ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Date:

ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಭಾರತೀಯ ವಾಯು ಪಡೆ ಮಾ.1ರಂದು ಎಫ್.ಸಿ. (ಅರಣ್ಯ ತೀರುವಳಿ) ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಾಣ ಕಾಮಗಾರಿ ಆರಂಭಿಸಿತ್ತು. ಇದನ್ನು ತಡೆಯಲಾಗಿದೆ ಎಂದು ಅರಣ್ಯಾಧಿಕಾರಿಗಳು ಇಂದು ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ಈ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

ಸರ್ಕಾರದ 2017ರ ಆದೇಶದನ್ವಯ ಮ್ಯುಟೇಷನ್ ಆಗಿದ್ದು, ಪ್ರಸ್ತುತ ಈ ಜಮೀನಿನ ಪಹಣಿಯಲ್ಲಿ ಮೀಸಲು ಅರಣ್ಯ ಎಂದು ನಮೂದಾಗಿದೆ. ಅರಣ್ಯ ಇಲಾಖೆ ಈ ವಿಷಯವನ್ನು ವಾಯುಪಡೆಯ ಅಧಿಕಾರಿಗಳ ಗಮನಕ್ಕೆ ತಂದು ಸದರಿ ಜಮೀನು, ಮೀಸಲು ಅರಣ್ಯ ಎಂಬ ಫಲಕವನ್ನೂ ಹಾಕಿದೆ. ಈ ಅರಣ್ಯ ಭೂಮಿ ತೆರವು ಮಾಡುವಂತೆ ರಕ್ಷಣಾ ಸಚಿವಾಲಯಕ್ಕೆ ಪತ್ರವನ್ನೂ ಬರೆಯಲಾಗಿದೆ. ಸಂಪೂರ್ಣ ಮಾಹಿತಿ ಇದ್ದರೂ ವಾಯುಪಡೆ ಅನಧಿಕೃತವಾಗಿ, ನಿಯಮ ಮೀರಿ ನಿರ್ಮಾಣ ಕಾಮಗಾರಿ ನಡೆಸುತ್ತಿತ್ತು, ಪ್ರಸ್ತುತ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಸ್ತುತ 444 ಎಕರೆ ಜಮೀನಿನ ಪೈಕಿ ಸುಮಾರು 15 ಎಕರೆ ಪ್ರದೇಶದಲ್ಲಿ ವಾಯುಪಡೆ ಶೂಟಿಂಗ್ ರೇಂಜ್ ನಿರ್ಮಿಸಿಕೊಂಡು ತರಬೇತಿ ನೀಡುತ್ತಿದೆ. ಸ್ವಲ್ಪ ಜಮೀನಿನಲ್ಲಿ ವಾಯುಪಡೆಯ ಕಚೇರಿ ಇತ್ಯಾದಿ ನಿರ್ಮಿಸಿದೆ. ಉಳಿದ ಭೂಮಿ ಅರಣ್ಯ ಸ್ವರೂಪದಲ್ಲೇ ಇದ್ದು, ಮರ, ಗಿಡಗಳಿಂದ ಸಮೃದ್ಧವಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ಕೂಡಲೇ ಅರಣ್ಯ ಸ್ವರೂಪದ ಜಮೀನನ್ನು ವಶಕ್ಕೆ ಪಡೆಯಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಮತ್ತು ವಾಯುಪಡೆ ಬಳಕೆ ಮಾಡುತ್ತಿರುವ ಜಮೀನಿಗೆ ಸಂಬಂಧಿಸಿದಂತೆ ಪರ್ವೇಶ್ ಪೋರ್ಟಲ್ ನಲ್ಲಿ ನಿಯಮಾನುಸಾರ ಅರ್ಜಿ ಹಾಕಿ ಎಫ್.ಸಿ. ಪಡೆಯಲು ವಾಯುಪಡೆಗೆ ಪತ್ರ ಬರೆಯಲು ಈಶ್ವರ ಖಂಡ್ರೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...

ಸೇವೆ ಮೊದಲು, ಪರಿಶೀಲನೆ ಆಮೇಲೆ: ಫಲಾನುಭವಿಗಳಿಗೆ ತ್ವರಿತ ಸೇವೆ ನೀಡಲು ರಾಜ್ಯ ಸರ್ಕಾರದ ಹೊಸ ಆದೇಶ

ರಾಜ್ಯ ಸರ್ಕಾರವು ನಾಗರಿಕರಿಗೆ ಮುಂಚಿತವಾಗಿ ಅರ್ಹತೆಯ ಪರಿಶೀಲನೆಯಿಲ್ಲದೆ ಸೇವೆಗಳು ಮತ್ತು ಯೋಜನೆಯ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...