ಅವ್ಯವಹಾರ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು

Date:

ಅವ್ಯವಹಾರ, ಹಣ ದುರುಪಯೋಗ ನಡೆಸಿರುವುದು ಸಾಬೀತಾದ ಕಾರಣ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಮಾಜಿ ಅಧ್ಯಕ್ಷ ಡಾ. ಮಹೇಶ್‌ ಜೋಶಿ ಅವರ ಆಜೀವ ಸದಸ್ಯತ್ವವನ್ನು ಕಸಾಪದ ಹಾಲಿ ಆಡಳಿತ ಮಂಡಳಿಯು ಅಧಿಕೃತವಾಗಿ ರದ್ದುಗೊಳಿಸಿದೆ.

- Advertisement -

ಮಹೇಶ್‌ ಜೋಶಿ ಕಸಾಪ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಣಕಾಸಿನ ನಿಯಮಗಳನ್ನು ಉಲ್ಲಂಘಿಸಿ ಆರ್ಥಿಕ ಅವ್ಯವಹಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹಾಗೆಯೇ ಕಸಾಪ ಬೈಲಾ ಮತ್ತು ನಿಯಮಾವಳಿಗಳಿಗೆ ವಿರುದ್ಧವಾಗಿ ನಡೆದುಕೊಂಡು ಕರ್ತವ್ಯ ಲೋಪ ಎಸಗಿರುವ ಆರೋಪವೂ ಕೇಳಿಬಂದಿತ್ತು. ಇವೆಲ್ಲವೂ ತನಿಖೆಯಿಂದ ಸಾಬೀತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನು ಓದಿದ್ದೀರಾ? ಕಸಾಪ ಅವ್ಯವಹಾರ ಸಾಬೀತು; ಮಹೇಶ್‌ ಜೋಶಿಗೆ ನೋಟಿಸ್‌

ಮಂಗಳವಾರ ಹೈಕೋರ್ಟ್‌ನ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಕಸಾಪ ಪದಾಧಿಕಾರಿಗಳ ಖರ್ಚು-ವೆಚ್ಚ, ಅಕ್ರಮಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ 2025ರ ಜೂನ್ 26 ಹಾಗೂ 30ರಂದು ಸಹಕಾರ ಸಂಘಗಳ ನೋಂದಣಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಬೇಕು ಎಂಬುದು ಸೇರಿ ಮಹೇಶ್ ಜೋಶಿ ಸಲ್ಲಿಸಿರುವ ಮೂರು ರಿಟ್ ಅರ್ಜಿಗಳ ವಿಚಾರಣೆ ನಡೆಸಿದೆ.

ಈ ವಿಚಾರಣೆ ವೇಳೆ ಅವ್ಯವಹಾರ, ಹಣ ದುರುಪಯೋಗ ನಡೆಸಿರುವುದು ಸಾಬೀತಾದ ಕಾರಣ ಡಾ. ಮಹೇಶ್‌ ಜೋಶಿ ಅವರ ಆಜೀವ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡೊಕೇಟ್ ಜನರಲ್ ಪ್ರತಿಮಾ ಹೊನಾಪುರ ತಿಳಿಸಿದ್ದಾರೆ.

ಇನ್ನು ಸದ್ಯ ಸರ್ಕಾರದ ಹಿರಿಯ ಅಧಿಕಾರಿ ಕೆ.ಎ. ದಯಾನಂದ್ ಅವರು ಕಸಾಪ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...