ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮೀಡಿಯಾ ಕಿಟ್‍; ಅರ್ಹರಿಂದ ಅರ್ಜಿ ಆಹ್ವಾನ

Date:

Advertisements

ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಇಲಾಖೆಯ ಮಾನ್ಯತಾ ಕಾರ್ಡು (Accreditation Card) ಹೊಂದಿದ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2025-26ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್‍ಗಳನ್ನು ಪಡೆದಿರುವುದಿಲ್ಲ ಎಂದು ರೂ. 200 ರ ಬಾಂಡ್‍ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.

Advertisements

ಇದನ್ನೂ ಓದಿ: Breaking News | ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು

ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ 2025ನೇ ಆಗಸ್ಟ್ 22 ರ ಸಂಜೆ 5:00 ಗಂಟೆಯೊಳಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಂ.17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು. ಲಕೋಟೆಯ ಮೇಲ್ಭಾಗದಲ್ಲಿ “ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್ ಗಾಗಿ ಅರ್ಜಿ” ಎಂದು ನಮೂದಿಸಿರಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X