ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

Date:

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ ಮಾತನಾಡಲು ಅವಕಾಶ ನಿರಾಕರಿಸಲಾಗಿದೆ ಎಂದು ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

- Advertisement -

“ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ – ನನ್ನ ಭಾಷಣ ಕಟ್!” ಎಂದು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಸಚಿವರು, ಮೆಟ್ರೋ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರಿಗೆ ಮಾತನಾಡಲು ಅವಕಾಶ ನೀಡದಿರುವ ಬಗ್ಗೆ ಬೇಸರ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಇದನ್ನೂ ಓದಿ: ಕಳಪೆ ಕಾಮಗಾರಿ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಠಿಣ ಕ್ರಮ; ಅಧಿಕಾರಿ ಅಮಾನತು

“ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಅವಕಾಶವಿಲ್ಲ. ಸಭಾ ಕಾರ್ಯಕ್ರಮದ ಡ್ರಾಫ್ಟ್‌ನಲ್ಲಿ ನನ್ನ ಮಾತಿಗೆ ಅವಕಾಶ ನಿಗದಿಯಾಗಿತ್ತು. ನಿನ್ನೆ ರಾತ್ರಿ ಬಂದ ಅಂತಿಮ ಪಟ್ಟಿಯಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರ ಮಾತನ್ನು ಕಟ್ ಮಾಡಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬಹುತೇಕ ಬಂಡವಾಳ ಖರ್ಚು ನಮ್ಮದು. ಕರ್ನಾಟಕಕ್ಕೆ ನ್ಯಾಯಯುತ ಪಾಲು ಕೇಳಿದರೆ ಈ ರೀತಿ ಶಿಕ್ಷೆ ನೀಡಲಾಗುತ್ತದೆ. ಪರವಾಗಿಲ್ಲ, ನೀವು ನನ್ನ ಮಾತನ್ನು ಕಟ್ ಮಾಡಬಹುದು. ಆದರೆ ಬೆಂಗಳೂರಿನ ಅಭಿವೃದ್ಧಿಗೆ ಕೆಲಸ ಮಾಡೋದನ್ನು ನಿಲ್ಲಿಸಲಿಕ್ಕೆ ಆಗೋದಿಲ್ಲ. ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...