ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ: ರಾಜ್ಯದ ಪ್ರತಿ ಕೆಜಿ ಮಾವಿಗೆ ₹40.30 ದರ ನಿಗದಿ

Date:

ಕರ್ನಾಟಕದಲ್ಲಿ ಮಾವಿನ ಬೆಳೆಗೆ ಸೂಕ್ತ ಬೆಲೆ ಸಿಗದಿದ್ದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆ ಕೇಂದ್ರ ಸರ್ಕಾರವು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ(Market Intervention Scheme) ಅಡಿ ಪ್ರತಿ ಕೆಜಿ ಮಾವಿಗೆ ದರ ನಿಗದಿ ಮಾಡಿದೆ.

- Advertisement -

ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ಮಾವು ಅಭಿವೃದ್ದಿ ಹಾಗೂ ಮಾರುಕಟ್ಟೆ ನಿಗಮ ಸಲ್ಲಿಸಿದ ಪ್ರಸ್ತಾವನೆ ಆಧರಿಸಿ ಈಗಾಗಲೇ ದರ ಅಂತಿಮಗೊಳಿಸಲಾಗಿದ್ದು, ಅಧಿಸೂಚನೆ ಮಾತ್ರ ಬಾಕಿಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಕಳೆದ ವರ್ಷ ಪ್ರತಿ ಕೆಜಿಗೆ ಮಾವಿನ ಹಣ್ಣಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ₹4 ನಿಗದಿಪಡಿಸಲಾಗಿತ್ತು. ಈ ಬಾರಿ ₹4.30 ನಿಗದಿ ಮಾಡಲಾಗಿದೆ. ನವದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಮಾವು ಮಾರಾಟ ಮಾಡುವ ರೈತರಿಗೆ ಪ್ರತಿ ಕೆಜಿ ದರದ ಮೇಲೆ ₹4.30ಯನ್ನು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಮೂಲಕ ನೆರವಿನ ಹಣ ದೊರೆಯಲಿದೆ.

ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಮಾವಿಗೆ ನೆರವು ನೀಡುವಂತೆ ಇಲಾಖೆಯಿಂದ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರದಿಂದ ಸೂಕ್ತ ಸ್ಪಂದನೆಯೂ ದೊರೆತಿತ್ತು. ಈಗ ದರ ಕೂಡ ನಿಗದಿಯಾಗಿದ್ದು, ಅಧಿಸೂಚನೆ ಬಂದ ನಂತರ ಇಲಾಖೆಯಿಂದ ಮಾವು ಬೆಳೆಗಾರರಿಗೆ ತಿಳಿಸಲಾಗುವುದು. ಎಪಿಎಂಸಿ ಇಲಾಖೆಗೂ ಮಾಹಿತಿ ರವಾನೆಯಾಗಲಿದೆ ಎಂದು ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಆರ್ ಗಿರೀಶ್‌ ತಿಳಿಸಿದ್ದಾರೆ

ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಎನ್ನುವುದು  ಕೇಂದ್ರ ಸರ್ಕಾರದ ಪ್ರಮುಖ ಕೃಷಿ ಬೆಂಬಲ ಕಾರ್ಯಕ್ರಮ. ಬೇಗನೆ ಹಾಳಾಗುವ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳಿಗೆ ಇದನ್ನು ಅನ್ವಯಿಸಲಾಗುತ್ತದೆ. ಕೆಲವೊಮ್ಮೆ ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿತವಾದಾಗ ರೈತರಿಗೆ ನಷ್ಟವಾಗದಂತೆ ತಡೆಯಲು ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಪ್ರತಿ ವರ್ಷ ಮಾರುಕಟ್ಟೆ ದರ ಆಧರಿಸಿ ದರ ನಿಗದಿ ಮಾಡಲಾಗುತ್ತದೆ.

ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ವ್ಯಾಪ್ತಿಗೆ ಬಾರದ ಬೆಳೆಗಳಿಗೆ ಅನ್ವಯಿಸುವ ತಾತ್ಕಾಲಿಕ ಯೋಜನೆಯಿದು.

