ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯವಿದ್ದಂತೆ: ಸಿಎಂ ಡಿ.ಕೆ. ಶಿವಕುಮಾರ್

Date:

‘ಮೇಕೆದಾಟು ಯೋಜನೆಯು ದಕ್ಷಿಣ ಭಾರತದ ಹೃದಯವಿದ್ದಂತೆ. ಇದರಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳ ಹಿತಾಸಕ್ತಿ ಅಡಗಿದೆ. ಈ ಯೋಜನೆಯಿಂದ ಕೃಷಿಗೆ ಒಂದೇ ಒಂದು ಬಕೆಟ್ ನೀರನ್ನೂ ಬಳಸುವುದಿಲ್ಲ, ಇದು ಕೇವಲ ಬೆಂಗಳೂರಿನ ಕುಡಿಯುವ ನೀರಿಗಾಗಿ ಮೀಸಲು’ ಎಂದು ಸಿ ಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

- Advertisement -

ವಿಧಾನಸೌಧದಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯ ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಜನೆಯ ಕುರಿತು ತಮಿಳುನಾಡಿನ ವಿರೋಧ ಹಾಗೂ ರಾಜ್ಯದ ನಿಲುವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಮೇಕೆದಾಟು ಯೋಜನೆ ಕೇವಲ ತಮ್ಮ ಹೃದಯಕ್ಕೆ ಮಾತ್ರವಲ್ಲ, ಇಡೀ ದಕ್ಷಿಣ ಭಾರತಕ್ಕೆ ಹತ್ತಿರವಾದದ್ದು ಎಂದ ಅವರು, “ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೇ ಹೆಚ್ಚು ಅನುಕೂಲವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿನ ಪಾಲಿನ 177 ಟಿಎಂಸಿ ನೀರು ಬಿಡಲು ನಾವು ಸಿದ್ಧವಿದ್ದೇವೆ. ಯೋಜನೆಯ ಅಂತಿಮ ತೀರ್ಮಾನವನ್ನು ಕೇಂದ್ರ ಜಲ ಆಯೋಗ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯವೇ ತಿಳಿಸಿದೆ” ಎಂದರು.

ಬೆಂಗಳೂರಿನಲ್ಲಿ ಜನಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಕೃಷ್ಣಾ ನದಿಯಿಂದ ನೀರು ತರುವುದು ಅಸಾಧ್ಯ. ಹೀಗಾಗಿ ಕಾವೇರಿ ನದಿ ಮಾತ್ರ ರಾಜ್ಯದ ಮುಂದಿರುವ ಏಕೈಕ ಆಯ್ಕೆಯಾಗಿದೆ. ನಾವು ತಮಿಳುನಾಡಿನ ರೈತರ ಹಿತವನ್ನೂ ಕಾಪಾಡಬೇಕಿದೆ. ಮೇಕೆದಾಟು ಸಮತೋಲಿತ ಜಲಾನಯನ ಯೋಜನೆಯಾಗಿದ್ದು, ಇದರಲ್ಲಿ ಸಂಗ್ರಹವಾಗುವ ನೀರಿನಲ್ಲಿ ಒಂದೇ ಒಂದು ಬಕೆಟ್ ನೀರನ್ನೂ ನೀರಾವರಿಗೆ ಬಳಸುವುದಿಲ್ಲ. ಅದನ್ನು ಕೇವಲ ಬೆಂಗಳೂರು ನಗರದ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಲಾಗುವುದು ಎಂದು ಅವರು ಖಚಿತಪಡಿಸಿದರು.

ಇದನ್ನು ಓದಿದ್ದೀರಾ? ಒಪ್ಪಿಗೆಯಿಲ್ಲದೆ ಖಾಸಗಿ ಚಿತ್ರಗಳ ಹಂಚಿದರೆ ಎಫ್‌ಐಆರ್: ವಿಕೃತ ಪ್ರವೃತ್ತಿ ವಿರುದ್ಧ ಡಿಜಿಪಿ ಸಲೀಂ ಎಚ್ಚರಿಕೆ

