ಕಬ್ಬಿನ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಎಚ್ಚರಿಕೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ

Date:

Advertisements

ರೈತರು ನೀಡುವ ಕಬ್ಬಿನ ಮೇಲೆ ಸಕ್ಕರೆ ಕಾರ್ಖಾನೆಗಳು ನಡೆಯುತ್ತಿದ್ದು, ರೈತರಿಗೆ ಕಷ್ಟಗಳಿಗೆ ಸ್ಪಂದಿಸಿ 14 ದಿನದೊಳಗಾಗಿ ಕಬ್ಬು ಸರಬರಾಜು ಮಾಡುವ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಹಾಗೂ ರೈತರ ಸಭೆ ನಡೆಸಿ ಮಾತನಾಡಿದರು. ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಅವರು 29 ಕೋಟಿ ರೂಪಾಯಿ ಹಣ ರೈತರಿಗೆ ಪಾವತಿಸುವುದು ಬಾಕಿ ಇದೆ. ಪ್ರತಿ ವಾರ 4 ರಿಂದ 5 ಕೋಟಿ ರೂಪಾಯಿ ಹಣ ಪಾವತಿಸಿ. ಮಾಚ್೯ 15ರ ನಂತರ ಬಾಕಿ ಇದ್ದರೆ ಬಡ್ಡಿ ಸಮೇತ ವಸೂಲಿ ಮಾಡಿ ರೈತರಿಗೆ ನೀಡಲಾಗುವುದು ಎಂದರು.

ಇದನ್ನು ಓದಿದ್ದೀರಾ? ಬೀದರ್‌ | ಕಟಾವಿಗೆ ಬಂದ 2 ಎಕರೆ ಕಬ್ಬು ಬೆಂಕಿಗಾಹುತಿ

Advertisements

ಕೊಪ್ಪ‌ ಸಕ್ಕರೆ ಕಾರ್ಖಾನೆ ಅವರು ಬಾಕಿ ಇರುವ 7 ಕೋಟಿ ರೂ ಹಣವನ್ನು ಫೆಬ್ರವರಿ ಅಂತ್ಯದೊಳಗೆ‌ ಪಾವತಿಸುವಂತೆ ಸೂಚನೆ ನೀಡಿದರು. ಹಾಗೆಯೇ ಕಬ್ಬು ಕಟಾವಿಗೆ ಸಂಬಂಧಿಸಿದಂತೆ ಒಂದೊಂದು ರೀತಿಯಲ್ಲಿ ದರವನ್ನು ರೈತರಿಂದ ವಸೂಲಿ‌ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸಭೆ ನಡೆಸಿ ಏಕರೂಪ ದರ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

ರೈತರ ಜೀವನಾಡಿಯಾಗಿರುವ ಸಕ್ಕರೆ ಕಾರ್ಖಾನೆಯನ್ನು ಉಳಿಸಿ ಬೆಳಸಲು ಶ್ರಮಿಸುತ್ತಿದ್ದು, ರೈತರು ಮೈ ಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡಲಾಗುವುದೇ ಎಂದು ನನ್ನನ್ನು ಪ್ರಶ್ನಿಸಿದರೆ ನೋವಾಗುತ್ತದೆ ಎಂದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮಾತನಾಡಿ ಸರ್ಕಾರಿ ಸೌಮ್ಯದಲ್ಲಿರುವ ಕಂಪನಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ನಡೆಸಲಾಗುತ್ತದೆ. ಪ್ರತಿ ವರ್ಷ ಲಾಭ ನಷ್ಟ ಕುರಿತು ಆಡಿಟ್ ಮಾಡಲಾಗುವುದು. ಮುಖ್ಯಮಂತ್ರಿಗಳು ಹಾಗೂ ಶಾಸಕರು ಮುಂದಾಳತ್ವ ತೆಗೆದುಕೊಂಡು ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನ ಮಾಡಲಾಗಿದೆ. ಮೈ ಶುಗರ್ ಕಂಪನಿಯನ್ನು ಖಾಸಗೀಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಇದನ್ನು ಓದಿದ್ದೀರಾ? ಕೊನೆ ಕ್ಷಣದಲ್ಲಿ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಮುಂದೂಡಿಕೆ; ಕೃಷಿ ಸಚಿವರ ವಿರುದ್ಧ ಆಕ್ರೋಶ

ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಮಾತನಾಡಿ, “ಜೂನ್ ಎರಡನೇ ವಾರದಲ್ಲಿ ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದರು‌

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಅವರು ರೈತರ ಕಬ್ಬು ನುರಿಸಿ 14 ದಿನ ಮೇಲ್ಪಟ್ಟರು 4,000 ರೈತರ 29 ಕೋಟಿ ರೂಪಾಯಿ ಹಣ ಪಾವತಿಸಬೇಕಿದೆ. ಮಾರ್ಚ್ 15ರೊಳಗೆ ಪಾವತಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹಾಜರಿದ್ದ ರೈತ ಮುಖಂಡರು

ರೈತರು 14 ದಿನದೊಳಗೆ ರೈತರಿಗೆ ಹಣ ಪಾವತಿಸಿಲ್ಲ. ಇದರಿಂದ ಬಡ್ಡಿ ಸೇರಿಸಿ ರೈತರಿಗೆ ಹಣ ಪಾವತಿಸಬೇಕು. 14 ದಿನದೊಳಗೆ ಹಣ ಪಾವತಿ ಮಾಡದಿದ್ದಲ್ಲಿ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ರೈತರ ಆರ್ಥಿಕ ಪರಿಸ್ಥಿತಿ ಗಂಭೀರವಾಗಿರುವುದು ಕಷ್ಟದ ವಿಷಯವಾಗಿದೆ. ಕಬ್ಬು ಕಟಾವಿಗೆ ದರ ನಿಗದಿಯಾಗಬೇಕು. ಮೈ ಶುಗರ್ ಲಾಭ ನಷ್ಟ ಕುರಿತು ವರದಿ ನೀಡಬೇಕು ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಸೇರಿದಂತೆ ರೈತ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X