್ಲಿಟ್ಟುಕೊಂಡು ನೇಮಕಾತಿಗಿಂತ ಮೊದಲೇ ಸಮಸ್ಯೆ ಬಗೆಹರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ” ಎಂದು ತಿಳಿಸಿದರು.

“ದಯವಿಟ್ಟು ಸರ್ಕಾರದ ಮೇಲೆ ವಿಶ್ವಾಸವಿಡಿ, ಹೈಕೋರ್ಟ್‌ನಲ್ಲಿ ಹಾಕಿರುವ ಮೊಕದ್ದಮೆ ವಾಪಸ್ ಪಡೆದುಕೊಳ್ಳಿ, ನಾವು ಖಂಡಿತವಾಗಿಯೂ ಸಮುದಾಯವನ್ನು ಕೈ ಬಿಡದೆ ಸಮಸ್ಯೆ ಬಗೆಹರಿಸುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

“ನಾವು ಇದನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ ಸರ್. ಆದರೆ ಸರ್ಕಾರದಿಂದ ನಮಗೆ ಸ್ಪಷ್ಟವಾದ ಖಚಿತವಾದ ಆದೇಶ ಬರಬೇಕು. ಅಲ್ಲಿಯತನಕ ನೀವು ಯಾವುದೇ ರೀತಿಯ ಉದ್ಯೋಗ ಭರ್ತಿ ಮಾಡಬಾರದು” ಎಂದು ಹೋರಾಟಗಾರರು ತಿಳಿಸಿದರು. ಇದರೊಂದಿಗೆ ಸಭೆ ಮುಕ್ತಾಯವಾಯಿತು.

“ಕೋರ್ಟ್‌ನಲ್ಲಿ ಈ ಪ್ರಕರಣವನ್ನು ಹಿಂಪಡೆದುಕೊಳ್ಳಬೇಕಾ? ಎಂದು ಚರ್ಚೆ ಮಾಡುವುದಕ್ಕೆ ಸಮಿತಿ ನಮ್ಮ ಸಂಬಂಧ ಪಟ್ಟ ವಕೀಲರು ಮತ್ತು ಸರ್ಕಾರಿ ವಕೀಲರು ಇವರಿಬ್ಬರ ಮಧ್ಯೆ ಸಮಾಲೋಚನೆ ಮಾಡಿ ‘ಮ್ಯೂಚುಯಲ್ ಕಮಿಟ್ಮೆಂಟ್’ ಮೇಲೆ ಈ ಸಮಸ್ಯೆಯನ್ನು ಶೇಕಡ ಒಂದರಷ್ಟು ಮೀಸಲಾತಿ ಕೊಡುವುದು ಜಾರಿಯಾಗಬೇಕು. ಮತ್ತೊಂದು ಕಡೆ ಕಾನೂನು ತೊಡಕನ್ನು ನಿವಾರಣೆ ಮಾಡಬೇಕು. ಅದಕ್ಕೆ ಇರುವಂತಹ ಸರಿಯಾದ ಮಾರ್ಗದ ಬಗ್ಗೆ ಸರ್ಕಾರಿ ವಕೀಲರ ಜೊತೆಗೂ ಚರ್ಚೆ ಮಾಡಿ, ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಸಮಿತಿ ತೀರ್ಮಾನ ಮಾಡಿದೆ” ಎಂದು ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ ತಿಳಿಸಿದೆ.

ಸರ್ಕಾರದ ಇಂದಿನ ತೀರ್ಮಾನ ಅಲೆಮಾರಿ ಸಮುದಾಯಕ್ಕೆ ದಕ್ಕಿದ ಅತಿ ದೊಡ್ಡ ವಿಜಯವಾಗಿದೆ. ಚದುರಿ ಹೋಗಿದ್ದ ಸಮುದಾಯ ಒಟ್ಟುಗೂಡಿ ದೊಡ್ಡ ಹೋರಾಟ ಮಾಡಿ, ಡೆಲ್ಲಿ ತನಕ ಹೋಗಿ ಮತ್ತೆ ಬಂದು ಸರ್ಕಾರಕ್ಕೆ ಮನವರಿಕೆ ಮಾಡುವುದರಲ್ಲಿ ಸಮುದಾಯ ಯಶಸ್ವಿಯಾಗಿದೆ.

ಇದರ ಮೂಲಕ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹವನ್ನು ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ ಇಂದಿಗೆ ಅಂತ್ಯಗೊಳಿಸಿದೆ.

ಸಭೆಯಲ್ಲಿ ಸಚಿವರಾದ ಎಚ್ ಸಿ ಮಹದೇವಪ್ಪ, ಮುಖ್ಯಮಂತ್ರಿಗಳರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಮಾಜಿ ಸಚಿವರಾದ ಎಚ್ ಆಂಜನೇಯ, ವಿವಿಧೆಡೆಗಳಿಂದ ಆಗಮಿಸಿದ್ದ ಅಲೆಮಾರಿ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...

ಎಲ್ ನಿನೋ ತಾಪಮಾನ: ಹೊರಾಂಗಣ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

ಎಲ್ ನಿನೋ ಹವಾಮಾನ ಬದಲಾವಣೆಯ ತೀವ್ರ ಪರಿಣಾಮಗಳಿಂದ ಹೊರಾಂಗಣ ಹಾಗೂ ದಿನಗೂಲಿ...

ಮತದಾರರ ಹೆಸರು ಅಳಿಸಲು ಫಾರಂ-7 ದುರ್ಬಳಕೆ; ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...