ಮೃತಪಟ್ಟ ಬಾಣಂತಿ; ಆರ್ಥಿಕ ಸಂಕಷ್ಟಲ್ಲಿದ್ದ ಕುಟುಂಬಕ್ಕೆ ಸಚಿವ ಜಮೀರ್ ನೆರವು

Date:

  • 20 ದಿನಗಳ ಹಿಂದೆ ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು
  • ಆಸ್ಪತ್ರೆಯ ಎರಡು ಲಕ್ಷ ರೂ. ಬಿಲ್ ಪಾವತಿ ಮಾಡಿದ ಸಚಿವ ಜಮೀರ್

ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯ ಕುಟುಂಬ ವೈದ್ಯಕೀಯ ವೆಚ್ಚ ಭರಿಸಲು ಸಂಕಷ್ಟದಲ್ಲಿರುವ ಮಾಹಿತಿ ತಿಳಿದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ಎರಡು ಲಕ್ಷ ರೂ. ಬಿಲ್ ಪಾವತಿ ಮಾಡಿದ್ದಾರೆ.

- Advertisement -

ಅಷ್ಟೇ ಅಲ್ಲದೆ ಮೃತದೇಹವನ್ನು ಸ್ವಗ್ರಾಮವಾದ ಚಿಕ್ಕನಾಯಕನಹಳ್ಳಿಯ ಹುಳಿಯಾರು ಪಾಳ್ಯಕ್ಕೆ ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಆಂಬುಲೆನ್ಸ್ ವ್ಯವಸ್ಥೆ ಸಹ ಮಾಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಚಿಕ್ಕನಾಯಕನಹಳ್ಳಿ ಹುಳಿಯಾರು ಪಾಳ್ಯದ ಹಣ್ಣಿನ ವ್ಯಾಪಾರಿ ಜಬಿವುಲ್ಲಾ ಎಂಬುವರ ಪತ್ನಿ ಮೂವತ್ತು ವರ್ಷದ ಫಾತಿಮಾಬಿ ಎಂಬುವರು ತಿಪಟೂರು ಆಸ್ಪತ್ರೆಗೆ ದಾಖಲಾಗಿದ್ದರು. ಆ ನಂತರ ಬೆಂಗಳೂರಿಗೆ ಚಿಕಿತ್ಸೆಗೆ ಬಂದಿದ್ದ ಅವರು ಜೆಪಿ ನಗರದ ಕ್ಷೇಮ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ನಂತರ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದಲ್ಲಿ ಸ್ವತಂತ್ರ ಮಾಧ್ಯಮದ ಪಾಲಿಗೆ ಇದು ಅತ್ಯಂತ ಕರಾಳ ಕಾಲ

ಆಸ್ಪತ್ರೆ ಚಿಕಿತ್ಸೆ ವೆಚ್ಚ 3.50 ಲಕ್ಷ ರೂ. ಆಗಿದ್ದು ಕುಟುಂಬದವರ ಬಳಿ 50 ಸಾವಿರ ರೂ. ಮಾತ್ರ ಇದ್ದು, ಮೃತದೇಹ ತೆಗೆದುಕೊಂಡು ಹೋಗಲು 3 ಲಕ್ಷ ರೂ. ಪಾವತಿಸಬೇಕಿತ್ತು. ಪತ್ನಿಯನ್ನು ಕಳೆದುಕೊಂಡ ಪತಿ ಹಣ ಪಾವತಿ ಮಾಡಲು ಆಗದೆ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ತಕ್ಷಣ ಅಧಿಕಾರಿಗಳ ಮೂಲಕ ಆಸ್ಪತ್ರೆ ಆಡಳಿತ ಮಂಡಳಿ ಅವರ ಜತೆ ಚರ್ಚಿಸಿ ಸಚಿವರೇ ಅಧ್ಯಕ್ಷರಾಗಿರುವ ವಕ್ಫ್ ಕೌನ್ಸಿಲ್ ಫಾರ್ ವುಮೆನ್ಸ್ ಮೂಲಕ ಎರಡು ಲಕ್ಷ ರೂ. ಪಾವತಿ ಮಾಡಿ ಮೃತದೇಹ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲು ಆಂಬುಲೆನ್ಸ್ ವ್ಯವಸ್ಥೆ ಮಾಡಿಸಿದರು.

ಹಾಸನದಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸೇರಿಸಿ ಎಂದಾಗ ಆಂಬುಲೆನ್ಸ್ ಚಾಲಕ ಜೆಪಿ ನಗರದ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿದ್ದ, ಅಲ್ಲಿ ಚಿಕಿತ್ಸೆ ವೆಚ್ಚ ಪಾವತಿಸಲು ಆಗಿರಲಿಲ್ಲ. ಮೂರು ದಿನಗಳ ಹಿಂದೆ ತಾಯಿ ಅನಾರೋಗ್ಯದ ನಡುವೆಯೇ ಮಗು ನೋಡಲು ಹಂಬಲಿಸಿ ಮಗುವನ್ನು ಅಪ್ಪಿಕೊಂಡಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದ ಸಚಿವರು, ವಿಶೇಷ ಪ್ರಕರಣ ಎಂದು ಭಾವಿಸಿ ನೆರವು ಕಲ್ಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...