ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Date:

ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ತಿರಸ್ಕರಿಸಿರುವುದು ಪ್ರಜಾಪ್ರಭುತ್ವದ ವಿರುದ್ಧದ ಅತಿದೊಡ್ಡ ಅಣಕ ಹಾಗೂ ಸ್ಪಷ್ಟ ರಾಜಕೀಯ ಷಡ್ಯಂತ್ರ ಎಂದು ಅವರು ಆರೋಪಿಸಿದ್ದಾರೆ.

- Advertisement -

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಅವರ ಕಪಿಮುಷ್ಠಿಯಲ್ಲಿದೆ. ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ಸಲ್ಲಿಕೆಯಲ್ಲಿ ಯಾವುದೇ ಲೋಪಗಳಿರಲಿಲ್ಲ. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ. ಕೇವಲ ಖಾಸಗಿ ದೂರಿನನ್ವಯ ನ್ಯಾಯಾಲಯದಿಂದ ಬಂದಿದ್ದ ಶೋಕಾಸ್ ನೋಟಿಸ್‌ ಅನ್ನು ಅಫಿಡವಿಟ್‌ನಲ್ಲಿ ಸೇರಿಸುವ ಅಗತ್ಯವಿಲ್ಲ ಎಂದು ಖುದ್ದು ಆಯೋಗದ ನಿಯಮಗಳೇ ಸ್ಪಷ್ಟವಾಗಿ ಹೇಳುತ್ತವೆ. ಆದರೂ, ಆಯೋಗವು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳದೆ, ಪಕ್ಷಪಾತದಿಂದ ಹಾಗೂ ಸಂಪೂರ್ಣ ಕಾನೂನುಬಾಹಿರವಾಗಿ ನಾಮಪತ್ರವನ್ನು ತಿರಸ್ಕರಿಸಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಮಧ್ಯಪ್ರದೇಶದಲ್ಲಿ ಕೇವಲ ಇಬ್ಬರು ಅಭ್ಯರ್ಥಿಗಳನ್ನು ಮಾತ್ರ ಗೆಲ್ಲಿಸಿಕೊಳ್ಳುವ ಸಂಖ್ಯಾಬಲವಿದ್ದರೂ, ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಕಾಂಗ್ರೆಸ್ ಶಾಸಕರಿಗೆ ದೊಡ್ಡ ಮೊತ್ತದ ಹಣದ ಆಮಿಷವೊಡ್ಡಿ ಕುದುರೆ ವ್ಯಾಪಾರಕ್ಕೆ ಯತ್ನಿಸಿತ್ತು. ಆದರೆ, ಕಾಂಗ್ರೆಸ್ ಶಾಸಕರು ಒಗ್ಗಟ್ಟು ಪ್ರದರ್ಶಿಸಿದ ಕಾರಣ ಬಿಜೆಪಿಯ ಹುನ್ನಾರ ವಿಫಲವಾಯಿತು. ಚುನಾವಣೆಯಲ್ಲಿ ನ್ಯಾಯಯುತವಾಗಿ ಗೆಲ್ಲಲು ಸಾಧ್ಯವಾಗದಿದ್ದಾಗ, ಕೊನೆಯ ಅಸ್ತ್ರವಾಗಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಬಿಜೆಪಿ ಈ ಕೃತ್ಯವೆಸಗಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಇದನ್ನು ಓದಿದ್ದೀರಾ? ಫಿಫಾ 2026: ಜೂನ್ 11ರಿಂದ ದಿಗ್ಗಜರ ಹಣಾಹಣಿಯ ಜಾಗತಿಕ ಹಬ್ಬ

ಬಿಜೆಪಿಯು ಚುನಾವಣಾ ಅಕ್ರಮಗಳು, ಎಸ್‌ಐಆರ್ ನಂತಹ ಕಳ್ಳಮಾರ್ಗಗಳು ಹಾಗೂ ‘ಮತಗಳ್ಳತನ’ವನ್ನು ಅಧಿಕೃತ ದಂಧೆಯನ್ನಾಗಿಸಿಕೊಂಡಿದೆ ಎಂದು ಟೀಕಿಸಿದ ಅವರು, ರಾಜ್ಯಸಭಾ ಚುನಾವಣೆಯಲ್ಲೂ ಅಕ್ರಮ ಎಸಗುವ ಮೂಲಕ ‘ಸ್ಥಾನಗಳ್ಳತನ’ಕ್ಕೆ ಇಳಿದಿದೆ. ಮತದಾರರ ದಿಕ್ಕು ತಪ್ಪಿಸುವುದು, ಪ್ರಾದೇಶಿಕ ಪಕ್ಷಗಳನ್ನು ಒಡೆಯುವುದು ಹಾಗೂ ಸ್ವತಂತ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಆ ಪಕ್ಷದ ಕಾರ್ಯತಂತ್ರವಾಗಿದೆ ಎಂದು ಸಿದ್ದರಾಮಯ್ಯ ದೂರಿದರು.

ಲೋಕಸಭೆಯಲ್ಲಿ ಕೃತಕ ಸಂಖ್ಯಾಬಲವನ್ನು ಸೃಷ್ಟಿಸಿಕೊಂಡು ತಮ್ಮ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ಮಸೂದೆಗಳನ್ನು ಯಾವುದೇ ಪ್ರತಿರೋಧವಿಲ್ಲದೆ ಸುಲಭವಾಗಿ ಜಾರಿಗೊಳಿಸುವುದು ಬಿಜೆಪಿಯ ಅಸಲಿ ಗುರಿಯಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ಇಂತಹ ದಾಳಿಗಳನ್ನು ಕಾಂಗ್ರೆಸ್ ಪಕ್ಷವು ಬಲವಾಗಿ ವಿರೋಧಿಸಲಿದ್ದು, ಪ್ರತಿಯೊಂದು ಅನ್ಯಾಯದ ವಿರುದ್ಧ ದೇಶದ ನಾಗರಿಕರ ಪರವಾಗಿ ನಿಂತು ಹೋರಾಡಲಿದೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....