ಪೌರಕಾರ್ಮಿಕರಿಗೆ ಸಚಿವ ಕೃಷ್ಣ ಬೈರೇಗೌಡ ನಿಂದನೆ; ಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

Date:

ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಬೇಡಿಕೆ ವಿಚಾರವಾಗಿ ಸಚಿವ ಕೃಷ್ಣ ಬೈರೇಗೌಡ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. ‘ಸರಿಯಾಗಿ ಕೆಲಸ ಮಾಡದಿದ್ದರೂ, ಉದ್ಯೋಗವನ್ನು ಮಾತ್ರ ಖಾಯಂಗೊಳಿಸಬೇಕೇ’ ಎಂದು ಕೃಷ್ಣ ಬೈರೇಗೌಡ ಅವರು ಪೌರ ಕಾರ್ಮಿಕರನ್ನು ತುಚ್ಛವಾಗಿ ನಿಂದಿಸಿದ್ದು, ಅವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಪೌರ ಕಾರ್ಮಿಕರ ಸಂಕಷ್ಟಗಳು ಅರ್ಥವಾಗದಿದ್ದ ಮೇಲೆ, ನೀವು ಸಚಿವ ಹುದ್ದೆಯಲ್ಲಿ ಮುಂದುವರೆಯಲು ಅನರ್ಹರು, ರಾಜೀನಾಮೆ ಕೊಟ್ಟು ಹೋಗಿ ಎಂದು ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಶನಿವಾರ, ಬೆಂಗಳೂರಿನ ವಿವಿಧ ಭಾಗಗಳಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಕೆಲವು ಪೌರಕಾರ್ಮಿಕರು ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಪೌರ ಕಾರ್ಮಿಕರ ಬೇಡಿಕೆ ಮತ್ತು ಕೆಲಸದ ಕುರಿತು ನಿಂದನಾತ್ಮಕವಾಗಿ ಮಾತನಾಡಿದ ಕೃಷ್ಣ ಬೈರೇಗೌಡ, “ಸುಮಾರು 30%ರಷ್ಟು ಪೌರಕಾರ್ಮಿಕರು ಪ್ರತಿದಿನ ಕೆಲಸಕ್ಕೆ ಹಾಜರಾಗುವುದಿಲ್ಲ. ಮನೆಮನೆಗೆ ತೆರಳಿ ಕಸ ಸಂಗ್ರಹಿಸುವ ಕೆಲಸ ನಡೆಯುತ್ತಿಲ್ಲ. ಕೆಲಸಕ್ಕೆ ಬರದವರನ್ನು, ಬಂದರೂ ಕೆಲಸವನ್ನು ಸರಿಯಾಗಿ ನಿರ್ವಹಿಸದವರನ್ನು ಯಾಕೆ ಖಾಯಂ ಮಾಡಬೇಕು? ಮೊದಲು ಸರಿಯಾಗಿ ಕೆಲಸ ಮಾಡಿ” ಎಂದು ತಾಕೀತು ಮಾಡಿದ್ದಾರೆ.

