ಮಂಡ್ಯ | ‘ಬೆಲ್ಲದಾರತಿ’ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಬಾರದ ಕಸಾಪ ಅಧ್ಯಕ್ಷ ಜೋಶಿ- ಪ್ರತಿಭಟನೆ

Date:

Advertisements

ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮುದ್ರಿಸಲಾದ ‘ಬೆಲ್ಲದಾರತಿ’ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಗೈರಾಗಿರುವುದನ್ನು ಖಂಡಿಸಿ ಕನ್ನಡ ಪರ, ಸಾಹಿತ್ಯ, ಸಂಘ – ಸಂಸ್ಥೆಗಳ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಚಿಸಿರುವ ‘ಬೆಲ್ಲದಾರತಿ’ ಸ್ಮರಣ ಸಂಚಿಕೆ ಶುಕ್ರವಾರ (ಮೇ 9) ಸಂಜೆ 4 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೆ ಸಮಯ ನಿಗದಿ ಪಡಿಸಲಾಗಿತ್ತು. ಈ ಸಭೆಗೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಗೈರಾಗಿದ್ದು ಕನ್ನಡ ಪರ, ಸಾಹಿತ್ಯ, ಸಂಘ – ಸಂಸ್ಥೆಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರೊ. ಜಯಪ್ರಕಾಶ್ ಗೌಡ, ಕಸಪಾ ಅಧ್ಯಕ್ಷ ಮಹೇಶ್‌ ಜೋಶಿ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾಡಳಿತ ಸಂಚಿಕೆಯನ್ನು ಹೊರ ತರಬೇಕು. ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಜೋಶಿ ಅವರು ವೆಚ್ಚ ಮಾಡಿದ 2.50 ಕೋಟಿ ರೂ. ಗೆ ಇನ್ನೂ ಲೆಕ್ಕ ಕೊಟ್ಟಿಲ್ಲ. ಈ ನಡುವೆ ಅವರು ಮುಂದಿನ ವರ್ಷ ಬಳ್ಳಾರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 40 ಕೋಟಿ ರೂ. ಅವಶ್ಯಕತೆ ಇದೆ ಎಂದು ಪ್ರಸ್ತಾಪ ಸಲ್ಲಿಸಿದ್ದಾರೆ. ಕೂಡಲೇ ಜೋಶಿ ಅವರನ್ನು ಕಸಾಪದಿಂದ ವಜಗೊಳಿಸಬೇಕು ಎಂದು ಒತ್ತಾಯಿಸಿದರು.

Advertisements

ಮಹೇಶ್‌ ಜೋಶಿ ವಿರುದ್ಧ ಮೇ 17ರಂದು ಮೈಸೂರು ವಿಭಾಗ ಮಟ್ಟದ ಪ್ರತಿಭಟನಾ ಸಭೆಯನ್ನು ಮಂಡ್ಯದಲ್ಲಿ ಹಮ್ಮಿಕೊಂಡಿದ್ದೇವೆ. ಈ ಸಭೆಯಿಂದಲೇ ಜೋಶಿ ಅವರ ಅವನತಿ ಪ್ರಾರಂಭವಾಗಲಿದೆ. ಜೋಶಿ ಹೊರ ದೇಶದಿಂದ ಸಂಗ್ರಹಿಸಿದ ಹಣಕ್ಕೆ ಲೆಕ್ಕವಿಲ್ಲ. ಅಲ್ಲದೆ ವಿದೇಶಿ ಪ್ರವಾಸಕ್ಕೆ 24 ಕೋಟಿ ರೂ. ಖರ್ಚು ಮಾಡಿದ್ದಾರೆ. ಅದರ ಲೆಕ್ಕ ಕೊಡ ಕೊಡಬೇಕು ಎಂದು ಅವರು ಆಗ್ರಹಿಸಿದರು.

ಸಮ್ಮೇಳನದ ಸಂದರ್ಭದಲ್ಲಿ ಮಹೇಶ್‌ ಜೋಶಿ ಅವರಿಂದ ಹಲವು ಅವ್ಯವಹಾರ ನಡೆದಿದೆ ಎಂದು ಮಂಡ್ಯದ ಕನ್ನಡ ಪರ, ಸಾಹಿತ್ಯ, ಸಂಘ – ಸಂಸ್ಥೆಗಳ ಮುಖಂಡರು ಆರೋಪಿಸಿದ್ದು ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದರು ಎನ್ನಲಾಗಿದೆ. ಈ ಮಾಹಿತಿ ಅರಿತ ಮಹೇಶ್ ಜೋಶಿ ಮಂಡ್ಯ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಕೆ.ಬೋರಯ್ಯ, ಸುನಂದ ಜಯರಾಂ, ಮುದ್ದೇಗೌಡ, ಕೃಷ್ಣಪ್ರಕಾಶ್, ಕಾರಸವಾಡಿ ಮಹದೇವು, ಟಿ.ಎಲ್ಕೃ.ಷ್ಣೆಗೌಡ, ಸಿ.ಕುಮಾರಿ, ಮಂಗಲ ಲಂಕೇಶ್, ಯೋಗಣ್ಣ, ಜಯರಾಂ, ವೆಂಕಟಗಿರಿಯಯ್ಯ ನರಸಿಂಹಮೂರ್ತಿ, ಹುರುಗಲವಾಡಿ ರಾಮಯ್ಯ ಹಾಗೂ ಸುರೇಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X