ಹಾವೇರಿ | ಎಸ್‌ಸಿ/ಎಸ್‌ಟಿ ಸ್ಮಶಾನಕ್ಕೆ ಜಾಗ ಕೊಡಿ; ಮಾದಿಗ ಸಂಘ ಒತ್ತಾಯ

Date:

ಹಾವೇರಿ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸ್ಮಶಾನ ನೀಡಬೇಕು. ನಗರದಲ್ಲಿ ಬಾಬು ಜಗಜೀವನರಾಂ ಅವರ ಭವನ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಹಾವೇರಿ‌ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರಿಗೆ ರಾಜ್ಯ ಮಾದಿಗ ಸಂಘದ ಪ್ರಚಾರ ಸಮಿತಿ ಅಧ್ಯಕ್ಷ ಉಡಚಪ್ಪ ಮಾಳಗಿ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ನಡೆದ ಜಿಲ್ಲಾ ಜನತಾ ದರ್ಶನದಲ್ಲಿ ಸಂಘದ ಮುಖಂಡರು ಸಚಿವ ಶಿವಾನಂದ ಪಾಟೀಲ್ ಅವರನ್ನು ಭೇಟಿ ಮಾಡಿ ಹಕ್ಕೊತ್ಥಾಯ ಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಉಡಚಪ್ಪ ಮಾಳಗಿ, “ರಾಜ್ಯದಲ್ಲಿ ಗುತ್ತಿಗೆಯಲ್ಲಿಯೇ ಕೆಲಸ ಮಾಡಿಕೊಂಡು ಅತಂತ್ರ ಸ್ಥಿತಿಯಲ್ಲಿರುವ ಬಾಕಿ ಇರುವ ಡ್ರೈವರ್, ಲೋಡರ್,ಕ್ಲೀನರ್ಸ್  ಪೌರಕಾರ್ಮಿರನ್ನು ಪೌರಕಾರ್ಮಿಕರನ್ನು ಖಾಯಂ ಸರಕಾರಿ ಪೌರ ಕಾರ್ಮಿಕ ರೆಂದು ನೇಮಕ‌ ಮಾಡಿಕೊಂಡು ಸೇವಾ ಭದ್ರತೆ ನೀಡಬೇಕು” ಎಂದು ಒತ್ತಾಯಿಸಿದರು.   ‌‌‌

ಹಾವೇರಿ ನಗರದಲ್ಲಿ ಎಸ್.ಸಿ, ಎಸ್.ಟಿ‌ ಜನಾಂಗದವರಿಗೆ, ಈ ವರೆಗೂ ಪ್ರತ್ಯೇಕ ಸ್ಮಶಾನ ಇಲ್ಲದೇ ಅಲ್ಲಿ ಇಲ್ಲಿ ಶವ ಸಂಸ್ಕಾರ ಮಾಡಲಾಗುತ್ತಿದೆ. ಹಾಗಾಗಿ, ಕೂಡಲೇ ನಗರದ ಸೂಕ್ತ ಪ್ರದೇಶದಲ್ಲಿ ಆರು ಎಕರೆ ಜಾಗವನ್ನು ಗುರ್ತಿಸಿ ಸ್ಮಶಾನ ಜಾಗವನ್ನು ಮಂಜೂರು ಮಾಡಬೇಕು ಎಂದು ಕೇಳಿಕೊಂಡಿದ್ದಾರೆ. ಇಂದಿಗೂ ದಲಿತ‌ರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಶೈಕ್ಷಣಿಕ, ಆರ್ಥಿಕ,ಸಾಮಾಜಿಕ ಏಳಿಗೆಗೆ ಸರರ್ಕಾರ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡಬೇಕು ಎಂದು ಆಗ್ರಹ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ಮಾದಿಗ ಸಮಾಜ ಮುಖಂಡರಾದ ಮಂಜಪ್ಪ ಮರೋಳ, ಹನುಮಂತಪ್ಪ ಹಂಸಿ,ಅಲೆಮಾರಿ  ಸಂಘದ ಮುಖಂಡ ವಿಭೂತಿ ಶೆಟ್ಟಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ...

ಕೊಪ್ಪಳ | ಕಾಣೆಯಾಗಿದ್ದ ಏಳು ವರ್ಷದ ಬಾಲಕಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ...

ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ ಆಗಲ್ಲ: ಸುಮಲತಾ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸಮರ್ಥನೀಯವಲ್ಲ. ಅವುಗಳು ಮಹಿಳೆಯರನ್ನು ಸಬಲೀಕರಣ ಮಾಡುವುದಿಲ್ಲ ಎಂದು...

ದಾಂಡೇಲಿ | ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನರ‌ ಸಾವು

ಉತ್ತರ ಕನ್ನಡದ ದಾಂಡೇಲಿ ಬಳಿ ಬರಿಯಂಪೈಲಿ ಗ್ರಾಮದ ಸನಿಹ ಅಕೋಡಾ ಮಜಿರೆ...