ಸಚಿವರು ಪೌರ ಕಾರ್ಮಿಕರನ್ನು ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವಾರು ನಟ್ಟಿಗರು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣ ಬೈರೇಗೌಡರ ಹೇಳಿಕೆಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ಮುನ್ಸಿಪಲ್ ವರ್ಕರ್ಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಸಯ್ಯದ್ ಮುಜೀಬ್, “ನಿಜವಾಗಿಯೂ ಇಷ್ಟು ಪ್ರಮಾಣದ ಪೌರಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗದಿದ್ದರೆ ಅವರನ್ನು ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ತಪ್ಪು ಮಾಡುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಸಂಘ ವಿರೋಧಿಸುವುದಿಲ್ಲ; ಆದರೆ ಕೆಲವರ ಕರ್ತವ್ಯಲೋಪವನ್ನು ನೆಪ ಮಾಡಿಕೊಂಡು ಎಲ್ಲ ಪೌರಕಾರ್ಮಿಕರನ್ನೂ ಅವಮಾನಿಸುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಾಗರಾಜ್ ಹೆತ್ತೂರ್ ಅವರು ಸಚಿವರ ಹೇಳಿಕೆಯನ್ನು ಖಂಡಿಸಿದ್ದು, “ಮೊದಲು ಪೌರ ಕಾರ್ಮಿಕರನ್ನು ಮನುಷ್ಯರು ಅನ್ನೋ ಥರ ನೋಡೋದನ್ನು ಕಲೀರಿ. ಪೌರಕಾರ್ಮಿಕರು ಒಂದು ದಿನ ಕೆಲಸ ನಿಲ್ಲಿಸಿದರೂ ಬೆಂಗಳೂರಿನ ಸ್ವಚ್ಛತಾ ವ್ಯವಸ್ಥೆ ಸಂಪೂರ್ಣವಾಗಿ ಕುಸಿಯುವಷ್ಟು ಅವರ ಸೇವೆ ಮಹತ್ವದ್ದಾಗಿದೆ. ಕಡಿಮೆ ವೇತನದಲ್ಲಿ ಕಠಿಣ ಕೆಲಸ ನಿರ್ವಹಿಸುವ ಕಾರ್ಮಿಕರ ನೋವನ್ನು ಅರ್ಥಮಾಡಿಕೊಳ್ಳದೆ ಅಧಿಕಾರದ ಧಾಟಿಯಲ್ಲಿ ಮಾತನಾಡುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಅವರು, “ಭಾರತದಲ್ಲಿ ಸ್ವಚ್ಛತೆ ಮತ್ತು ‘ಕಸ’ದ ಕೆಲಸವನ್ನು ನಿರ್ದಿಷ್ಟ ಸಮುದಾಯಗಳ ಮೇಲೆ ಶತಮಾನಗಳಿಂದ ಹೊರಿಸಲಾಗಿದೆ. ಪೌರಕಾರ್ಮಿಕರ ಘನತೆ ಮತ್ತು ಸಾಮಾಜಿಕ ಸ್ಥಾನಮಾನವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪೌರ ಕಾರ್ಮಿಕರ ಸಾಮಾಜಿಕ ಪರಿಸ್ಥಿತಿ ಮತ್ತು ಅವರ ಕೆಲಸದ ಅಭದ್ರತೆ ಅರ್ಥವಾಗದ ಸಚಿವರು ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಯತಿರಾಜ್ ಬ್ಯಾಲಹಳ್ಳಿ ಅವರು, “ಸಚಿವ ಕೃಷ್ಣ ಬೈರೇಗೌಡ ಅವರು ಮೂರು ಕ್ರಮಗಳನ್ನು ಕೈಗೊಳ್ಳಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಕನಿಷ್ಠ ಒಂದು ವಾರ ಪೌರ ಕಾರ್ಮಿಕರಾಗಿ ಕೆಲಸ ಮಾಡಿ ಅವರ ಕಷ್ಟವನ್ನು ಅರ್ಥಮಾಡಿಕೊಳ್ಳಬೇಕು ಹಾಗೂ ಮೇಲ್ಮಧ್ಯಮ ವರ್ಗವನ್ನು ಮೆಚ್ಚಿಸುವ ರಾಜಕೀಯ ಪ್ರದರ್ಶನಗಳನ್ನು ನಿಲ್ಲಿಸಿ ಮಾನವೀಯತೆಯನ್ನು ಪ್ರದರ್ಶಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಹೋರಾಟಗಾರ ವಿ.ಎಲ್ ನರಸಿಂಹಮೂರ್ತಿ ಕೂಡ ಸಚಿವರ ಮಾತಿನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಪೌರಕಾರ್ಮಿಕರ ಕೆಲಸದ ಸ್ವರೂಪ ಮತ್ತು ಅವರು ಎದುರಿಸುವ ಅಪಾಯಗಳನ್ನು ಅರಿತಿದ್ದರೆ ಸಚಿವರು ಇಷ್ಟು ಕಠಿಣವಾಗಿ ಮಾತನಾಡುತ್ತಿರಲಿಲ್ಲ. ಪೌರಕಾರ್ಮಿಕರ ವೃತ್ತಿಯ ಸ್ವರೂಪ ಎಂತದ್ದು ಎನ್ನುವ ಕನಿಷ್ಠ ತಿಳುವಳಿಕೆ ನಿಮಗೆ ಇದ್ದಿದ್ದರೆ ಇಷ್ಟು ದರ್ಪದಿಂದ ಮಾತನಾಡುತ್ತಿರಲಿಲ್ಲ” ಎಂದು ಟೀಕಿಸಿದ್ದಾರೆ.

