ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ: 98 ಜನರಿಗೆ ಜೀವಾವಧಿ ಶಿಕ್ಷೆ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಿದೆ.

2014ರಲ್ಲಿ ನಡೆದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಇಂದು (ಅಕ್ಟೋಬರ್ 24) ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ ಸಿ. ಆದೇಶ ನೀಡಿದ್ದಾರೆ.

ಇನ್ನುಳಿದಂತೆ ಮೂವರು ಅಪರಾಧಿಗಳು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್‌ನಲ್ಲಿ ​ಐದು ವರ್ಷ ಶಿಕ್ಷೆ ವಿಧಿಸಿದೆ.

Advertisements

ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ವಿಧಿಸಿದೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

2014 ರ ಆಗಸ್ಟ್ 28 ರಂದು ಸವರ್ಣೀಯರು ಮತ್ತು ದಲಿತ ಸಮುದಾಯದವರ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಅಕ್ಟೋಬರ್ 21 ರಂದು ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​, 101 ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ​ ಇಂದಿಗೆ (ಅಕ್ಟೋಬರ್ 24) ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ಕೋರ್ಟ್​ ಅಂತಿಮ ತೀರ್ಪು ನೀಡಿದೆ.

ಮರಕುಂಬಿ ಗ್ರಾಮದಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ದೊಡ್ಡ ಮಟ್ಟದ ಘರ್ಷಣೆಗೆ ಕಾರಣ, ಗ್ರಾಮದಲ್ಲಿದ್ದ ಅಸ್ಪೃಶ್ಯತೆ. ಗ್ರಾಮದಲ್ಲಿ ಸವರ್ಣೀಯರು ನಡೆಸುತ್ತಿದ್ದ ಅಸ್ಪೃಶ್ಯತೆಯನ್ನು ಗ್ರಾಮದ ದಲಿತರು ಖಂಡಿಸಿದ್ದರು. ಇದರಿಂದ ಸವರ್ಣೀಯರು ಮತ್ತು ದಲಿತರ ನಡುವೆ ಆರೋಪ, ಪ್ರತ್ಯಾರೋಪ, ದೂರು ಪ್ರತಿದೂರು ನೀಡುವುದು ನಡದೇ ಇತ್ತು.

ಆದರೆ ಆಗಸ್ಟ್ 28 , 2014 ರಂದು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರದಲ್ಲಿ ಇದೇ ಮರಕುಂಬಿ ಗ್ರಾಮದ ದಲಿತ ಸಮುದಾಯದ ಮಂಜುನಾಥ ಮತ್ತು ಸ್ನೇಹಿತರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಸವರ್ಣೀಯರು ಜಗಳ ಆರಂಭಿಸಿದ್ದರು. ಅಂದು ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X