ನಬಾರ್ಡ್‌ ನೀತಿ ವಿರೋಧಿಸಿ ಇದೇ 29ರಂದು ರಿಸರ್ವ್‌ ಬ್ಯಾಂಕ್‌ ಎದುರು ರೈತರ ಬೃಹತ್‌ ಪ್ರತಿಭಟನೆ

Date:

ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್‌ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್‌ ಹಾವಳಿ ತಡೆಯಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜ.29ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಿಸರ್ವ್‌ ಬ್ಯಾಂಕ್‌ ಎದುರು ಬೃಹತ್‌ ಪ್ರತಿಭಟನೆ ನಡೆಸಲಿದೆ.

- Advertisement -

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, “ಕೃಷಿ ಕ್ಷೇತ್ರವನ್ನು ಸದೃಢಗೊಳಿಸುವ ದೃಷ್ಟಿಯಿಂದ ಆರ್ಥಿಕ ನೆರವು ನೀಡಲು ಸ್ಥಾಪನೆಯಾಗಿರುವ ನಬಾರ್ಡ್‌ ಮೂಲಕ ಕೃಷಿಗೆ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತವನ್ನು ಕಡಿತಗೊಳಿಸಲಾಗಿದೆ. ದೂರದೃಷ್ಟಿಯಿಂದ ಸಹಕಾರ ಚಳವಳಿ ಕಟ್ಟಿದ ಸಹಕಾರಿ ಸಂಸ್ಥೆಗಳು ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದು ಗ್ರಾಮೀಣ ಪ್ರದೇಶದ ಆರ್ಥಿಕತೆ ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಹಾಲಿನ ಡೈರಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಡಿ ಸಿ ಸಿ ಬ್ಯಾಂಕ್‌ಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿವೆ. ಆದರೆ ಕೇಂದ್ರ ಸರ್ಕಾರ ಮೂರು ವರ್ಷಗಳಿಂದ ಪ್ರತಿ ವರ್ಷ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಲೇ ಬರುತ್ತಿದೆ. ಕೇಂದ್ರದ ಈ ನೀತಿಯಿಂದಾಗಿ ನಬಾರ್ಡ್‌ ರೈತರಿಗೆ ನೀಡುತ್ತಿದ್ದ ಸಾಲದ ಮೊತ್ತ ಕಡಿಮೆ ಮಾಡಿ ಈ ಸಾಲಿನಲ್ಲಿ ನಮ್ಮ ರಾಜ್ಯಕ್ಕೆ ನೀಡುತ್ತಿದ್ದ ಸಾಲವನ್ನು 58% ತಗ್ಗಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಇಡೀ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಾರ್ಪೊರೇಟ್‌ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಹಾವಳಿ ಮತ್ತು ಕಿರುಕುಳದಿಂದ ನಮ್ಮ ಗ್ರಾಮೀಣ ಪ್ರದೇಶದ ಮಹಿಳೆಯರು ಸಂಕಷ್ಟಕ್ಕೀಡಾಗಿದ್ದಾರೆ. ಮೈಕ್ರೋ ಫೈನಾನ್ಸ್‌ ಮೇಲೆ ಯಾರಿಗೂ ಹಿಡಿತ ಇಲ್ಲ. ಮರ್ಯಾದೆಗೆ ಅಂಜಿ ಬಡಜನರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಕೆಲವರು ಊರನ್ನೇ ತೊರೆಯುತ್ತಿದ್ದಾರೆ. ಸರ್ಕಾರ ಕೂಡಲೇ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

ಬುಧವಾರ (ಜ.29) ಬೆಳಿಗ್ಗೆ 11ಗಂಟೆಗೆ ನಡೆಯುವ ಬೃಹತ್‌ ಪ್ರತಿಭಟನೆಯಲ್ಲಿ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು, ಡಿ ಸಿ ಸಿ ಬ್ಯಾಂಕಿನ ಆಡಳಿತ ಮಂಡಳಿಯವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಮತ್ತು ಷೇರುದಾರರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ರೈತ ಸಂಘದ ಪದಾಧಿಕಾರಿಗಳಾದ ಜೆ ಎಂ ವೀರಸಂಗಯ್ಯ, ಎನ್‌ ಡಿ ವಸಂತಕುಮಾರ್‌, ಗೋಪಾಲ ಪಾಪೇಗೌಡ, ಅರುಣಕುಮಾರ್‌ ಕುರುಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...