ಗುರುವೇ ಹೆಜ್ಜಾಜಿ ಅವರೂ ಸಚಿವರ ವರ್ತನೆಯನ್ನು ಪ್ರಶ್ನಿಸಿದ್ದಾರೆ. “ಬೆಂಗಳೂರಿನ ನಗರಾಭಿವೃದ್ಧಿ ವಿಚಾರಗಳಲ್ಲಿ ಸಚಿವರ ಕಾರ್ಯವೈಖರಿಯ ಕುರಿತು ಈ ಹಿಂದೆ ಹಲವು ಬಾರಿ ಟೀಕೆ ಮಾಡಿದ್ದೇನೆ. ಈಗ, ಪೌರಕಾರ್ಮಿಕರ ಎದುರು ಸಚಿವರು ತೋರಿದ ಧಾಟಿ ತಮ್ಮಲ್ಲಿ ಮತ್ತಷ್ಟು ಅಸಮಾಧಾನ ಮೂಡಿಸಿದೆ” ಎಂದು ಹೇಳಿದ್ದಾರೆ.

ಯಾರಾದರೂ ಕರ್ತವ್ಯಕ್ಕೆ ಹಾಜರಾಗದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳುವುದು ಆಡಳಿತದ ಜವಾಬ್ದಾರಿ. ಆದರೆ ಆ ಕ್ರಮ ಮತ್ತು ಇಡೀ ವೃತ್ತಿಯನ್ನೇ ಅವಮಾನಿಸುವ ಭಾಷೆಯ ನಡುವೆ ಸ್ಪಷ್ಟವಾದ ವ್ಯತ್ಯಾಸವಿದೆ. ಪೌರಕಾರ್ಮಿಕರ ಸೇವೆಯನ್ನು ಗೌರವಿಸುವುದರ ಜೊತೆಗೆ, ಕೆಲಸಕ್ಕೆ ಗೈರಾಗುವವರ ವಿರುದ್ಧ ಪಾರದರ್ಶಕ ಕ್ರಮ ಕೈಗೊಳ್ಳುವ ವ್ಯವಸ್ಥೆ ರೂಪಿಸುವುದು ಸರ್ಕಾರದ ಕೆಲಸವಾಗಬೇಕಿದೆ.

ಪ್ರತಿದಿನ ನಗರದ ಕಸವನ್ನು ಮನೆಗಳಿಂದ ಹೊರತೆಗೆದು, ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಸಾವಿರಾರು ಪೌರಕಾರ್ಮಿಕರ ಸೇವೆ ನಗರದ ಆರೋಗ್ಯ ಮತ್ತು ಸಾರ್ವಜನಿಕ ಜೀವನಕ್ಕೆ ನೇರವಾಗಿ ಸಂಬಂಧಿಸಿದೆ. ಹೀಗಾಗಿ, ಅವರ ಕರ್ತವ್ಯದ ಬಗ್ಗೆ ಪ್ರಶ್ನೆ ಕೇಳುವ ಹಕ್ಕು ಸರ್ಕಾರಕ್ಕಿದ್ದರೂ, ಅದೇ ವೇಳೆ ಅವರ ಘನತೆ ಮತ್ತು ಹಕ್ಕುಗಳನ್ನು ರಕ್ಷಿಸುವ ಜವಾಬ್ದಾರಿಯೂ ಸರ್ಕಾರಕ್ಕಿದೆ. ಇದೇ ಕಾರಣಕ್ಕೆ ಕೃಷ್ಣ ಬೈರೇಗೌಡರ ಹೇಳಿಕೆ ಇದೀಗ ರಾಜಕೀಯ ಟೀಕೆಯಷ್ಟೇ ಅಲ್ಲದೆ, ‘ನಗರವನ್ನು ಸ್ವಚ್ಛವಾಗಿಡುವವರನ್ನು ನಾವು ಯಾವ ರೀತಿಯಲ್ಲಿ ನೋಡುತ್ತೇವೆ?’ ಎಂಬ ಸಾಮಾಜಿಕ ಪ್ರಶ್ನೆಯನ್ನೂ ಮುನ್ನೆಲೆಗೆ ತಂದಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...