ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ವಿರುದ್ಧ ಮಂಡ್ಯದಲ್ಲಿ ಭಾರೀ ಪ್ರತಿಭಟನೆ, ರಸ್ತೆ ತಡೆ

Date:

87ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೆಚ್ಚದ 2.50 ಕೋಟಿ ರೂ. ಲೆಕ್ಕ ನೀಡದೆ, ಕಸಾಪ ಬೈಲಾ ತಿದ್ದುಪಡಿ ಮೂಲಕ ಮಹೇಶ್ ಜೋಶಿ ಸರ್ವಾಧಿಕಾರಿಯಾಗಲು ಹೊರಟ್ಟಿದ್ದು, ಅವರನ್ನು ಕೂಡಲೇ ಕಸಾಪ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ, ಕಸಾಪ ಪದಾಧಿಕಾರಿಗಳು, ಆಜೀವ ಸದಸ್ಯರು ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಜೋಶಿ ವಿರುದ್ದ ಮಂಡ್ಯದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

- Advertisement -

ಮಂಡ್ಯದ ರೈತ ಸಭಾಂಗಣದ ಆವರಣದಲ್ಲಿರುವ ಕುವೆಂಪು ಅವರ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಸಂಜಯ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಜೋಶಿ ವಿರುದ್ದ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಹೇಶ ಜೋಶಿ ಆರ್ಥಿಕ ಅಶಿಸ್ತು ಮತ್ತು ಸರ್ವಾಧಿಕಾರಿ ಧೋರಣೆ ವಿರುದ್ಧ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಪ್ರತಿಭಟನಾ ಜಾಗೃತಿ ಸಮಾವೇಶ ಹಮ್ಮಿಕೊಳ್ಳಾಗಿತ್ತು, ಅದಕ್ಕೂ ಮುನ್ನ ಕನ್ನಡ ಪರ ಮನಸ್ಸುಗಳು ಜೋಶಿ ವಿರುದ್ದ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

‘ಡಾ.ಮಹೇಶ್‌ಜೋಶಿ ಅಮಾನತು ಮಾಡಿ – ಕಸಾಪ ಉಳಿಸಿ’ ಘೋಷಣೆಯಡಿ ನಡೆಯುವ ಜಾಗೃತಿ ಸಮಾವೇಶದಲ್ಲಿ ನಾಡಿನ ಕಸಾಪ ಅಜೀವ ಸದಸ್ಯರು, ಪ್ರಗತಿಪರ ಸಂಘಟನೆಯ ಮುಖಂಡರು ಹಾಗೂ ಕೆಲವು ಜನಪ್ರತಿನಿಧಿಗಳು ಪಕ್ಷಾತೀತವಾಗಿ ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದಾರೆ.

ಜೋಶಿ ವಿರುದ್ದ ಗಂಭೀರ ಆರೋಪಗಳು ಕೇಳಿ ಬಂದಿದ್ದು, ಸರ್ಕಾರ ಇಂತಹ ಸಂದರ್ಭದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಕಳಂಕಿತ ಅಧ್ಯಕ್ಷನನ್ನು ಅಮಾನತಿನಲ್ಲಿಟ್ಟು, ಆಡಳಿತಾಧಿಕಾರಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