“ರಾಜ್ಯ ಸರ್ಕಾರಗಳ ವಿಶೇಷ ಮನವಿಯ ಮೇರೆಗೆ, ರೈತರಿಗೆ ಆರ್ಥಿಕ ನಷ್ಟವಾಗುವುದನ್ನು ತಪ್ಪಿಸಲು ಈ ಯೋಜನೆಯನ್ನು ಅನುಷ್ಠಾನ ಮಾಡಿಕೊಂಡು ಬರಲಾಗುತ್ತಿದೆ. ಮಾರುಕಟ್ಟೆಯಲ್ಲಿ ಬೆಲೆಗಳು ಕುಸಿದಾಗ, ನಿಗದಿತ ದರದಲ್ಲಿ ಸರ್ಕಾರವೇ ನೇರವಾಗಿ ರೈತರಿಂದ ಉತ್ಪನ್ನಗಳನ್ನು ಖರೀದಿಸುತ್ತದೆ. ಇಲ್ಲವೇ ಖರೀದಿಯಾದ ಉತ್ಪನ್ನಕ್ಕೆ ದರವನ್ನು ವರ್ಗಾಯಿಸಲಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮೂರು ತಿಂಗಳ ಹಿಂದೆಯೇ ಮಾವಿನ ಹಣ್ಣಿನ ಹಂಗಾಮು ಆರಂಭಗೊಂಡಿದ್ದು, ಈ ಬಾರಿ ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಕಾರಣಗಳಿಂದ ಇಳುವರಿಯೂ ಕಡಿಮೆಯಾಗಿದೆ. ಈಗಾಗಲೇ ಇತರೆ ಮಾವಿನ ಹಣ್ಣುಗಳು ಮಾರುಕಟ್ಟೆ ಪ್ರವೇಶಿಸಿ ಈ ವರ್ಷದ ಹಂಗಾಮು ಮುಕ್ತಾಯಕ್ಕೆ ಬಂದಿದೆ. ಆದರೆ, ತೋತಾಪುರಿ ಹಣ್ಣು ಈಗ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ದರ ಕುಸಿತದ ಆತಂಕ ಎದುರಾಗಿದೆ.

ಇದನ್ನೂ ಓದಿದ್ದೀರಾ? ಬೆಳಗಾವಿ | ಮುಂಗಾರು ವಿಳಂಬದಿಂದ ಬೆಳೆ ಒಣಗುವ ಭೀತಿ: ಆಕಾಶದತ್ತ ಮುಖ ಮಾಡಿದ ರೈತರು

ಕರ್ನಾಟಕದಲ್ಲಿ ಈ ಬಾರಿ 7 ರಿಂದ 8 ಲಕ್ಷ ಟನ್‌ ಮಾವು ಇಳುವರಿ ಬಂದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇ 40ರಷ್ಟು ಕಡಿಮೆ. ಸದ್ಯ ತೋತಾಪುರಿ ಮಾವು 4 ರಿಂದ 5 ಲಕ್ಷ ಟನ್‌ ಉತ್ಪಾದನೆಯಾಗುವ ನಿರೀಕ್ಷೆಯಿದೆ.

ಕೋಲಾರ ಜಿಲ್ಲೆಯೊಂದರಲ್ಲೇ ಅತ್ಯಧಿಕ 48 ಸಾವಿರ ಹೆ‌ಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದ್ದು, ತೋತಾಪುರಿಯೂ ಅಧಿಕವಾಗಿದೆ. ಬೆಂಗಳೂರು ಗ್ರಾಮಾಂತರ, ದಕ್ಷಿಣ, ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೂ ಹೆಚ್ಚು ಮಾವು ಬೆಳೆಯಲಾಗುತ್ತದೆ. ಈ ನಡುವೆ ಮಧ್ಯ ಏಷ್ಯಾದ ದೇಶಗಳಲ್ಲಿ ಯುದ್ದದ ವಾತಾವರಣ ಇರುವುದರಿಂದ ಅಲ್ಲಿಗೆ ರಫ್ತಾಗುತ್ತಿದ್ದ ಮಾವಿನ ಪಲ್ಪ್‌ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ಹಿಂದಿನ ವರ್ಷ ಪಲ್ಪ್‌ ಕೂಡ ಉಳಿದುಕೊಂಡಿದೆ. ಈ ಬಾರಿಯೂ ಸರಬರಾಜು ಕುಂಠಿತಗೊಂಡು ದರದಲ್ಲಿ ಕುಸಿತ ಕಂಡುಬಂದಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...