ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಜೆಡಿಎಸ್​​ಗೆ 1 ಕ್ಷೇತ್ರ

Date:

ಕರ್ನಾಟಕ ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಒಟ್ಟು ನಾಲ್ಕು ಸೀಟುಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಇನ್ನುಳಿದ 1 ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರೆಸಿದೆ.

- Advertisement -

ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ, ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಟಿಕೆಟ್ ಕೆ.ಎಂ.ಸುರೇಶ್ ಅವರಿಗೆ ನೀಡಲಾಗಿದೆ. ಇನ್ನುಳಿದ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಎರಡಕ್ಕೆ ಬೇಡಿಕೆ ಇಟ್ಟಿತ್ತು. ಬೆಂಗಳೂರು ಶಿಕ್ಷಕರ ಮತ್ತು ಆಗ್ನೇಯ ಪದವೀಧರ ಪದವೀಧರ ಕ್ಷೇತ್ರಗಳನ್ನು ಜೆಡಿಎಸ್ ಕೇಳಿತ್ತು. ಆದರೆ ಆಗ್ನೇಯ ಪದವೀಧರ ಕ್ಷೇತ್ರವನ್ನು ಬಿಜೆಪಿಯ ಚಿದಾನಂದಗೌಡ ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ಬಿಜೆಪಿ ಬಿಟ್ಟುಕೊಟ್ಟಿಲ್ಲ. ಇನ್ನು ಕಾಂಗ್ರೆಸ್‌ನ ಪುಟ್ಟಣ್ಣ ಇರುವ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟು ಕೊಡಲಾಗಿದೆ.

ಇದನ್ನು ಓದಿದ್ದೀರಾ? ಕೊರಳಿಗೆ ಸುತ್ತಿಕೊಂಡ ಇರಾನ್ ಯುದ್ಧ; ಅಮೆರಿಕದಲ್ಲಿ ತೈಲ ಬಿಕ್ಕಟ್ಟು – ಟ್ರಂಪ್ ಜನಪ್ರಿಯತೆಗೆ ಕುತ್ತು

ಕಾಂಗ್ರೆಸ್ ಈಗಾಗಲೇ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಮರು ಸ್ಪರ್ಧೆ ಮಾಡಲಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದಿಂದ ಮೋಹನ್ ಲಿಂಬಿಕೈ, ಆಗ್ನೇಯ ಪದವೀಧರರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಶರಣಪ್ಪ ಮಟ್ಟೂರ್ ಅವರಿಗೆ ನೀಡಲಾಗಿದೆ.

2020ರಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗಳು ನಡೆದವು. ಎರಡು ಪದವೀಧರರ ಕ್ಷೇತ್ರಗಳಿಂದ ಎಸ್ ವಿ ಸಂಕನೂರು ಮತ್ತು ಚಿದಾನಂದ್ ಗೌಡ ಆಯ್ಕೆಯಾದ್ದರು. ಎರಡು ಶಿಕ್ಷಕರ ಕ್ಷೇತ್ರಗಳಿಂದ ಶಶಿಲ್ ನಮೋಶಿ ಮತ್ತು ಪುಟ್ಟಣ್ಣ ಆಯ್ಕೆಯಾದ್ದರು. ನಾಲ್ವರೂ ಬಿಜೆಪಿಯವರಾಗಿದ್ದರು. ಆದರೆ ಪುಟ್ಟಣ್ಣ ಕೇಸರಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ, ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಮರು ಆಯ್ಕೆಯಾದರು. ಇವರೆಲ್ಲರ ಅವಧಿಗಳು 2026ರ ನವೆಂಬರ್ 11 ರಂದು ಕೊನೆಗೊಳ್ಳುತ್ತವೆ. ಆದರೆ ಅವಧಿ ಮುಗಿಯುವ ಒಂದು ತಿಂಗಳ ಮೊದಲು ಚುನಾವಣೆಗಳನ್ನು ನಡೆಸಬೇಕು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ ಸೃಷ್ಟಿ, ನೈಸರ್ಗಿಕ, ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಸಿಎಂ ಡಿ.ಕೆ. ಶಿವಕುಮಾರ್

"ಕರ್ನಾಟಕವು ನೈಸರ್ಗಿಕ ಹಾಗೂ ಪಾರಂಪರಿಕ ಸಂಪತ್ತಿನಿಂದ ಶ್ರೀಮಂತವಾಗಿದೆ. ಹಂಪಿ, ಬೇಲೂರು, ಮಲೆನಾಡು,...

ಹವಾಮಾನ ವರದಿ: ಮುಂದಿನ 5 ದಿನ 12 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಹಿಂಗಾರು ಮತ್ತು ತಮಿಳುನಾಡು ಕರಾವಳಿಯಲ್ಲಾಗಿರುವ ಹವಾಮಾನ ಬದಲಾವಣೆಯ ಪ್ರಭಾವದಿಂದಾಗಿ ಮುಂದಿನ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ ವಲಸಿಗರೇ..?

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ...

‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ...