ಮತದಾರರ ಹೆಸರು ಅಳಿಸಲು ಫಾರಂ-7 ದುರ್ಬಳಕೆ; ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

Date:

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಉದ್ದೇಶದಿಂದ ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಜಾಗೃತ ಕರ್ನಾಟಕ ಸಂಘಟನೆ ಆಗ್ರಹಿಸಿದೆ.

- Advertisement -

ಈ ಸಂಬಂಧ ಜಾಗೃತ ಕರ್ನಾಟಕದ ಪರವಾಗಿ ಅದಂ ಖಾನ್‌ ಅವರು ಇಂದು (ಅ. 1) ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದು, ಅನುಮಾನಾಸ್ಪದ ಹಾಗೂ ದೊಡ್ಡ ಪ್ರಮಾಣದಲ್ಲಿ ಸಲ್ಲಿಕೆಯಾಗಿರುವ ಫಾರಂ 7 ಅರ್ಜಿಗಳನ್ನು ವಿಧಾನಸಭಾ ಕ್ಷೇತ್ರವಾರು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಚುನಾವಣಾ ಆಯೋಗದ ಫಾರಂ 7ರ ಮಾರ್ಗಸೂಚಿಯ ಪ್ರಕಾರ, ಮತದಾರರ ಪಟ್ಟಿಯಲ್ಲಿ ಈಗಾಗಲೇ ನೋಂದಾಯಿತವಾಗಿರುವ ವ್ಯಕ್ತಿಯ ಹೆಸರನ್ನು ಅಳಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಆದರೆ, ಅರ್ಜಿಯಲ್ಲಿ ಉಲ್ಲೇಖಿಸುವ ಕಾರಣಗಳಿಗೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯ ಒದಗಿಸುವ ಹೊಣೆ ಅರ್ಜಿದಾರರದ್ದಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಸುಳ್ಳು ಘೋಷಣೆ ನೀಡುವವರಿಗೆ ಶಿಕ್ಷೆ ವಿಧಿಸಲು ಪ್ರಜಾಪ್ರತಿನಿಧಿ ಕಾಯ್ದೆ, 1950ರ ಸೆಕ್ಷನ್‌ 31ರಲ್ಲಿ ಅವಕಾಶವಿದೆ ಎಂದೂ ಉಲ್ಲೇಖಿಸಲಾಗಿದೆ.

ಭಾಲ್ಕಿ, ಬಬಲೇಶ್ವರ, ವಿಜಯಪುರ, ಬೆಳಗಾವಿ, ಮೂಡಿಗೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿ ಫಾರಂ-7 ಅರ್ಜಿಗಳು ಸಲ್ಲಿಕೆಯಾಗಿರುವುದು ಗಮನಕ್ಕೆ ಬಂದಿದೆ. ಕೆಲವು ಪ್ರಕರಣಗಳಲ್ಲಿ ಅರ್ಜಿ ಸಲ್ಲಿಸಿದವರಿಗೇ ಅದರ ಬಗ್ಗೆ ಮಾಹಿತಿ ಇಲ್ಲದಿರುವುದು ಹಾಗೂ ಅರ್ಜಿಯಲ್ಲಿರುವ ಸಹಿ ತಮ್ಮದಲ್ಲ ಎಂದು ಸಂಬಂಧಪಟ್ಟ ವ್ಯಕ್ತಿಗಳು ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪೂರ್ವಮುದ್ರಿತ ಫಾರಂ-7 ಅರ್ಜಿಗಳ ಬಳಕೆ, ಅರ್ಜಿದಾರರ ಗುರುತು ಹಾಗೂ ಸಹಿಗಳ ಕುರಿತು ಹಲವು ಅನುಮಾನಗಳಿವೆ. ಈ ಹಿನ್ನೆಲೆಯಲ್ಲಿ, ಅರ್ಜಿಗಳ ಹಿಂದೆ ಕೇಂದ್ರೀಕೃತ ವ್ಯವಸ್ಥೆ ಅಥವಾ ಸಂಘಟಿತ ಒಳಸಂಚು ಇದೆಯೇ ಎಂಬುದನ್ನು ತನಿಖೆ ನಡೆಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಶೇಷವಾಗಿ, ಒಂದೇ ವ್ಯಕ್ತಿ, ಗುಂಪು ಅಥವಾ ಸಂಸ್ಥೆಯಿಂದ ಅಸಾಮಾನ್ಯ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದರೆ ಅವುಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕು. ಫಾರಂ 7ರಲ್ಲಿ ನೀಡಿರುವ ಕಾರಣಗಳ ಸತ್ಯಾಸತ್ಯತೆಯನ್ನು ಸಂಬಂಧಪಟ್ಟ ಮತದಾರರು, ಬೂತ್‌ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಲಭ್ಯವಿರುವ ಅಧಿಕೃತ ದಾಖಲೆಗಳ ಮೂಲಕ ಸ್ವತಂತ್ರವಾಗಿ ದೃಢಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸುಳ್ಳು ಮಾಹಿತಿ, ನಕಲಿ ದಾಖಲೆ ಅಥವಾ ಉದ್ದೇಶಪೂರ್ವಕ ತಪ್ಪು ಘೋಷಣೆ ನೀಡಿ ಅರ್ಜಿ ಸಲ್ಲಿಸಿರುವುದು ತನಿಖೆಯಲ್ಲಿ ದೃಢಪಟ್ಟರೆ, ಸಂಬಂಧಪಟ್ಟವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 31 ಸೇರಿದಂತೆ ಅನ್ವಯಿಸುವ ಕಾನೂನುಗಳ ಅಡಿಯಲ್ಲಿ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು. ಇತರರ ಪರವಾಗಿ ಇಂತಹ ಅರ್ಜಿಗಳನ್ನು ಸಲ್ಲಿಸಿರುವ ವ್ಯಕ್ತಿಗಳು ಹಾಗೂ ಮಧ್ಯವರ್ತಿಗಳ ಪಾತ್ರವನ್ನೂ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: SIRನ ಎಲ್ಲಾ ಗೊಂದಲಗಳಿಗೆ ಜಾಗೃತ ಕರ್ನಾಟಕದ ʼಡಿಜಿಟಲ್ ಮಾರ್ಗದರ್ಶಿʼ

