ಮೆಟ್ರೋ ಯೋಜನೆಗೆ ಕೇಂದ್ರದಿಂದ ಬೆಂಗಳೂರಿಗೆ 10%, ಅಹಮದಾಬಾದ್‌ಗೆ 20% ಅನುದಾನ : ಡಿ ಕೆ ಸುರೇಶ್

Date:

ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ತಿರುಗೇಟು ನೀಡಿದ್ದಾರೆ.

- Advertisement -

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಮೆಟ್ರೋ ದರ ಏರಿಕೆ ವಿಚಾರವಾಗಿ ತೇಜಸ್ವಿ ಸೂರ್ಯ ಅವರು ಮೆಟ್ರೋ ನಿಲ್ದಾಣ ಬಳಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಮೆಟ್ರೋ ದರ ಏರಿಕೆ ಬಗ್ಗೆ ಅವರು ಮಾತನಾಡುವುದೇನೆ ಇದ್ದರೂ ಅದು ಪ್ರಧಾನಮಂತ್ರಿಗಳ ಮುಂದೆ ಮಾತನಾಡಲಿ. ಮೆಟ್ರೋ ನಮ್ಮ ಯೋಜನೆ ಎಂದು ಪ್ರಚಾರ ಪಡೆಯುತ್ತಿರುವವರು ಯಾರು? ತೇಜಸ್ವಿ ಸೂರ್ಯ ಅವರು ಮೆಟ್ರೋ ನಮ್ಮ ಕೊಡುಗೆ ರಾಜ್ಯ ಸರಕಾರದ್ದಲ್ಲ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಮೆಟ್ರೋ ಕೇಂದ್ರ ಸರಕಾರದ ಸಮಿತಿ ಕೈಯಲ್ಲಿದೆ. ಆ ಸಮಿತಿ ತೀರ್ಮಾನದಂತೆ ಮೆಟ್ರೋ ದರ ಏರಿಕೆ ಮಾಡಲಾಗುತ್ತದೆ. ದರ ಏರಿಕೆ ಆಗಬಾರದು ಎಂಬುದೂ ನಮ್ಮ ಇಚ್ಛೆ. ತೇಜಸ್ವಿ ಸೂರ್ಯ ಅವರ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದು, ಅವರು ತೀರ್ಮಾನ ಮಾಡಿ ಜನರಿಗೆ ಅನುಕೂಲ ಮಾಡಿಕೊಡಲಿ” ಎಂದು ಸುರೇಶ್ ಅವರು ವಾಗ್ದಾಳಿ ನಡೆಸಿದರು.

“ಅವರು ಖಾಲಿ ಟ್ರಂಕ್ ಹಿಡಿದಿರುವುದು, ಕರ್ನಾಟಕದ 4.5- 5 ಲಕ್ಷ ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿಕೊಂಡು ಹೋಗುತ್ತಿರುವುದನ್ನು ತೋರಿಸಲು. ಕೇಂದ್ರ ಸರಕಾರ ಕಳೆದ 12 ವರ್ಷಗಳಿಂದ ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಪಟ್ಟಿ ಹೇಳಲಿ. ಬೆಂಗಳೂರಿಗೆ ಅವರ ಕೊಡುಗೆ ಖಾಲಿ ಡಬ್ಬ ಎಂದು ತೇಜಸ್ವಿ ಸೂರ್ಯ ತೋರಿಸುತ್ತಿರುವುದನ್ನು ಮಾಧ್ಯಮಗಳು ಚೆನ್ನಾಗಿ ತೋರಿಸಿ” ಎಂದು ಕಿಡಿಕಾರಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ|ಮೋದಿ ರಾಜಿ ರಾಜಕಾರಣದಿಂದ ಭಾರತದ ಸ್ವಾಭಿಮಾನ- ಸಾರ್ವಭೌಮತೆಗೆ ಧಕ್ಕೆ

