ಮತ್ತೆ ಏರಲಿದೆ ಹಾಲಿನ ದರ; 3ರಿಂದ 5 ರೂ. ಹೆಚ್ಚಳ ಸಾಧ್ಯತೆ

Date:

ಹಾಲಿದ ದರ ಏರಿಕೆಯಾಗಿ ಇನ್ನೂ ಒಂದು ವರ್ಷವೂ ಕಳೆದಿಲ್ಲ. ಇದೀಗ, ಮತ್ತೆ ದರ ಹಚ್ಚಳದ ಚರ್ಚೆ ನಡೆಯುತ್ತಿವೆ. ಹಾಲಿನ ದರದಲ್ಲಿ 3ರಿಂದ 5 ರೂ.ಗೆ ಹೆಚ್ಚಿಸುವ ಬಗ್ಗೆ ಚರ್ಚೆಗಳು ನಡೆದಿದ್ದು 3 ರೂ. ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ಕರ್ನಾಟಕ ಹಾಲು ಮಹಾ ಮಂಡಳಿಯು ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಿಸಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಶು ಸಂಗೋಪನಾ ಸಚಿವ ಕೆ ವೆಂಕಟೇಶ್, ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯಕ್ ಹಾಗೂ ಅಧಿಕಾರಿಗಳು ಸಭೆ ನಡೆಸಿದ್ದಾರೆ. 5 ರೂ. ಬದಲಿಗೆ 3 ರೂ. ಹೆಚ್ಚಳಕ್ಕೆ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ದರ ಏರಿಕೆ ವಿಚಾರ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆಯಾದ ಬಳಿಕ, ಸರ್ಕಾರವು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಸಂಪುಟ ಸಭೆಯು ದರ ಏರಿಕೆಗೆ ಸಮ್ಮತಿಸಿದರೆ, ಪ್ರತಿ ಲೀಟರ್ ಹಾಲಿಗೆ 3 ರೂ. ಏರಿಕೆ ಆಗಲಿದೆ ಎಂದು ಹೇಳಲಾಗಿದೆ.

“ಹಾಲು ಒಕ್ಕೂಟಗಳು ಮತ್ತು ಹಾಲು ಉತ್ಪಾದಕರ ಬೇಡಿಕೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಲಾಗಿದೆ. ಸಭೆಯಲ್ಲಿ ದರ ಏರಿಕೆ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಬಗ್ಗೆ ತಿಳಿಸುತ್ತಾರೆ” ಎಂದು ಭೀಮಾ ನಾಯ್ಕ್ ಹೇಳಿದ್ದಾರೆ.

Advertisements

ರಾಜ್ಯದಲ್ಲಿ ಸರ್ಕಾರ ಬದಲಾದ ಬಳಿಕ ಎರಡು ಬಾರಿ ಹಾಲಿನ ದರ ಏರಿಕೆ ಮಾಡಲಾಗಿದೆ. 2023ರ ಆಗಸ್ಟ್‌ನಲ್ಲಿ ಪ್ರತಿ ಲೀಟರ್‌ ಹಾಲಿಗೆ 3 ರೂ. ಹೆಚ್ಚಿಸಲಾಗಿತ್ತು. ಆನಂತರ, 2024ರ ಜೂನ್‌ 26ರಲ್ಲಿ ಲೀಟರ್ ಹಾಲಿಗೆ 2 ರೂ. ಹೆಚ್ಚಿಸಿ, 50 ಎಂಎಲ್‌ ಹೆಚ್ಚುವರಿ ಹಾಲು ವಿತರಿಸಲಾಗುತ್ತಿತ್ತು. ಇದೀಗ, ಮತ್ತೊಮ್ಮೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...