ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ: ರಾಜ್ಯಪಾಲರ ವಿರುದ್ಧ ಕರವೇ ಕಿಡಿ

Date:

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕಿಡಿ ಕಾರಿದ್ದು, ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟು ಮೂಟೆ ಹೊತ್ತು ಹೊರಡಿ ಎಂದು ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ನೀವು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ. ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ” ಎಂದು ಖಾರವಾಗಿ ನುಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

ಇದನ್ನು ಓದಿ>>ಹಿಂದಿ ಹೇರಿಕೆ ಪರ ಹೇಳಿಕೆ: ರೊಚ್ಚಿಗೆದ್ದ ಕರವೇಯಿಂದ ಶೋಭಾ ಕರಂದ್ಲಾಜೆ ಪ್ರತಿಕೃತಿ ದಹನಕ್ಕೆ ಯತ್ನ

“ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ” ಎಂದು ಅವರು ಹೇಳಿದ್ದಾರೆ.

“ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ʻಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʻದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದನ್ನು ಕೇಳಿ ಆಶ್ಚರ್ಯವಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ನಮಗೆ ತಿಳಿದಿರಲಿಲ್ಲ. ಈ ರೀತಿಯ ನಾಟಕಗಳನ್ನು ನಾವು ಎಷ್ಟೋ ನೋಡಿದ್ದೇವೆ. ಇಂಥ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ” ಎಂದು ಅವರು ಎಚ್ಚರಿಸಿದ್ದಾರೆ.

“ರಾಜ್ಯಪಾಲರ ಹುದ್ದೆ ಎಂಬುದೇ ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೆ ನುಸುಳಿಕೊಂಡಿರುವ ರಾಜಶಾಹಿ ವ್ಯವಸ್ಥೆಯ ಒಂದು ಪಳೆಯುಳಿಕೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಇನ್ಯಾರೋ ಇಲ್ಲಿ ರಾಜರಂತೆ ಮೆರೆಯುವುದು ಸಾಧ್ಯವಿಲ್ಲ. ನಿಮ್ಮ ಈ ಅಧಿಕಪ್ರಸಂಗದ ಪತ್ರ ರಾಜ್ಯಪಾಲರ ವ್ಯವಸ್ಥೆ ನಮ್ಮ ದೇಶಕ್ಕೆ ಬೇಕೇ ಎಂಬ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಂತಾಗಿದೆ.

“ಜನರಿಂದ ಆಯ್ಕೆಯಾದ ಸರ್ಕಾರದ ದೈನಂದಿನ ಆಡಳಿತದ ತೀರ್ಮಾನದ ಕುರಿತು ಪತ್ರ ಬರೆಯಲು ನಿಮಗೆ ಯಾವುದೇ ಹಕ್ಕಿಲ್ಲ. ಒಂದು ವೇಳೆ ನೀವು ಸಾಮಾನ್ಯ ನಾಗರಿಕರಾಗಿ ಈ ಪತ್ರವನ್ನು ಬರೆದಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತ್ರಿಭಾಷಾ ನೀತಿ ಅನ್ವಯ ಕನ್ನಡವನ್ನು ಮೂರನೇ ಭಾಷೆಯನ್ನಾಗಿ ಅಲ್ಲಿನ ಮಕ್ಕಳಿಗೆ ಕಲಿಸಲು ಹೇಳಿ” ಎಂದು ಸಲಹೆ ನೀಡಿರುವ ನಾರಾಯಣಗೌಡರು, “ನಿಮಗೆ ಆ ಧೈರ್ಯವಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕರ್ನಾಟಕದ ನೆಲದಲ್ಲಿ ನಿಂತು ಮಾತನಾಡಬೇಡಿ. ತೃತೀಯ ಭಾಷೆಯ ಮೇಲಿನ ಪ್ರೇಮವನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಉಕ್ಕಿ ಹರಿಸಿ. ಪಾಪ, ಅಲ್ಲಿನ ಮಕ್ಕಳು ಇದುವರೆಗೆ ಎರಡೇ ಭಾಷೆಗಳನ್ನು ಓದಿಕೊಂಡು ಬಂದಿದ್ದಾರೆ” ಎಂದು ಹೇಳಿದ್ದಾರೆ.

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡದ ಜನತೆಯನ್ನುಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಧಗಧಗಿಸುವ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ” ಎಂದು ಅವರು ಎಚ್ಚರಿಸಿದ್ದಾರೆ.

ಮಾನ್ಯ ರಾಜ್ಯಪಾಲರೇ, ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ, ನಿಮಗೆ ಆ ಅಧಿಕಾರವನ್ನು ಕರ್ನಾಟಕದ ಜನತೆ ಕೊಟ್ಟಿಲ್ಲ. ಲೋಕಭವನದಲ್ಲಿ ನಿಮ್ಮ ಉಪಚಾರಕ್ಕೆ ಏನಾದರೂ ಕೊರತೆಯಾಗಿದ್ದರೆ ಕೇಳಿ, ವ್ಯವಸ್ಥೆ ಮಾಡಿಕೊಡೋಣ. ಬೇರೆ ಉಸಾಬರಿಯನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ ಎಂದು ಅವರು ವ್ಯಂಗ್ಯವಾಗಿ ನುಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿ’: ಉದ್ಯಮಗಳಿಗೆ ಸಿಎಂ ಒಮರ್ ಅಬ್ದುಲ್ಲಾ ಎಚ್ಚರಿಕೆ!

ಕೇಂದ್ರಾಡಳಿತ ಪ್ರದೇಶದಲ್ಲಿ ಉದ್ಯಮಗಳನ್ನು ಸ್ಥಾಪಿಸುವ ಕಂಪನಿಗಳು ಸ್ಥಳೀಯ ಯುವಕರಿಗೆ ಉದ್ಯೋಗ ನೀಡಲೇಬೇಕು...

ಜನರ ಆರೋಗ್ಯ ರಕ್ಷಣೆಯಲ್ಲೂ ಪ್ರಾದೇಶಿಕ ತಾರತಮ್ಯ: ತಲಾವಾರು ವೆಚ್ಚದಲ್ಲಿ ಬಿಹಾರ ಕೊನೆ, ಸಿಕ್ಕಿಂಗೆ ಅಗ್ರಸ್ಥಾನ

ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ಕಾರಗಳು ಆರೋಗ್ಯ ಕ್ಷೇತ್ರಕ್ಕೆ...

ದಾಖಲೆ ಇಲ್ಲದೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಲವಂತವಾಗಿ ಒಳನುಗ್ಗಲು ಯತ್ನಿಸಿದ ವ್ಯಕ್ತಿ ವಶಕ್ಕೆ

ಮಾನ್ಯ ಪ್ರಯಾಣ ದಾಖಲೆಗಳಿಲ್ಲದೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ...

‘ಅಕ್ವಾನ್’ ತೀವ್ರ ಚಂಡಮಾರುತ: ಒಡಿಶಾದಲ್ಲಿ 46 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ

ಪಶ್ಚಿಮ–ಮಧ್ಯ ಬಂಗಾಳಕೊಲ್ಲಿಯಲ್ಲಿ ಕೇಂದ್ರೀಕೃತವಾಗಿರುವ ‘ಅಕ್ವಾನ್’ ತೀವ್ರ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾ ರಾಜ್ಯದಲ್ಲಿ...