ಮೇಕೆದಾಟು | ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಅರ್ಜಿ ವಜಾ, ಇದು ನಮಗೆ ಸಿಕ್ಕ ನ್ಯಾಯ: ಡಿಕೆ

Date:

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.

- Advertisement -

ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮದವರು, ‘ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದು ತಮಿಳುನಾಡಿಗೆ ಹಿನ್ನಡೆಯೇ’ ಎಂದು ಕೇಳಿದಾಗ, “ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕ ನಂತರ ವಿವರವಾಗಿ ಮಾತನಾಡುತ್ತೇನೆ. ಇದು ಯಾವುದೇ ರೀತಿಯ ಹಿನ್ನಡೆಯಲ್ಲ. ಬದಲಿಗೆ ನ್ಯಾಯ ಪೀಠದಿಂದ ನ್ಯಾಯ ಸಿಕ್ಕಂತಾಗಿದೆ. ಮೇಕೆದಾಟು, ‘ನಮ್ಮ ನೀರು, ನಮ್ಮ ಹಕ್ಕು’ ಯೋಜನೆ. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಅಡ್ಡಿ ಮಾಡುತ್ತಿಲ್ಲ. ಈ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಲಾಭವಾಗಲಿದೆ. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆ ಮುಂದುವರಿಸಿಕೊಂಡು ಹೋಗುತ್ತೇವೆ. ಈ ಯೋಜನೆಯನ್ನು ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಮಾಡಲಾಗುತ್ತಿದೆ. ನೀರಿನ ಕೊರತೆ ಉಂಟಾದಾಗ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟೆ ನೆರವಾಗಲಿದೆ. ಇದು ಬೆಂಗಳೂರಿಗರ ಗೆಲುವು. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಂದ ಬರುವ ಜನರಿಗೂ ನೀರು ಒದಗಿಸಲಾಗುವುದು. ಈಗಲಾದರೂ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿಗೆ ಮನವಿ ಮಾಡುತ್ತೇನೆ. ನಾವೆಲ್ಲರೂ ಮಾನವೀಯತೆ ದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡೋಣ” ಎಂದು ಕರೆ ನೀಡಿದರು.

ಸಹಕಾರ ನೀಡದೇ ಸಿಡಬ್ಲ್ಯೂಸಿ ಮುಂದೆ ಬೇರೆ ಆಯ್ಕೆಯೇ ಇಲ್ಲ

ನ್ಯಾಯಾಲಯವು ಇಂತಹ ವಿಚಾರದಲ್ಲಿ ಕೇಂದ್ರ ಜಲ ಆಯೋಗಕ್ಕೆ (ಸಿಡಬ್ಲ್ಯೂಸಿ)ಗೆ ಮಾರ್ಗದರ್ಶನ ನೀಡಲಿದ್ದು, ನ್ಯಾಯಾಲಯ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ. ಸಿಡಬ್ಲ್ಯೂಸಿ ಈ ಯೋಜನೆಗೆ ಸಹಕಾರ ನೀಡುವುದೇ ಎಂದು ಮಾಧ್ಯಮದವರು ಕೇಳಿದಾಗ, “ಈ ಯೋಜನೆಗೆ ಅನುಮತಿ ನೀಡದೇ ಬೇರೆ ಆಯ್ಕೆ ಅವರ ಮುಂದೆ ಇಲ್ಲ. ಅವರು ನ್ಯಾಯ ಒದಗಿಸಿಕೊಡಲೇಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...