ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ; ಆರ್‌ಎಸ್‌ಎಸ್‌ ಬೆಂಬಲಿಗ ದಿನೇಶ್‌ ಬಂಧನ

Date:

ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆಗಳಿವೆ.

- Advertisement -

ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ, ಸಂಘಪರಿವಾರದ ಕಾರ್ಯಕರ್ತರು ಪ್ರಿಯಾಂಕ್‌ ಖರ್ಗೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ, ಬೆದರಿಕೆ, ನಿಂದನೆಗೆ ಇಳಿದಿದ್ದರು. ಕೆಲವು ಪುಂಡರು ತಮಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಅಶ್ಲೀಲವಾಗಿ ನಿಂದಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಸೋಲಾಪುರ ಮೂಲದ ದಿನೇಶ್‌ ನರೋಣಿ ಎಂದು ಹೆಸರಿಸಲಾಗಿತ್ತು. ಆದರೆ, ಆರೋಪಿಯ ಬಂಧನಕ್ಕಾಗಿ ಬೆಂಗಳೂರು ಮತ್ತು ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು.

ಈ ಲೇಖನ ಓದಿದ್ದೀರಾ?: RSS- ದೇಶಭಕ್ತರ ಸಂಘಟನೆಯೇ! ಯಶವಂತ್ ಶಿಂದೆ ಅಫಿಡವಿಟ್ ಹೇಳುತ್ತಿರುವುದೇನು?

ಇದೀಗ, ಆರೋಪಿ ದಿನೇಶ್‌ನನ್ನು ಲಾತೂರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತ, ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆ ಮಾಡಿದ ಬಳಿಕ ಸೋಲಾಪುರದಿಂದ ಲಾತೂರ್‌ಗೆ ಪರಾರಿಯಾಗಿದ್ದನು ಎಂದು ವರದಿಯಾಗಿದೆ.

ಆರೋಪಿಯನ್ನು ಕಲಬುರಗಿ ಪೊಲೀಸ್‌ ಠಾಣೆಯಲ್ಲಿ ಇರಿಸಲಾಗಿದೆ. ರಾತ್ರಿಯ ವೇಳೆಗೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್‌ ಠಾನೆಗೆ ಕರೆತರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...