ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಸೂಚನೆ

Date:

Advertisements

ಅಪಾಯಕಾರಿ ಸಿಎಚ್ ಪೌಡರ್‌ ಮಿಕ್ಸಿಂಗ್ ಬಗ್ಗೆ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಸೇಂದಿ ಮಾರಾಟವಾಗದಂತೆ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಸೂಚನೆ ನೀಡಿದ್ದಾರೆ.

ಇಂದು ವಿಧಾನಸೌಧದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ತಿಮ್ಮಾಪೂರ ಅವರು, ರಾಯಚೂರು ಸೇರಿದಂತೆ ಆಂಧ್ರ, ತೆಲಂಗಾಣ ಗಡಿಯಲ್ಲಿ ನಿಷೇಧಿತ ಸಿಹೆಚ್ ಪೌಡರ್ ಮಿಕ್ಸಿಂಗ್‌ನಿಂದ ಸೇಂದಿ ತಯಾರಿಸುವವರ ಮೇಲೆ ಹದ್ದಿನ ಕಣ್ಣಿಡಬೇಕು. ಸಿಹೆಚ್ ಪೌಡರ್ ಮಿಕ್ಸಿಂಗ್‌ಗೆ ಅವಕಾಶ ಸಿಗದಂತೆ ಎಚ್ಚರವಹಿಸಬೇಕು. ಇಂಟಲಿಜೆನ್ಸ್ ವ್ಯವಸ್ಥೆ ಬಲಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರಿಯನ್ನು ಶಿಕ್ಷಿಸುವುದಾದರೆ ಕೋಮುವಾದಿಯನ್ನು ರಕ್ಷಿಸಬಹುದೇ?

Advertisements

ಇದರ ಜೊತೆಗೆ ಮಿಲಿಟರಿ ಮದ್ಯ ದುರುಪಯೋಗ ಹಾಗೂ ಮಿಲಿಟರಿ ಹೆಸರಿನಲ್ಲಿ ನಕಲಿ ಮದ್ಯ ಮಾರಾಟಕ್ಕೆ ಕಡಿವಾಣ, ಬಿಎಲ್‌ಸಿ ಪ್ರಕರಣಗಳಿಗೆ ಏಕರೂಪ ದಂಡ ವ್ಯವಸ್ಥೆ, ಅಕ್ರಮ ಮದ್ಯ ಸಾಗಣೆಗೆ ಕಡಿವಾಣ, ನಕಲಿ ಮದ್ಯ ಪತ್ತೆ ಹಚ್ಚಲು ಇಂಟಲಿಜೆನ್ಸ್ ವ್ಯವಸ್ಥೆ ಮತ್ತಷ್ಟು ಬಲಪಡಿಸುವುದು, ನಾನ್ ಪೊರ್ಟಬಲ್ ಸ್ಪಿರಿಟ್ಸ್ ದುರ್ಬಳಕೆ ಸೇರಿದಂತೆ ಇಲಾಖೆ ಸುಧಾರಣಾ ಕ್ರಮಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ ಸಿ ಜಾಫರ್, ಅಬಕಾರಿ ಆಯುಕ್ತರಾದ ವೆಂಕಟೇಶ್, MSIl ಎಂಡಿ ಮನೋಜ್ ಕುಮಾರ್, MSIl ನಿರ್ದೇಶಕರಾದ ಚಂದ್ರಪ್ಪ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X