WhatsApp Image 2025 05 17 at 9.22.58 PM

ಸಂಪುಟದರ್ಜೆ ಸ್ಥಾನಮಾನ ವಾಪಸ್‌ ಪಡೆಯಲು ಆಗ್ರಹ

ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶನಿವಾರ ನಡೆದ ಜಾಗೃತಿ ಸಮಾವೇಶದಲ್ಲಿ ಹಿರಿಯ ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ, ಸರ್ಕಾರ ಮಹೇಶ್ ಜೋಶಿಗೆ ನೀಡಿರುವ ಸಚಿವ ಸ್ಥಾನಮಾನವನ್ನು ವಾಪಸ್ ಪಡೆದರೆ ಆತನಿಗಿರುವ ಅರ್ಧ ದುರಹಂಕಾರ ಕಡಿಮೆಯಾಗುತ್ತದೆ. ದುರಹಂಕಾರದಿಂದಾಗಿ ತಾನು ಏನು ಮಾತನಾಡುತ್ತಿದ್ದೇನೆ ಎಂಬ ಪರಿಜ್ಞಾನವೂ ಜೋಶಿಗೆ ಇಲ್ಲವಾಗಿದೆ. ಎಲ್ಲ ಜಿಲ್ಲೆಯ ಕಸಾಪ ಅಧ್ಯಕ್ಷರು ತನ್ನ ಪರ ಇರಬೇಕು. ಇಲ್ಲಾ ವಜಾ ಮಾಡುತ್ತೇನೆ ಎಂದು ಹೆದರಿಸಿ ಇಟ್ಟುಕೊಂಡಿದ್ದಾನೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಹಾಳು ಮಾಡುತ್ತಿದ್ದು, ಸಾಹಿತ್ಯ ಸಮ್ಮೇಳನ ಮುಗಿದು 5 ತಿಂಗಳಾದರೂ ಲೆಕ್ಕ ಕೊಟ್ಟಿಲ್ಲ, ಲೆಕ್ಕ ಕೊಡದ ಈತ ಒಂದು ಕ್ಷಣವು ಅಧ್ಯಕ್ಷ ಸ್ಥಾನದಲ್ಲಿರಲು ಅರ್ಹತೆ ಹಾಗೂ ಯಾವುದೇ ಘನತೆ ಇಲ್ಲ. ಈತನನ್ನು ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಗೆಲ್ಲಿಸಿದ್ದು ದುರಂತ. ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿರುವ ಈತ ಮಾನ-ಮರ್ಯಾದೆ ಇದ್ದಿದ್ದರೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕಿತ್ತು. ಆದರೆ, ಈತನಿಗೆ ಅಧಿಕಾರದ ಮದ ಹೇರಿದೆ. ವಿರುದ್ಧವಾಗಿ ಮಾತನಾಡಿದವರಿಗೆಲ್ಲ ನ್ಯಾಯಾಲಯದಿಂದ ನೋಟಿಸ್ ನೀಡುತ್ತಿದ್ದು, ಆ ಹಣ ಸಾಹಿತ್ಯ ಪರಿಷತ್‌ನದ್ದು. ಹೀಗೆ ಪ್ರತಿಯೊಂದಕ್ಕೂ ಪರಿಷತ್ ಹಣವನ್ನು ಖರ್ಚು ಮಾಡುತ್ತಿದ್ದು, ಭಿಕಾರಿ ಮಾಡಲು ಹೊರಟಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೋಶಿ ಸರ್ವಾಧಿಕಾರಿ

ಸಾಹಿತಿ ಹಿ.ಶಿ. ರಾಮಚಂದ್ರೇಗೌಡ ಮಾತನಾಡಿ ಜಾತ್ಯತೀತ ಪರಿಕಲ್ಪನೆಯಲ್ಲಿ ಬೆಳೆದು ಬಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದವರಿಗೆ ಸಹನೆ ಮತ್ತು ಮರೆಯುವಂತಹ ಪ್ರವೃತ್ತಿ ಹೊಂದಿರಬೇಕು. ಎಲ್ಲರನ್ನೂ ವಿಶ್ವಾಸದಿಂದ ಕೊಂಡೊಯ್ಯುವಂತಹ ಪರಿಪಾಠ ಬೆಳೆಸಿಕೊಳ್ಳಬೇಕು. ಆದರೆ ಮಹೇಶ್ ಜೋಶಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಬೇಸರ ವ್ಯಕ್ತಪಡಿಸಿದರು.

ಸಮ್ಮೇಳನಗಳನ್ನು ಅದ್ಧೂರಿಯಾಗಿ ಮಾಡುವ ಅಗತ್ಯವಿಲ್ಲ. ಇದರಿಂದ ಬೇರೆ ಕಾರ‍್ಯಕ್ರಮಗಳನ್ನು ಹತ್ತಿಕ್ಕುವಂತಾಗುತ್ತದೆ. ಮೂಲವಾಗಿ ಘಟಕಾಂಶಗಳನ್ನು ಬೆಳೆಸಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಸದಾ ಒಂದಿಲ್ಲೊಂದು ಸಾಹಿತ್ಯದ ಚಟುವಟಿಕೆಯಲ್ಲಿ ತೊಡಗಿದ್ದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆ ಶಿವಮೊಗ್ಗದ ಅಧ್ಯಕ್ಷರನ್ನು ಅಮಾನತ್ತು ಮಾಡಿರುವುದು ಬೇಸರ ಮೂಡಿಸಿದೆ ಎಂದು ಹೇಳಿದರು.

