ಭೂಕಬಳಿಕೆದಾರರ ವಿರುದ್ಧ ಕಠಿಣ ಕ್ರಮ, ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

Date:

Advertisements

ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ ಭೂಮಿಯನ್ನು ಸಂರಕ್ಷಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ತುಮಕೂರು ಜಿಲ್ಲೆ ಕಳ್ಳಂಬೆಳ್ಳ ಹೋಬಳಿ ಶೀಬಿ ಅರಣ್ಯ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, “ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ. ಹೀಗಾಗಿ ಅರಣ್ಯ ಸಿಬ್ಬಂದಿ ಕಟ್ಟೆಚ್ಚರದಿಂದ ಇರಬೇಕು” ಎಂದರು.

“ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ಡಿನೋಟಿಫಿಕೇಷನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ ಎಂದು ಹೇಳಿದ್ದು, ಡಿನೋಟಿಫಿಕೇಷನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದುಪಡಿಸುವಂತೆ ಎ.ಸಿ. ನ್ಯಾಯಾಲಯದಲ್ಲಿ ದಾವೆ ಹೂಡುವಂತೆ” ಸೂಚಿಸಿದರು.

Advertisements

“ಭೂಮಾಫಿಯಾದವರು ಬಡವರನ್ನು ಮುಂದಿಟ್ಟುಕೊಂಡು ಬೆಲೆಬಾಳುವ ಭೂಮಿ ಕಬಳಿಸಲು ಯತ್ನಿಸುತ್ತಾರೆ. ಅರಣ್ಯ ಭೂಮಿಯನ್ನು ಕಬಳಿಸಲು ಯತ್ನಿಸುವವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಿ” ಎಂದು ಸೂಚಿಸಿದರು.

“ಪ್ರಕೃತಿ, ಪರಿಸರ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಮ್ಮ ಸಂವಿಧಾನ ಸಾರುತ್ತದೆ, ಸರ್ವೋನ್ನತ ನ್ಯಾಯಾಲಯ ಕೂಡ ಹಲವು ಪ್ರಕರಣಗಳಲ್ಲಿ ಇದನ್ನೇ ಪುನರುಚ್ಚರಿಸಿದೆ. ಹೀಗಾಗಿ ಅರಣ್ಯ ಸಂರಕ್ಷಣೆಯ ಹೊಣೆ ಹೊತ್ತು ಅಧಿಕಾರಿಗಳು ಅರಣ್ಯ ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ತಿಳಿಸಿದರು.

“ಟಿ.ಬಿ. ಜಯಚಂದ್ರ ಅವರು ಕೂಡ ಈ ಅರಣ್ಯ ಸಂರಕ್ಷಿಸಲು ಬೇಲಿ ಹಾಕುವ ಪ್ರಸ್ತಾವನೆ ನೀಡಿದ್ದು, ಅರಣ್ಯ ಸಚಿವರಾಗಿ ಈ ಅರಣ್ಯವು ಭೂ ಮಾಫಿಯಾ ಪಾಲಾಗದಂತೆ ಉಳಿಸಲು ಎಲ್ಲ ಸಾಧ್ಯ ಪ್ರಾಮಾಣಿಕ ಪ್ರಯತ್ನ ಮಾಡುವೆ” ಎಂದು ಭರವಸೆ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ವಕೀಲರಾದ ಸೂರ್ಯ ಮುಕುಂದರಾಜ್ ಮತ್ತಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Hats up eshwar kandre sir and jayachandra sir.alli matra alla sir Yella kade aranya kadidu tota agtide kasiddorella beli haki kadanna swanta madkoltidare.dayavittu adannu tadiri.bhumina smashana madtidare.prani pakshigalu yelli hogbeku

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X