ಸಚಿವ ಶಿವಾನಂದ ಪಾಟೀಲ್ ಅವರು ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ಈ ಸವಾಲನ್ನು ಸ್ವೀಕರಿಸಿ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ
“ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿ ಶಿವಾನಂದ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ಸಭಾಧ್ಯಕ್ಷ ಯು ಟಿ ಖಾದರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಸಹ ಸವಾಲು ಸ್ವೀಕರಿಸಿ ರಾಜೀನಾಮೆ ಸಲ್ಲಿಸಿದರೆ ತಮ್ಮ ರಾಜೀನಾಮೆ ಪತ್ರವನ್ನು ಅಂಗೀಕರಿಸಿ ಎಂದು ಸಭಾಧ್ಯಕ್ಷರಿಗೆ ಕೋರಿದ್ದಾರೆ. ಯತ್ನಾಳ್ ಏನು ಮಾಡುತ್ತಾರೆ ನೋಡಬೇಕು” ಎಂದು ಸಚಿವ ಶಿವಾನಂದ ಪಾಟೀಲ್ ಅವರ ಆಪ್ತ ಸಹಾಯಕ ಶಂಕರಗೌಡ ಬಿರಾದಾರ್ ಈದಿನ ಡಾಟ್ ಕಾಮ್‌ಗೆ ತಿಳಿಸಿದರು.

ಎರಡು ದಿನಗಳ ಹಿಂದೆ ಶಿವಾನಂದ ಪಾಟೀಲ್ ಅವರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದರು. “ಶಿವಾನಂದ ಪಾಟೀಲ್ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ” ಎಂದು ಸವಾಲು ಎಸೆದಿದ್ದರು.

