ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ಮಟ್ಟಿಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಆದೇಶಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಅವರ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಈ ಆದೇಶ ಹೊರಡಿಸಲಾಗಿದೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ಅಧಿಕಾರ ಚಲಾಯಿಸಿ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆ. 21, ಮಧ್ಯಾಹ್ನ 1 ಗಂಟೆಯಿಂದ ಆ. 22 ಮಧ್ಯಾಹ್ನ 1 ಗಂಟೆಯವರೆಗೆ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯಲ್ಲಿ ನಿವಾಸದಲ್ಲಿ ಪೊಲೀಸರು ವಿಚಾರಣೆಗಾಗಿ ಕರೆತಂದಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಡಿಸಿ ವಿವರಿಸಿದ್ದಾರೆ.