ಸೆಪ್ಟೆಂಬರ್‌ 23ರಂದು ಎಸ್‌ಐಆರ್‌ ಪ್ರಕ್ರಿಯೆಯ ಭಾಗವಾಗಿ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನವೆಂದು ಘೋಷಿಸಲಾಗಿದ್ದರೂ, ಸೆಪ್ಟೆಂಬರ್‌ 24ರಿಂದ 27ರವರೆಗೂ ಫಾರಂ 7 ಅರ್ಜಿಗಳು ಸಲ್ಲಿಕೆಯಾಗಿರುವುದಾಗಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ತೋರಿಸಲಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಅರ್ಜಿಗಳ ಸಲ್ಲಿಕೆ ಹಾಗೂ ಸ್ವೀಕಾರದ ಪ್ರಕ್ರಿಯೆಯ ಕುರಿತು ಸ್ಪಷ್ಟನೆ ನೀಡಬೇಕು ಮತ್ತು ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಬಹಿರಂಗಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಅಕ್ರಮ ಅರ್ಜಿಗಳ ಕುರಿತು ಜಿಲ್ಲಾವಾರು ಹಾಗೂ ವಿಧಾನಸಭಾ ಕ್ಷೇತ್ರವಾರು ಮಾಹಿತಿ, ತನಿಖೆಯ ಪ್ರಗತಿ ಮತ್ತು ಕೈಗೊಂಡ ಕ್ರಮಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವ ಮೂಲಕ ಚುನಾವಣಾ ಆಯೋಗ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಜಾಗೃತ ಕರ್ನಾಟಕ ಮನವಿ ಮಾಡಿದೆ. ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸುವ ಪ್ರಯತ್ನಗಳು ದೃಢಪಟ್ಟಲ್ಲಿ ನಿಷ್ಪಕ್ಷಪಾತವಾಗಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ವ್ಯವಸ್ಥೆಯ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕಾಪಾಡಬೇಕು ಎಂದು ಅದಂ ಖಾನ್‌ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...

SIR: ‘ನಮ್ಮ ಸಂವಿಧಾನ-ನಮ್ಮ ಹೋರಾಟ-ನಮ್ಮ ಹಕ್ಕು; ನಾವು ಹೋರಾಟಕ್ಕೆ ಸಿದ್ಧ’- ಪ್ರಕಾಶ್ ರಾಜ್

“SIR ಪ್ರಕ್ರಿಯೆ ನ್ಯಾಯಸಮ್ಮತವಾಗಿ ನಡೆಯುತ್ತಿದೆಯೇ? ಖಂಡಿತ ಇಲ್ಲ. ದಾಖಲೆಗಳ ಹೆಸರಿನಲ್ಲಿ ದೇಶದ...