BREAKING NEWS | ಸಚಿವ ಶಿವಾನಂದ ಪಾಟೀಲ್ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ

Date:

ಸಚಿವ ಶಿವಾನಂದ ಪಾಟೀಲ್ ಅವರು ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

- Advertisement -

ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ಈ ಸವಾಲನ್ನು ಸ್ವೀಕರಿಸಿ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ

“ಬಸನಗೌಡ ಪಾಟೀಲ್ ಯತ್ನಾಳ್‌ ಅವರ ಸವಾಲನ್ನು ಸ್ವೀಕರಿಸಿ ಶಿವಾನಂದ ಪಾಟೀಲ್​ ಅವರು ಶಾಸಕ ಸ್ಥಾನಕ್ಕೆ ಸಭಾಧ್ಯಕ್ಷ ಯು ಟಿ ಖಾದರ್‌ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್‌ ಸಹ ಸವಾಲು ಸ್ವೀಕರಿಸಿ ರಾಜೀನಾಮೆ ಸಲ್ಲಿಸಿದರೆ ತಮ್ಮ ರಾಜೀನಾಮೆ ಪತ್ರವನ್ನು ಅಂಗೀಕರಿಸಿ ಎಂದು ಸಭಾಧ್ಯಕ್ಷರಿಗೆ ಕೋರಿದ್ದಾರೆ. ಯತ್ನಾಳ್‌ ಏನು ಮಾಡುತ್ತಾರೆ ನೋಡಬೇಕು” ಎಂದು ಸಚಿವ ಶಿವಾನಂದ ಪಾಟೀಲ್‌ ಅವರ ಆಪ್ತ ಸಹಾಯಕ ಶಂಕರಗೌಡ ಬಿರಾದಾರ್‌ ಈದಿನ ಡಾಟ್‌ ಕಾಮ್‌ಗೆ ತಿಳಿಸಿದರು.

ರಾಜೀನಾಮೆ 1
ಸ್ಪೀಕರ್ ಯು ಟಿ ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ ಶಿವಾನಂದ ಪಾಟೀಲ್

ಎರಡು ದಿನಗಳ ಹಿಂದೆ ಶಿವಾನಂದ ಪಾಟೀಲ್ ಅವರ ವಿರುದ್ಧ ಯತ್ನಾಳ್​ ವಾಗ್ದಾಳಿ ನಡೆಸಿದ್ದರು. “ಶಿವಾನಂದ ಪಾಟೀಲ್ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ” ಎಂದು ಸವಾಲು ಎಸೆದಿದ್ದರು.

ರಾಜೀನಾಮೆ ಪತ್ರ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...