ರಾಜ್ಯದ ಎಲ್ಲ ಜಿಲ್ಲಾಧ್ಯಕ್ಷರು ಸಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೇ ಆಯ್ಕೆಯಾಗಿ ಬಂದವರು. ಎಲ್ಲರನ್ನೂ ಸಂಘಟಿಸಿ ಚಳವಳಿಯೊಳಗೆ ತರುವ ಪ್ರಯತ್ನ ಮಾಡಬೇಕು. ಮಂಡ್ಯದಲ್ಲಿ ಆರಂಭವಾದ ಚಳವಳಿ ಇಂಡಿಯಾಕ್ಕೆ ಮುಟ್ಟುವಂತಾಗಬೇಕು ಎಂದು ಹೇಳಿದರು.

ಆರ್‌ಎಸ್‌ಎಸ್‌ಗೆ ಹೋಗಿ ಬಂದು ಸಲಾಂ ಹೊಡೆಯುವ ಜೋಶಿ

ಹೋರಾಟಗಾರರಾದ ಕೆ ಎಸ್‌ ವಿಮಲಾ ಮಾತನಾಡಿ, ಕೂಡು ಸಂಸ್ಕೃತಿಯುಳ್ಳ ಸಾಹಿತ್ಯ ಪರಿಷತ್ತನ್ನು ಏಕ ಸಂಸ್ಕೃತಿಯನ್ನಾಗಿ ಮಾಡಲು ಹೊರಟಿರುವ ಮಹೇಶ್ ಜೋಶಿಯವರನ್ನು ಅನುಸರಿಸದೆ, ಅವರ ಗುಲಾಮಗಿರಿಯಿಂದ ಹೊರ ಬಂದು ತಮ್ಮದೇ ಆದ ಚಟುವಟಿಕೆಗಳನ್ನು ಕೊಡುವ ಮೂಲಕ ಸಾಹಿತ್ಯ ಪರಿಷತ್ತಿನ ಘನತೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಜಿಲ್ಲಾಧ್ಯಕ್ಷರಿಗೆ ಕರೆ ನೀಡಿದರು.

ನಿವೃತ್ತ ಜಿಲ್ಲಾಧಿಕಾರಿ ರುದ್ರಪ್ಪ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಕನ್ನಡದ ಮನಸ್ಸುಗಳಿಗೆ ಜಾಗೃತಿ ಮೂಡಿಸಬೇಕು. ಎಲ್ಲರನ್ನೂ ಒಗ್ಗೂಡಿಸಿ ಹಿಂದೆ ಅವರು ಕೆಲಸ ಮಾಡಿದ್ದ ಹುದ್ದೆಗಳಲ್ಲಿ ದುರ್ವತನೆಯಿಂದ ಕೆಲಸ ಮಾಡಿದ್ದರೋ ಅದನ್ನೂ ತೆಗೆದು ಸಾರ್ವಜನಿಕರಿಗೆ ತೋರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಕಸಾಪ ಅಧ್ಯಕ್ಷರಾದವರು ರಾಜಕಾರಣಿಯಾಗಬೇಕಾ, ಸಾಹಿತಿಯಾಗಿರಬೇಕಾ ?

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್‌ ಎಲ್‌ ಪುಷ್ಪ ಮಾತನಾಡಿ, ಸಂಘ ಸಂಸ್ಥೆಗಳು ಎಂದಾಗ ಅದಕ್ಕೊಂದು ಬೈಲಾ ಇರುತ್ತೆ, ಲೆಕ್ಕಪತ್ರ ಕೊಡಬೇಕಾಗುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಮಹೇಶ್ ಜೋಶಿ ಅವರಿಗೆ ಈ ಬಗ್ಗೆ ತಾತ್ಸಾರ ಮನೋಭಾವ ಏಕೆ? ಮಂಡ್ಯದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಜವಾಬ್ದಾರಿ ಹೊತ್ತುಕೊಂಡಿದ್ದ ಮಹಿಳೆಯನ್ನು ಕಾರ‍್ಯಕಾರಿ ಸಮಿತಿ ಸಭೆಯಿಂದ ಹೊರಗೆ ಕಳುಹಿಸುವಂತಹ ಪ್ರಮೇಯವಾದರೂ ಏನಿತ್ತು ಎಂದು ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....