ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರು ಕೈ ಮಾಡಿದ್ದರಿಂದ ಬೈಕ್ ನಿಲ್ಲಸಲು ಹೋಗಿ ಆಯತಪ್ಪಿ ಬಿದ್ದು, ಹೃತಿಕ್ಷಾ (3) ಎಂಬ ಮಗುವೊಂದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮೂವರು ಎಎಸ್ಐಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಅಶೋಕ್ ಮತ್ತು ವಾಣಿಶ್ರೀ ದಂಪತಿಯ ಪುತ್ರಿ ಹೃತಿಕ್ಷಾ (3) ಮೃತಪಟ್ಟ ಮಗು. ಹೃತಿಕ್ಷಾ ಅವರಿಗೆ ನಾಯಿ ಕಡಿತಕ್ಕೆ ಚಿಕಿತ್ಸೆಗೆಂದು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಪೊಲೀಸರು ತಪಾಸಣೆ ಮಾಡಲು ಮುಂದಾಗಿದ್ದಾರೆ. ಪೊಲೀಸರು ಬೈಕ್ ಹ್ಯಾಂಡಲ್ ಅನ್ನು ಹಿಡಿದುಕೊಂಡಾಗ ಬೈಕ್ ನಲ್ಲಿದ್ದ ಮೂವರು ಆಯತಪ್ಪಿ ಕೆಳಗೆ ಬೀಳುತ್ತಾರೆ. ಈ ವೇಳೆ ಮಗು ಗಂಭೀರವಾಗಿ ಗಾಯಗೊಳ್ಳುತ್ತದೆ ಎಂದು ಮಗುವಿನ ಸಂಬಂಧಿಕರು ದೂರಿದ್ದಾರೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಮಗುವನ್ನು ಮಿಮ್ಸ್ ಆಸ್ಪತ್ರೆಗೆ ಆಟೊದಲ್ಲಿ ಕರೆದೊಯ್ಯುತ್ತಾರೆ. ಆದರೆ ಮಾರ್ಗ ಮಧ್ಯೆಯೇ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅವರು ಸ್ಥಳದಲ್ಲಿ ಇದ್ದ ಮೂವರು ಎಎಸ್ಐಗಳನ್ನು ಸಸ್ಪೆಂಡ್ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆ.ಆರ್.ಪೇಟೆ ದಲಿತ ಯುವಕ ಜಯಕುಮಾರ್ ಕೇಸ್‌ನಲ್ಲಿ ಪೊಲೀಸರು ಕುರುಡಾಗಿದ್ದು ಅಕ್ಷಮ್ಯ
25 ಲಕ್ಷ ರೂ.ಪರಿಹಾರ ನೀಡುವಂತೆ ಅಶೋಕ್ ಆಗ್ರಹ
ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, “ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದ ಮಗುವಿನ ಸಾವಾಗಿದೆ. ಪೊಲೀಸ್ ಇಲಾಖೆಯಲ್ಲಿ ಶಿಸ್ತು ಇಲ್ಲದೇ ಇರುವುದು ಇದಕ್ಕೆ ನೇರ ಕಾರಣ. ಏಕಾಏಕಿ ಹೋಗಿ ರಸ್ತೆಯಲ್ಲಿ ಅಡ್ಡ ಹಾಕುವ ಕೆಲಸ ಮಾಡುತ್ತಾರೆ. ಪೊಲೀಸ್ ಕೈ ತಗುಲಿ ಕೆಳಗೆ ಬಿದ್ದು ಮಗು ಮೃತಪಟ್ಟಿದೆ ಎಂಬ ಮಾಹಿತಿ ನನಗೆ ಬಂದಿದೆ. ಪೊಲೀಸರಿಂದಲೇ ಆ ಮಗು ಮೃತಪಟ್ಟಿದೆ. ಹೀಗಾಗಿ ರಾಜ್ಯ ಸರ್ಕಾರ ಮಗುವಿನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು” ಎಂದು ಆಗ್ರಹಿಸಿದ್ದಾರೆ.
ಮಂಡ್ಯದಲ್ಲಿ ಸಂಭವಿಸಿರುವ ಮುಗ್ಧ ಬಾಲಕಿಯ ದುರ್ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ನಾಯಿ ಕಡಿತದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತನ್ನ ತಂದೆ-ತಾಯಿ ಜತೆಯಲ್ಲಿ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ಹಸುಕಂದ ಹೀಗೆ ಅಕಾಲ ಮರಣಕ್ಕೆ ತುತ್ತಾಗಿರುವುದು ನನ್ನ ಮನಸ್ಸನ್ನು ಕಲಕಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 26, 2025
ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದಾಗ…