ಯುಪಿಐ ತೊರೆದು ನಗದು ವ್ಯವಹಾರ ಆರಂಭಿಸಿದ ವರ್ತಕರಿಗೆ ಎಚ್ಚರಿಕೆ ನೀಡಿದ ವಾಣಿಜ್ಯ ತೆರಿಗೆ ಇಲಾಖೆ

Date:

ಒಟ್ಟು ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯ ಎಂಬ ವರದಿಗಳ ನಡುವೆ ಜಿಎಸ್‌ಟಿ ವಿಧಿಸುವ ಆತಂಕಕ್ಕೆ ಒಳಗಾದ ವರ್ತಕರು ಯುಪಿಐನಂತಹ ಡಿಜಿಟಲ್ ಪಾವತಿಯನ್ನು ನಿಲ್ಲಿಸಿ ನಗದು ವಹಿವಾಟು ನಡೆಸುತ್ತಿದ್ದಾರೆ. ಈ ರೀತಿ ಮಾಡುವ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ಎಚ್ಚರಿಕೆ ನೀಡಿದೆ.

- Advertisement -

ನಗದು ವಹಿವಾಟು ಸೇರಿದಂತೆ ಯಾವುದೇ ಮಾದರಿಯ ವಹಿವಾಟಿಗೂ ಜಿಎಸ್‌ಟಿ ವಿಧಿಸಲಾಗುತ್ತದೆ. ಯುಪಿಐನಂತಹ ಡಿಜಿಟಲ್ ಪಾವತಿ ನಿಲ್ಲಿಸಿ ನಗದು ವಹಿವಾಟು ನಡೆಸುತ್ತಿರುವ ವರ್ತಕರ ಮೇಲೂ ಇಲಾಖೆ ಕಣ್ಣಿಟ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? 2,000 ರೂ.ಗೆ ಮೇಲ್ಪಟ್ಟ ಯುಪಿಐ ವಹಿವಾಟು ಮೇಲೆ ಜಿಎಸ್‌ಟಿ? ಕೇಂದ್ರ ಸರ್ಕಾರ ಸ್ಪಷ್ಟನೆ

ಜಿಎಸ್‌ಟಿ ಕಾಯ್ದೆ-2017ರ ಪ್ರಕರಣ 22ರ ನಿಯಮಗಳನ್ನು ಇಲಾಖೆಯು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಕಾಯ್ದೆ ಪ್ರಕಾರ ಸರಕುಗಳ ಪೂರೈಕೆದಾರರ ಒಟ್ಟು ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ಮತ್ತು ಸೇವೆಗಳ ಪೂರೈಕೆದಾರರ ವಾರ್ಷಿಕ ವಹಿವಾಟು 20 ಲಕ್ಷ ರೂಪಾಯಿ ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯವಾಗಿದೆ.

ಈ ವಹಿವಾಟಿನಲ್ಲಿ ನಗದು, ಯುಪಿಐ, ಪಿಓಎಸ್‌ ಮೆಷಿನ್‌, ಬ್ಯಾಂಕ್‌ ಖಾತೆ ಸೇರಿದಂತೆ ಎಲ್ಲ ವಿಧಾನದ ವಹಿವಾಟು ಕೂಡ ಸೇರುತ್ತದೆ ಎಂದು ಇಲಾಖೆಯ ಹೆಚ್ಚುವರಿ ಆಯುಕ್ತರು ಹೇಳಿದ್ದಾರೆ.

ಇನ್ನು ವಾರ್ಷಿಕವಾಗಿ 1.5 ಕೋಟಿ ರೂಪಾಯಿಗಿಂತ ಕಡಿಮೆ ವಹಿವಾಟು ಇರುವ ವ್ಯಾಪಾರಿಗಳು ಜಿಎಸ್‌ಟಿ ಅಡಿ ನೋಂದಣಿ ಪಡೆದು ರಾಜಿ ತೆರಿಗೆ ಪದ್ಧತಿ ಆಯ್ಕೆ ಮಾಡಿಕೊಳ್ಳಬಹುದು. ಇದರಡಿ ಶೇ 0.5ರಷ್ಟು ಎಸ್‌ಜಿಎಸ್‌ಟಿ ಮತ್ತು ಶೇ 0.5ರಷ್ಟು ಸಿಜಿಎಸ್‌ಟಿ ಪಾವತಿಸಬೇಕಾಗುತ್ತದೆ. ಆದರೆ ನೋಂದಣಿ ಪಡೆಯದೆ ವಹಿವಾಟು ನಡೆಸಿದರೆ ರಾಜಿ ತೆರಿಗೆ ಪದ್ಧತಿ ಅನ್ವಯಿಸಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...