ಆರ್‌ಎಸ್‌ಎಸ್‌ ಬಗ್ಗೆ ಮುಖ್ಯಮಂತ್ರಿಗೆ ಮತ್ತೊಂದು ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

Date:

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಇತ್ತೀಚೆಗೆ ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯಿಸಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್ಎಸ್‌ ಕುರಿತು ಮುಖ್ಯಮಂತ್ರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

- Advertisement -

ಈ ಪತ್ರದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪತ್ರದಲ್ಲಿ ಏನಿದೆ?

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರುಗಳಿಗೆ ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾರ “ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ.” ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!

ಆದರೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ.

ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಹಾಗೂ ಇದನ್ನು ಉಲ್ಲಂಘಿಸುವ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...