ಚಿತ್ರದುರ್ಗ | ಮುರುಘಾಶ್ರೀ ವಿರುದ್ಧ ಹಣ ದುರ್ಬಳಕೆ ಆರೋಪ; ಡಿಸಿಗೆ ಮಾಜಿ ಸಚಿವ ಏಕಾಂತಯ್ಯ ದೂರು

Date:

ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವಣ್ಣನ ಕಂಚಿನ ಪುತ್ಥಳಿ ಕಾಮಗಾರಿಯಲ್ಲಿ ಅತ್ಯಾಚಾರ ಆರೋಪಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರು ಭಾರೀ ಅವ್ಯವಹಾರ ನಡೆಸಿದ್ದಾರೆ ಎಂದು ಮಾಜಿ ಸಚಿವ ಎಚ್‌ ಏಕಾಂತಯ್ಯ ಆರೋಪಿಸಿದ್ದಾರೆ. ಚಿತ್ರದುರ್ಗ ಚಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

- Advertisement -

ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಹಿಂಭಾಗದಲ್ಲಿ ಬಸವಣ್ಣ ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ. 28.20 ಕೋಟಿ ರೂ.ಗಳ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಸರ್ಕಾರದ ಅನುದಾನವನ್ನು ಶಿವಮೂರ್ತಿ ಮುರುಘಾ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಸರ್ಕಾರದ ಅನುದಾನದಲ್ಲಿ ಪುತ್ಥಳಿಗೆ 35 ಕೋಟಿ ರೂ. ನೀಡಲಾಗಿದೆ. ಅದರಲ್ಲಿ, ಈಗಾಗಲೇ 24.50 ಕೋಟಿ ರೂ. ವೆಚ್ಚವಾಗಿದೆ ಎಂದು ತಿಳಿದುಬಂದಿದೆ. ಟೆಂಡರ್ ಕರೆಯದೇ 4 ಕೋಟಿ ರೂ. ಮೌಲ್ಯದ ಕಬ್ಬಿಣ ಮತ್ತು ಸಿಮೆಂಟ್ ಖರೀದಿಸಿದ್ದಾರೆ. ನಿಯಮ ಮೀರಿ ಖಾಸಗಿ ಸಂಸ್ಥೆ ‘ಜಂಪನ್‌ ಕನ್‌ಸ್ಟ್ರಕ್ಷನ್‌ ಪ್ರೈವೆಟ್‌ ಲಿಮಿಟೆಡ್‌’ಗೆ ಗುತ್ತಿಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸರ್ಕಾರದ ಅನುದಾನವನ್ನು ಶಿವಮೂರ್ತಿ ಮುರುಘಾ ಅವರು ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಏಕಾಂತಯ್ಯ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...