ಮೇಕೆದಾಟು ಯೋಜನೆ ರದ್ದುಗೊಳಿಸಲು ತಮಿಳುನಾಡು ಸರ್ಕಾರ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ತಮಿಳುನಾಡು ಕಳೆದ 40 ವರ್ಷಗಳಿಂದ ಕಾವೇರಿ ವಿಚಾರವನ್ನು ರಾಜಕೀಯ ಅಜೆಂಡಾವಾಗಿ ಇಟ್ಟುಕೊಂಡಿದೆ. ಅವರ ರಾಜಕೀಯದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಕಳೆದ ವರ್ಷ 400ಕ್ಕೂ ಹೆಚ್ಚು ಟಿಎಂಸಿ ಹೆಚ್ಚುವರಿ ನೀರು ಸಮುದ್ರ ಪಾಲಾಗಿದೆ. ತಮಿಳುನಾಡು ತನ್ನ ಕೆಳಭಾಗದಲ್ಲಿ ಹಲವು ಅಣೆಕಟ್ಟುಗಳನ್ನು ನಿರ್ಮಿಸಿಕೊಳ್ಳುತ್ತಿದ್ದು, ಅದಕ್ಕೆ ನಾವು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಈ ಯೋಜನೆಯಿಂದ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಇದು ಇಂಧನ ಕ್ಷೇತ್ರಕ್ಕೂ ನೆರವಾಗಲಿದೆ. ಇದಕ್ಕಾಗಿ ನಾವು ಕೇಂದ್ರದಿಂದ ಆರ್ಥಿಕ ನೆರವನ್ನೇನೂ ಕೇಳುತ್ತಿಲ್ಲ” ಎಂದು ತಿಳಿಸಿದರು.

ತಮಿಳುನಾಡಿನವರು ತಮ್ಮ ರಾಜಕೀಯ ಉಳಿವಿಗಾಗಿ ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ ಎಂದ ಅವರು, ಸಂವಾದಕ್ಕೆ ತಾವು ಸದಾ ಮುಕ್ತ ಎಂದರು.
“ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ತೀರ್ಪು ನೀಡಿದ ಬಳಿಕವೂ ವಿವಾದ ಸೃಷ್ಟಿಸುವುದು ಸರಿಯಲ್ಲ. ಆದರೂ, ತಮಿಳುನಾಡಿನ ಜೊತೆ ಯಾವಾಗ ಬೇಕಾದರೂ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಕರ್ನಾಟಕ ಹಾಗೂ ತಮಿಳುನಾಡಿನವರು ಎಲ್ಲರೂ ಭಾರತೀಯರೇ. ಎರಡು ಕಡೆಯ ಜನರೂ ಪರಸ್ಪರ ವಲಸೆ ಬಂದು ಬದುಕು ಕಟ್ಟಿಕೊಂಡಿದ್ದಾರೆ; ನಾವು ಅವರನ್ನು ಪ್ರತ್ಯೇಕಿಸುವುದಿಲ್ಲ. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಸಂಕಷ್ಟದ ವರ್ಷಗಳಲ್ಲಿ ತಮಿಳುನಾಡಿನ ಪಾಲಿನ ನೀರನ್ನು ಹರಿಸಲು ನಮಗೂ ನೆರವಾಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಸಂಸದರ ಪಾತ್ರದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ಎಲ್ಲ ಸಂಸದರೂ ಪಕ್ಷಭೇದ ಮರೆತು ಒಗ್ಗಟ್ಟಾಗಿ ರಾಜ್ಯದ ಹಿತ ಕಾಪಾಡಲು ಹೋರಾಡಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸ ನಮಗಿದೆ. ತಮಿಳುನಾಡಿನಲ್ಲಿರುವ ನಮ್ಮ ಮೈತ್ರಿಕೂಟದ ನಾಯಕರಿಗೂ ವಾಸ್ತವವನ್ನು ಮನವರಿಕೆ ಮಾಡಿಕೊಡಲಾಗುವುದು. ಇದರಲ್ಲಿ ಯಾವುದೇ ರಾಜಕಾರಣವಿಲ್ಲ, ಎರಡು ರಾಜ್ಯಗಳ ಜನರ ಹಿತ ಕಾಪಾಡುವುದಷ್ಟೇ ನಮ್ಮ ಉದ್ದೇಶ” ಎಂದು ಅವರು ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಖರೀದಿ ಮೇಲೆ ತೆರಿಗೆ, ಖರೀದಿ ಹಣಕ್ಕೆ ಶುಲ್ಕ… ಇದು ಮೋದಿ ಡಿಜಿಟಲ್ ದರೋಡೆ!

ನಾವು ಒಂದು ವಸ್ತುವನ್ನು ಯುಪಿಐ ಮೂಲಕ ಖರೀದಿಸಿದರೆ, ಅದಕ್ಕೆ ತೆರಿಗೆ ತೆರಬೇಕು....

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್...

ಇಸ್ಲಾಂಗೆ ಯುವಕ ಮತಾಂತರ; ‘ಬ್ರೇನ್‌ವಾಶ್’ ಆರೋಪ: ಇಷ್ಟದ ಧರ್ಮ ಅನುಸರಿಸುವ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್

ವಯಸ್ಕನಾದ ವ್ಯಕ್ತಿಗೆ ತನ್ನಿಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...