ಮಂಗಳೂರು| ಈಜುಕೊಳದಲ್ಲಿ ಯುವತಿಯರ ಸಾವು; ಮಾಲೀಕನ ಬಂಧನ, ರೆಸಾರ್ಟ್ ಸೀಲ್‌ಡೌನ್‌

Date:

ಇಲ್ಲಿನ ಹೊರವಲಯದ ಉಚ್ಚಿಲದ ಖಾಸಗಿ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರೆಸಾರ್ಟ್ ಮಾಲೀಕನನ್ನು ಬಂಧಿಸಿದ್ದಾರೆ.

- Advertisement -

ರೆಸಾರ್ಟ್‌ನಲ್ಲಿ ನಿಯಮ ಪಾಲನೆ ಮಾಡದಿರುವುದೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿರುವ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕ ಮನೋಹರ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ಮುಗಿಯುವವರೆಗೆ ರೆಸಾರ್ಟ್‌ಅನ್ನು ಸೀಲ್‌ಡೌನ್ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇಲ್ಲಿನ ಹೊರವಲಯದ ಉಚ್ಚಿಲದ ಖಾಸಗಿ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಇಂದು ಬೆಳಿಗ್ಗೆ ಈಜಾಡುವಾಗ ಮೂವರು ಯುವತಿಯರು ಏಕಾಏಕಿ ಮುಳುಗಿ ಮೃತಪಟ್ಟಿದ್ದರು. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತರು. ಮೂವರು ಅಂತಿಮ ವರ್ಷದ ಇಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ಯುವತಿಯರು ಈಜು ಬಾರದಿದ್ದರೂ ಮೊದಲಿಗೆ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಳ್ಳುತ್ತಿದ್ದರು. ಅದರಲ್ಲಿ ಓರ್ವ ಯುವತಿ ಈಜುಕೊಳದಲ್ಲಿದ್ದ ಟ್ಯೂಬ್ ಎತ್ತಿಕೊಳ್ಳಲು ಯತ್ನಿಸಿದ್ದಾಳೆ. ಆದರೆ, ಈಜುಕೊಳ ಸ್ವಲ್ಪ ಆಳ(6 ಅಡಿ) ಇದ್ದ ಕಾರಣ ಮುಳುಗಲು ಯತ್ನಿಸಿದ್ದಾಳೆ. ಆಕೆಯನ್ನು ಮತ್ತೋರ್ವ ಯುವತಿ ರಕ್ಷಿಸಲು ಮುಂದಾಗಿದ್ದಾಳೆ.

ಈ ವೇಳೆ, ಇಬ್ಬರೂ ನೀರಿನಲ್ಲಿ ಮುಳುಗಿ ಒದ್ದಾಡುತ್ತಿದ್ದಾಗ ಮೂರನೇ ಯುವತಿ ರಕ್ಷಣೆಗೆ ಹೋಗಿದ್ದಾಳೆ. ಹೀಗೆ ಒಬ್ಬರನ್ನೊಬ್ಬರು ರಕ್ಷಿಸಲು ಮುಂದಾಗಿ ಸಾವನ್ನಪ್ಪಿದ್ದಾರೆ. ಮುಳುಗುವಾಗ ತಮ್ಮನ್ನು ರಕ್ಷಿಸುವಂತೆ ಕೂಗಿಕೊಂಡರು ಯಾರೊಬ್ಬರು ಸಹಾಯಕ್ಕೆ ಬರಲಿಲ್ಲ. ನಾಲ್ಕೈದು ನಿಮಿಷಗಳಲ್ಲೇ ದುರ್ಘಟನೆ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಯಂತೆಯೇ ಮಂಗಳೂರು ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ರೆಸಾರ್ಟ್‌ನ ಈಜುಕೊಳದಲ್ಲಿ ನಿಯಮ ಪಾಲಿಸದಿರುವುದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...