ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ 6 ಜನರ ಸಾವು

Date:

ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ 75ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತರು. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ  ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಣೆಯಾದ ಮಹಿಳೆಯರು ಮತ್ತು ಸಾಮಾಜಿಕ ವಿಡಂಬನೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಿಕ್ಕಬಳ್ಳಾಪುರ ಮೂಲದ ಆರು ಮಂದಿ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ.ಕಾರು ಮನೋಜ್ ಕುಮಾರ್ ಎಂಬುವರಿಗೆ ಸೇರಿದೆ.

ಕಾರು ಹಾಗೂ ಕಾರಿನಲ್ಲಿ ಇದ್ದವರ ಬಗ್ಗೆ ತಕ್ಷಣ ವಿಳಾಸ ಪತ್ತೆ ಹಚ್ಚಿ ಎಂದು ಚಿಕ್ಕಬಳ್ಳಾಫುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಿಎಲ್ ನಾಗೇಶ ಹಾಗೂ ಆರ್​ಟಿಒ ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಪರಿಷತ್ | ನೂತನವಾಗಿ ಆಯ್ಕೆಯಾದ 17 ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ವಿಧಾನ ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಸೋಮವಾರ (ಜೂ.24) ಪ್ರಮಾಣ...

ಕಲಬುರಗಿ: ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು,...

ಭದ್ರತೆ ದೃಷ್ಟಿಯಿಂದ ನಟ ದರ್ಶನ್‌ ಬೇರೆ ಜೈಲಿಗೆ ವರ್ಗಾವಣೆ ಸಾಧ್ಯತೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ...

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್‌...