ಓಟ್‌ ಬ್ಯಾಂಕ್‌ಗಾಗಿ ಹುಬ್ಬಳ್ಳಿ ಗಲಾಟೆ ಪ್ರಕರಣ ಕೈ ಬಿಡಲು ಸಚಿವರಿಂದ ಪ್ರಯತ್ನ: ಯತ್ನಾಳ ಕಿಡಿ

Date:

  • ದಾಳಿಕೋರರಿಗೆ ‘ಶ್ರೀ ರಕ್ಷೆ’ ನೀಡುತ್ತಿರುವ ಸರ್ಕಾರ
  • ಸರ್ಕಾರ ಗಲಭೆಕೋರರ ಪರ ಇದೆ ಎಂದು ಸಾಬೀತು

ಹಳೆ ಹುಬ್ಬಳ್ಳಿ, ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗಳಲ್ಲಿ ದಾಳಿ ಮಾಡಿದ ದಾಳಿಕೋರರ ವಿರುದ್ಧ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿರುವುದು ಇವರ ತುಷ್ಟೀಕರಣ ನೀತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಬಸವರಾಜ ಪಾಟೀಲ ಯತ್ನಾಳ ಟೀಕಿಸಿದ್ದಾರೆ.

- Advertisement -

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಬ್ರದರ್ಸ್ ವಿರುದ್ದ ಪ್ರಕರಣಗಳನ್ನು ಹಿಂಪಡೆಯಲು ಪತ್ರ ಬರೆದಿರುವ ಡಿ ಕೆ ಶಿವಕುಮಾರ್ ರಾಜ್ಯದ ಶಾಂತಿ ಕದಡುವ ಪುಂಡ ಪೋಕರಿಗಳಿಗೆ ನೇರ ಬೆಂಬಲ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

“ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡುವಂತೆ ಗೃಹ ಇಲಾಖೆಗೆ ‘ಪ್ರಭಾವಿ’ ಸಚಿವರೊಬ್ಬರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 1000 ಜನ ಸೇರಿ ಪೊಲೀಸ್ ಠಾಣೆಗೆ ಕಲ್ಲೆಸೆದಿದ್ದು ಮನ್ನಿಸಲಾಗದ ಅಪರಾಧ ಎಂದು ಈಗಾಗಲೇ ನ್ಯಾಯಾಲಯ ತೀರ್ಪು ನೀಡಿದೆ. ಇವರ ಜಾಮೀನು ಅರ್ಜಿಯನ್ನು ಘನತೆವೆತ್ತ ಕರ್ನಾಟಕ ಉಚ್ಚ ನ್ಯಾಯಾಲಯವೂ ಸಹ ತಿರಸ್ಕರಿಸಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುರ್ನಾಸು ಬಿಜೆಪಿ ಬಿಟ್ಟು ಒಂದಾಗುವರೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ? 

“ಶಾಂತಿ ಸೌಹಾರ್ದತೆ ಹಾಳು ಮಾಡುವ ನಿಟ್ಟಿನಲ್ಲಿ ಅಂದು ಪೊಲೀಸ್ ಠಾಣೆಗೆ ಕಲ್ಲೆಸೆದವರ ಮುಖಗಳನ್ನು ಸಿ.ಸಿ. ಕ್ಯಾಮೆರಾದಿಂದ ಪಡೆಯಬಹುದು ಹಾಗೂ ಅವರ ಚಹರೆಯನ್ನು ಅದರಿಂದ ಖಾತರಿ ಪಡೆಸಬಹುದು ಎಂದು ದ್ವಿಸದಸ್ಯ ಪೀಠ ಹೇಳಿತ್ತು. ಮುಂದುವರೆದು, ಅಲ್ಲಿ ನೆರೆದಿದ್ದ ಉದ್ರಿಕ್ತರ ಗುಂಪನ್ನು ಅವರ ಮೊಬೈಲ್ ರೆಕಾರ್ಡ್ಸ್ (ಟವರ್ ಲೊಕೇಶನ್) ಮೂಲಕ ಸಹ ಖಾತರಿಗೊಳಿಸಬಹುದು. ಹಾಗಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಹಾಳುಗೆಡವಿದ ಉದ್ರಿಕ್ತರಿಗೆ ಜಾಮೀನು ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿರಸ್ಕರಿಸಿ, ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತು ಹಿಡಿದಿತ್ತು” ಎಂದಿದ್ದಾರೆ.

“ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹುಬ್ಬಳ್ಳಿ ಗಲಾಟೆ ಪ್ರಕರಣವನ್ನು ಕೈ ಬಿಡಲು ಸರ್ಕಾರದ ಸಚಿವರೊಬ್ಬರು ಪ್ರಯತ್ನಿಸುತ್ತಿರುವುದು ಅಧಿಕಾರದ ದುರ್ಬಳಕೆ ಹಾಗೂ ಅಪರಾಧಗಳನ್ನು legitimize ಮಾಡುವ ಪ್ರಯತ್ನ ಎಂದರೆ ತಪ್ಪಾಗುವುದಿಲ್ಲ. ಸಾರ್ವಜನಿಕ ಆಸ್ತಿ ಪಾಸ್ತಿಯನ್ನು ಹಾಳು ಮಾಡಿದ ಪಟ್ಟಭದ್ರ ಹಿತಾಸಕ್ತಿಗಳನ್ನು ಜೈಲಿಗಟ್ಟಿ, ಸರ್ಕಾರಕ್ಕಾದ ನಷ್ಟವನ್ನು ಅವರಿಂದ ಭರಿಸುವ ಕ್ರಮ ಜರುಗಿಸುವುದನ್ನು ಬಿಟ್ಟು, ಅವರಿಗೆ ‘ಶ್ರೀ ರಕ್ಷೆ’ ನೀಡುತ್ತಿರುವುದು ಸರ್ಕಾರ ಗಲಭೆಕೋರರ ಪರ ಇದೆ ಎಂದು ಸಾಬೀತಾಗುತ್ತದೆ” ಎಂದು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಪದೇ ಪದೇ ಬಂಧನವಾದರೂ ಹಿಂಜರಿಯದ ವಿಪಕ್ಷಗಳು: ಮತ್ತೆ ಜಂತರ್ ಮಂತರ್‌ನತ್ತ ಹೆಜ್ಜೆಯಿಟ್ಟ ಇಂಡಿಯಾ ಒಕ್ಕೂಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ...

‘ಹಾಫ್ ಹೆಲ್ಮೆಟ್’ ನಿಷೇಧ: ಇನ್ಮುಂದೆ ನಿಯಮ ಮೀರಿದರೆ ಭಾರೀ ದಂಡ; ಸಂಚಾರ ಪೊಲೀಸರ ಬಿಗಿ ಕ್ರಮ

ದ್ವಿಚಕ್ರ ವಾಹನ ಸವಾರರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ...