ಕರಾವಳಿ ಭಾಗದಲ್ಲಿ ಉಷ್ಣಾಂಶ ಅಧಿಕವಾಗಿರುವಾಗ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಚಳಿ ಹೆಚ್ಚಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ತಾಪಮಾನ ಕೊಂಚ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ರಾಜ್ಯದ ಒಳಭಾಗದ ಕೆಲವು ಸ್ಥಳಗಳಲ್ಲಿ ಮಂಜು ಆವರಿಸಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇದನ್ನು ಓದಿದ್ದೀರಾ? ಕರ್ನಾಟಕದ 25 ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ: ಹವಾಮಾನ ಇಲಾಖೆ
ಇನ್ನು ರಾಜ್ಯದ ಒಳನಾಡಿನಲ್ಲಿ ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಯಾವುದೇ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿಲ್ಲ ಎಂದು ಹೇಳಿದೆ.
ಈ ದಿನದ ಮಳೆ ಭವಿಷ್ಯ ಮತ್ತು ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು:#KSNDMC pic.twitter.com/xej2SoNFfW
— Karnataka State Natural Disaster Monitoring Centre (@KarnatakaSNDMC) December 31, 2024
ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತು 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.
