ಮಂಗಳೂರು ನಗರದ ನಾಗುರಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಗುಡ್ಡ ಕುಸಿದು ಸಂಭವಿಸಿದ ಭೀಕರ ದುರಂತದಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.
ನಿನ್ನೆ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ನಾಗುರಿ ಬಳಿಯಿದ್ದ ಗುಡ್ಡ ಜರಿದು, ಅಕ್ಕಪಕ್ಕದಲ್ಲಿದ್ದ ಮನೆಗಳ ಮೇಲೆ ಬಿದ್ದಿದೆ. ಈ ವೇಳೆ ಮನೆಯಲ್ಲಿದ್ದ ಆರು ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು, ಸ್ಥಳೀಯರ ಸಹಾಯದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಸುದೀರ್ಘ ಕಾರ್ಯಾಚರಣೆಯ ಬಳಿಕ ಮೂವರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು, ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಣ್ಣಿನಡಿ ಸಿಲುಕಿದ್ದ ಓರ್ವ ಮಹಿಳೆ ಮತ್ತು ಇಬ್ಬರು ಹೆಣ್ಣುಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಇದನ್ನೂ ಓದಿ:
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ತನಿಖೆ ಮುಂದುವರೆದಿದೆ.