ಮೆಟ್ರೋ ಯೋಜನೆಗಳಿಗೆ ರಾಜ್ಯ ಸರಕಾರ ಹಣ ನೀಡದಿರುವುದಕ್ಕೆ ದರ ಏರಿಕೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ನಮ್ಮ ರಾಜ್ಯದ ಮೆಟ್ರೋ ಯೋಜನೆಗಳಿಗೆ 10% ಹಣ ನೀಡುತ್ತದೆ. ರಾಜ್ಯ ಸರ್ಕಾರ 10% ಹಣದ ಜೊತೆಗೆ ಯೋಜನೆ ಜಾರಿಗೆ ಅಗತ್ಯವಿರುವ ಭೂಸ್ವಾಧೀನ ಪರಿಹಾರ ಮೊತ್ತವನ್ನು ಭರಿಸಬೇಕು. ಇದರಿಂದ ರಾಜ್ಯ ಸರ್ಕಾರದ ಪಾಲು ಸುಮಾರು 17%ರಷ್ಟು ಇರುತ್ತದೆ. ಉಳಿದ ಹಣವನ್ನು ಸಾಲದ ರೂಪದಲ್ಲಿ ಪಡೆಯಲಾಗುವುದು. ಅದರ ಹೊರೆ ಪ್ರಯಾಣಿಕರ ಮೇಲೆ ಬೀಳುತ್ತದೆ. ಸಮಯ ಸಿಕ್ಕಾಗ ಮೆಟ್ರೋ ನಮ್ಮದು ಎಂದು ಶೋ ಕೊಟ್ಟು, ಈಗ ಖಾಲಿ ಡಬ್ಬ ತೋರುತ್ತಿದ್ದಾರೆ” ಎಂದು ಹರಿಹಾಯ್ದರು.

“ಬೆಂಗಳೂರಿನಲ್ಲಿ ವಾಹನ ದಟ್ಟಣೆಗೆ ಕಾರಣವಾಗಿರುವುದು ಕೇಂದ್ರ ಸರ್ಕಾರ. ನಮ್ಮ ಐಟಿ ಬಿಟಿ ತೆರಿಗೆ ಹಾಗೂ ಬೆಂಗಳೂರಿನ ಜಿಎಸ್ ಟಿ ಸೇರಿ ವಾರ್ಷಿಕವಾಗಿ 5 ಲಕ್ಷ ಕೋಟಿ ಹಣವನ್ನು ಕೇಂದ್ರ ಸರ್ಕಾರ ಪಡೆಯುತ್ತಿದೆ. ಅದರಲ್ಲಿ ನಮಗೆ ವಾಪಸ್ ನೀಡುತ್ತಿರುವುದು ಕೇವಲ 10% ಅಂದರೆ 50 ಸಾವಿರ ಕೋಟಿ ಮಾತ್ರ. ಉಳಿದ ಹಣ ಗುಜರಾತ್, ಅಹಮದಾಬಾದ್, ಉತ್ತರ ಪ್ರದೇಶ, ಬಿಹಾರಕ್ಕೆ ಹೋಗುತ್ತಿದೆ. ತೇಜಸ್ವಿ ಸೂರ್ಯ ಅವರು ಪ್ರಧಾನಿ ಮುಂದೆ ಭಾಷಣ ಮಾಡಿ ತಮ್ಮ ಎದೆಗಾರಿಕೆ ತೋರಿ ರಾಜ್ಯಕ್ಕೆ ಹಣ ತರಲಿ. ಕೇಂದ್ರ ಸರ್ಕಾರ ಅಹಮದಾಬಾದ್ ಮೆಟ್ರೋಗೆ 20% ಅನುದಾನ ನೀಡುತ್ತಿದೆ. ಅವರಿಗೊಂದು ನ್ಯಾಯ, ನಮಗೊಂದು ನ್ಯಾಯ. ಕರ್ನಾಟಕಕ್ಕೂ 20% ಅನುದಾನ ಕೊಟ್ಟರೆ ಸಾರ್ವಜನಿಕರ ಮೇಲೆ ಹೊರೆ ಕಡಿಮೆ ಆಗುತ್ತದೆ ಅಲ್ಲವೇ? ಈ ಬಗ್ಗೆ ಮಾಧ್ಯಮಗಳು ಸಾರ್ವಜನಿಕರನ್ನು ಜಾಗೃತಿಗೊಳಿಸಬೇಕು” ಎಂದು ಸವಾಲೆಸೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...