ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಬಂಧನ

Date:

ಮಾನಸಿಕ ಅಸ್ವಸ್ಥಳಾಗಿದ್ದ 19 ವರ್ಷದ ಯುವತಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಅರಹುಣಸಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಆರೋಪಿ ದುರ್ಗಪ್ಪ ಮಾದರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಯುವತಿಯ ಪೋಷಕರು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದಾಗ, ದುರ್ಗಪ್ಪ ಆಕೆಗೆ ಚಾಕೊಲೇಟ್ ನೀಡುವುದಾಗಿ ಆಮಿಷವೊಡ್ಡಿ ದೌರ್ಜನ್ಯ ಎಸಗುತ್ತಿದ್ದನು. ಈ ಕೃತ್ಯದ ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿದ್ದಾಳೆ ಎಂಬುದು ಪೋಷಕರಿಗೆ ಇತ್ತೀಚೆಗೆ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಯುವತಿ ಗರ್ಭಿಣಿಯಾಗಿರುವ ವಿಷಯ ಅರಿತ ಆರೋಪಿ, ಸತ್ಯ ಮರೆಮಾಚುವ ಉದ್ದೇಶದಿಂದ ಆಕೆಯನ್ನು ಬಾಗಲಕೋಟೆಯ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ಗರ್ಭಪಾತ ಮಾಡಿಸಲು ಯತ್ನಿಸಿದ್ದನು. ಆದರೆ, ವೈದ್ಯರು ಗರ್ಭಪಾತ ಮಾಡಲು ನಿರಾಕರಿಸಿದ ನಂತರ, ಆತ ಯುವತಿಯ ತಾಯಿಗೆ ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದನು. ಅಲ್ಲದೆ, ಪ್ರಕರಣವನ್ನು ಮುಚ್ಚಿಹಾಕಲು ತಾಯಿಗೆ 50,000 ರೂ. ಲಂಚದ ಆಮಿಷವನ್ನೂ ಒಡ್ಡಿದ್ದನು.

ಇದನ್ನೂ ಓದಿ: ವಯನಾಡು ಭೂಕುಸಿತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ; ಇನ್ನೂ ಒಬ್ಬರು ನಾಪತ್ತೆ

ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ದುರ್ಗಪ್ಪ ಮಾದರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯನ್ನು ಸದ್ಯ ಸುರಕ್ಷಿತವಾಗಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...