ನೀರಾವರಿ ಸಚಿವರ ಸಭೆ | ನೀರಾವರಿ ಅನ್ಯಾಯದ ಬಗ್ಗೆ ಸಮ್ಮೇಳನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್

Date:

Advertisements

ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ನೀರಾವರಿ ಸಚಿವರೂ ಆದ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಮಾಹಿತಿ ನೀಡಿ, “ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ ನಡೆಯುತ್ತಿದ್ದು, ಇಲ್ಲಿ ಎಲ್ಲ ರಾಜ್ಯಗಳ ನೀರಾವರಿ ಸಚಿವರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ ಮಾಡುತ್ತೇನೆ” ಎಂದು ಹೇಳಿದರು.

“ಮೇಕೆದಾಟು, ಮಹದಾಯಿ ಯೋಜನೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಇದರ ಜತೆಗೆ ಈ ವರ್ಷ ನಾವು ಅನೇಕ ಇತರೆ ನೀರಾವರಿ ಯೋಜನೆಗಳನ್ನು ತಯಾರು ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ” ಎಂದು ತಿಳಿಸಿದರು.

Advertisements

“ತುಂಗ ಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ದುರಸ್ತಿ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗಾಗಿ ಅವುಗಳ ರಿಪೇರಿಗೆ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇನ್ನು ಈ ಜಲಾಶಯಕ್ಕೆ ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರವಾಗಿ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಸಚಿವರ ಜೊತೆ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಪ್ರತ್ಯೇಕ ಸಭೆ ಮಾಡಲು ಈಗಾಗಲೇ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ” ಎಂದರು.

ಈ ಅಂಕಣ ಓದಿದ್ದೀರಾ? ರಾಯಭಾರ | ಡಿಕೆ ಸಾಹೇಬರ ‘ಮಿಷನ್‌ ಚೀಫ್‌ ಮಿನಿಸ್ಟರ್‌’ ಎಂಬ ಯೋಜನೆ ‘ಗಾಳಿ ತೆಗೆಯುವ ಕಾರ್ಯಕ್ರಮ’ವಾದ ಪರಿ!

ಸರ್ಕಾರಕ್ಕೆ ಹಣದ ಸಮಸ್ಯೆ ಇಲ್ಲ

ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಇದೆಲ್ಲವೂ ಸುಳ್ಳು, ಸರ್ಕಾರಕ್ಕೆ ಸಂಪನ್ಮೂಲ ಕ್ರೋಢೀಕರಣ ಒಂದೇ ದಿನಕ್ಕೆ ಆಗುವುದಿಲ್ಲ. ಹಂತ ಹಂತವಾಗಿ ಬರುತ್ತದೆ. ಆರ್ಥಿಕ ವರ್ಷಾಂತ್ಯದ ವೇಳೆಗೆ ಎಲ್ಲವೂ ಸರಿಯಾಗುತ್ತದೆ. ಸರ್ಕಾರಕ್ಕೆ ಹಣದ ಸಮಸ್ಯೆ ಇಲ್ಲ. ಆರ್ಥಿಕವಾಗಿ ನಾವು ಬಲಿಷ್ಠವಾಗಿದ್ದೇವೆ. ಅನ್ನಭಾಗ್ಯದಲ್ಲಿ ಜನರಿಗೆ ತಲುಪಬೇಕಾದ ಅಕ್ಕಿ ತಲುಪುತ್ತಿದೆ. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳ ಹೊರತಾಗಿ, ಈ ವಿಚಾರದಲ್ಲಿ ಜನಸಾಮಾನ್ಯರಿಗೆ ಅಸಮಾಧಾನ ಇಲ್ಲ. ಜನರು ಈ ವಿಚಾರದಲ್ಲಿ ಸಂತೋಷವಾಗಿದ್ದಾರೆ. ಜನರಿಗೆ ನಮ್ಮ ಮೇಲೆ ನಂಬಿಕೆ ಇದೆ. ಎರಡು, ಮೂರು ತಿಂಗಳು ಹಣ ಬಾಕಿ ಇದ್ದು, ಈ ತಿಂಗಳು ಬಿಡುಗಡೆಯಾಗಲಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X